ಮಕ್ಕಳ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ
Team Udayavani, Apr 29, 2017, 12:18 PM IST
ಮೈಸೂರು: ಮಕ್ಕಳ ಸಂರಕ್ಷಣೆಗಾಗಿ ಇರುವ ಕಾಯ್ದೆಗಳ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಕ್ಕಳ ರಕ್ಷಣಾ ಸೊಸೈಟಿ, ಜಿಲ್ಲಾಡಳಿತ, ಜಿಪಂ, ವಾರ್ತಾ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯೂನಿಸೆಪ್ ಮಕ್ಕಳ ಸಂರಕ್ಷಣಾ ಯೋಜನೆ ಹಾಗೂ ಬೆಂಗಳೂರು ಪರ್ಬಿಂಡನ್ ಸಂಸ್ಥೆ ವತಿಯಿಂದ ಶುಕ್ರವಾರ ಕಲಾಮಂದಿರದ ಮನೆಯಂಗಳದಲ್ಲಿ ಆಯೋಜಿಸಿದ್ದ ಮಕ್ಕಳ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರ ಕುರಿತ ಸಂವಾದ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಸಂರಕ್ಷಣೆಯಲ್ಲಿ ಪೊಲೀಸರು, ಸರ್ಕಾರಿ ಅಧಿಕಾರಿಗಳ ಜತೆಗೆ ಮಾಧ್ಯಮಗಳು ಹಾಗೂ ಎನ್‌ಜಿಒಗಳ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ. ಅದರಲ್ಲೂ ಮಕ್ಕಳ ಸಂರಕ್ಷಣೆ ವಿಚಾರದಲ್ಲಿ ಮಾಧ್ಯಮಗಳು ತಮ್ಮದೇ ಸಿದ್ಧಾಂತ ಅನುಸರಿಸಬೇಕಿದ್ದು, ಮಕ್ಕಳ ಸಂರಕ್ಷಣೆ ವಿಷಯದಲ್ಲಿ ಮಾಧ್ಯಮಗಳು ಸಂವೇದನಾಶೀಲತೆ ಬೆಳೆಸಿಕೊಳ್ಳಬೇಕು.
ಮಕ್ಕಳ ಹಕ್ಕುಗಳು ಉಲ್ಲಂಘನೆಯಾದಾಗ ಸಂಪರ್ಕಿಸಬೇಕಾದ ಮಕ್ಕಳ ಸಹಾಯವಾಣಿ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಗಳು ಹಾಗೂ ಪೋಕೊÕà ಮತ್ತು ಜೆಜೆ ಕಾಯ್ದೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕಾದ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ.ರಾಧಾ ಮಾತನಾಡಿ, ಹೆಣ್ಣು ಮಗು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂದರ್ಭದಲ್ಲಿ ಸಹಜವಾಗಿ ಆಕೆ ಮಾನಸಿಕವಾಗಿ ಕುಗ್ಗಿರುತ್ತಾಳೆ. ಇಂತಹ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಮಾಧ್ಯಮಗಳು, ಅಧಿಕಾರಿಗಳು ಒಮ್ಮೆಲೆ ಆಕೆಯ ಮೇಲೆ ಒತ್ತಡ ಹೇರಿ ಪ್ರಶ್ನಿಸುವುದರಿಂದ ಆಕೆಯ ಮನಸ್ಸಿನ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತದೆ ಆ ರೀತಿ ಮಾಡಬಾರದು ಎಂದರು.
ಕೊಪ್ಪಳದ ಯುನಿಸೆಪ್ ಮಕ್ಕಳ ರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಕೆ. ರಾಘವೇಂದ್ರ ಭಟ್, ಮಕ್ಕಳ ಹಕ್ಕುಗಳು, ಹಿನ್ನೆಲೆ, ಪರಿಚಯ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012(ಪೋಕೊ) ಹಾಗೂ ಬಾಲ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರಲ್ಲಿ (ಜೆಜೆ ಕಾಯಿದೆ) ಮಾಧ್ಯಮದ ಉಲ್ಲೇಖ ಪರಿಚಯದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಬಳಿಕ ಬೆಂಗಳೂರು ಚೈಲ್ಡ್ ರೈಟ್ಸ್ ಟ್ರಸ್ಟ್ ನಿರ್ದೇಶಕ ವಾಸುದೇವ ಶರ್ಮ ಅವರು, ಮಕ್ಕಳ ಹಕ್ಕುಗಳ ಉಲ್ಲಂಘನೆ ವರದಿ ಪ್ರಕಟಣೆಯಲ್ಲಿ ಪತ್ರಿಕಾ ನೀತಿಸಂಹಿತೆ ಪರಿಚಯ ಮತ್ತು ಅದರಲ್ಲಿ ಮಾಧ್ಯಮದ ಪಾತ್ರ ಹಾಗೂ ಅದರತ್ತ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣ ವಿಚಾರವನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಶೈಲಜಾ, ಮಹಿಳಾ ಅಭಿವೃದ್ಧಿ ಅಧಿಕಾರಿ ಪದ್ಮಾ, ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿ ನಾಗರಾಜು, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.