ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ
Team Udayavani, Jul 4, 2018, 12:40 PM IST
ಮೈಸೂರು: ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸಾಮಾಜಿಕ ನ್ಯಾಯಪರ ವೇದಿಕೆ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ವರದಿ ಜಾರಿಗೆ ಆಗ್ರಹ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವೇದಿಕೆ ಸದಸ್ಯರು, ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಜನರು ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ವರ್ಗದವರಿಗೂ ಹೆಚ್ಚು ರಕ್ಷಣೆ ನೀಡುವ ನಿಟ್ಟಿನಲ್ಲಿ ಆದಿಜಾಂಬವ ಅಧಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು, ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕ್ರಮ ವಹಿಸಬೇಕಿದೆ ಎಂದು ಆಗ್ರಹಿಸಿದರು.
ಆದಿಜಾಂಬವ ಸಮುದಾಯ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಗುರುತಿಸಲ್ಪಟ್ಟಿದ್ದರೂ ಸಂವಿಧಾನಿಕವಾಗಿ ಯಾವುದೇ ಸೌಲಭ್ಯವೂ ಸಿಗುತ್ತಿಲ್ಲ. ಹೀಗೆ ಅವಕಾಶ ವಂಚಿತರಾಗಿ ಬದುಕುತ್ತಿರುವವರಿಗೆ ತಾರತಮ್ಯವಿಲ್ಲದೆ ಮೀಸಲಾತಿ ಸೌಲಭ್ಯ ಸಿಗಬೇಕಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ, ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವ ಜತೆಗೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ರಾಜಣ್ಣ, ಡಾ.ಆನಂದ ಕುಮಾರ್, ಪ್ರಕಾಶ್, ಶೋಭಾ, ಡಾ.ಶ್ರೀನಿವಾಸ ಮೂರ್ತಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.