ಗುರಿ ಸಾಧನೆಗೆ ನಿಧಾನಗತಿಯ ಹೆಜ್ಜೆ: ಬೇಸರ


Team Udayavani, Jan 27, 2017, 11:45 AM IST

mys2.jpg

ಮೈಸೂರು: ಜಗತ್ತಿನಲ್ಲೇ ಅತ್ಯುತ್ತಮ ಸಂವಿಧಾನ ಹೊಂದಿದ್ದರೂ ದೇಶ ಶೈಕ್ಷಣಿಕ, ಸಾಮಾಜಿಕ ಹಾಗೂ ಅರ್ಥಿಕವಾಗಿ ನಿರೀಕ್ಷಿತ ಗುರಿ ತಲುಪದೇ, ಇನ್ನೂ ಸಾಧನೆಯ ಹಾದಿಯಲ್ಲಿ ನಿಧಾನಗತಿಯಲ್ಲಿ ಹೆಜ್ಜೆ ಇಡುತ್ತಿರುವುದು ಬೇಸರ ಮತ್ತು ಆತಂಕದ ವಿಚಾರ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು.

ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತ ಆಯೋಜಿಸಿದ್ದ 68ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ವಿಶ್ವದಲ್ಲೇ ಅತ್ಯುತ್ತಮ ವಾದ ಪ್ರತ್ಯಕ್ಷ ಕಾರ್ಯ ರೂಪಕ್ಕಿಳಿಯುವ, ಪರಿವರ್ತನಾಶೀಲವಾದ, ಯುದ್ಧ ಕಾಲದಲ್ಲೂ ದೇಶವನ್ನು ಏಕಸೂತ್ರದಲ್ಲಿ ಬಂಧಿಸುವ ಸಾಮರ್ಥ್ಯವುಳ್ಳ ಸಂವಿಧಾನ ನಮ್ಮಲ್ಲಿದ್ದರೂ ಸಾಧನೆಯ ದಿಕ್ಕಿನಲ್ಲಿ ನಿಧಾನವಾದ ಹೆಜ್ಜೆ ಇಡುತ್ತಿರುವುದು ವಿಪರ್ಯಾಸ ಎಂದರು.

ಜಗತ್ತೇ ಮೆಚ್ಚುವ ಪ್ರಜಾಪ್ರಭುತ್ವ ವ್ಯವಸ್ಥೆಯ ಜತೆಗೆ ಪ್ರತಿ ಪ್ರಜೆಯ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವುಳ್ಳ ಹಕ್ಕುಗಳನ್ನು ನೀಡಲಾಗಿದ್ದರೂ ಇಂದಿಗೂ ದೇಶದಲ್ಲಿ ಅನಕ್ಷರತೆ, ಆರ್ಥಿಕ ಅಸಮಾನತೆ, ಅಸ್ಪೃಶ್ಯತೆ ಮೊದಲಾದ ವೈರುಧ್ಯಗಳಿರುವುದನ್ನು ನೋಡಿದರೆ ಸಂವಿಧಾನ ಬದ್ಧ ಹಕ್ಕು ಬಳಸಿಕೊಳ್ಳುವಲ್ಲಿ ನಾವು ವಿಫ‌ಲರಾಗಿದ್ದೇವೆ ಎಂಬ ಅನುಮಾನ ಮೂಡುತ್ತಿದೆ ಎಂದರು.

ಭಾರತದ ಸಂವಿಧಾನ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಹಿತವನ್ನು ಮಾತ್ರ ಕಾಯದೆ, ಇಡೀ ಭಾರತದ ಜನತೆಯ ಆಶೋತ್ತರಗಳನ್ನು ಈಡೇರಿಸುತ್ತದೆ. ಜಾತ್ಯತೀತ ರಾಷ್ಟ್ರದ ವಿಶಾಲ ಚಿಂತನೆಯ ತಳಹದಿಯ ಮೇಲೆ ಸ್ವಾತಂತ್ರÂ, ಸಮಾನತೆ ಮತ್ತು ಭಾತೃತ್ವದ ಸ್ಥಾಪನೆಗಾಗಿ ರೂಪಗೊಂಡ ಶ್ರೇಷ್ಠ ಸಂವಿಧಾನ ನಮ್ಮದಾಗಿದೆ ಎಂದು ಪ್ರಶಂಸಿಸಿದರು.

ಸರ್ವೋತ್ತಮ ಪ್ರಶಸ್ತಿ ಪ್ರದಾನ: ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲೆಯ ಆರು ಮಂದಿ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿಯನ್ನು ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಪ್ರದಾನ ಮಾಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಡಾ.ಕಾ.ರಾಮೇಶ್ವರಪ್ಪ, ವೈದ್ಯಾಧಿಕಾರಿ ಸುನೀತಾ, ಅಕ್ಷರ ದಾಸೋಹ ಕಾರ್ಯ ನಿರ್ವಾಹಕ ಅಧಿಕಾರಿ ಉದಯಕುಮಾರ್‌,

ಪಿರಿಯಾಪಟ್ಟಣ ತಹಶೀಲ್ದಾರ್‌ ಎಚ್‌.ಆರ್‌. ರಂಗರಾಜು ಅವರ ಪರವಾಗಿ ಶಿವಕುಮಾರ್‌, ಕೆ.ಆರ್‌.ಆಸ್ಪತ್ರೆ ಪ್ರಥಮ ದರ್ಜೆ ಸಹಾಯಕ ಡಿ. ಆನಂದ್‌, ಎಚ್‌.ಡಿ. ಕೋಟೆ ತಾಲೂಕು ಸಹಾಯಕ ಕೃಷಿ ಅಧಿಕಾರಿ ರವಿಕುಮಾರ್‌ ಅವರನ್ನು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಿಯಾಚಿನ್‌ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮನಾಗಿದ್ದ ಯೋಧ ಪಿ.ಎನ್‌.ಮಹೇಶ್‌ ಅವರ ತಾಯಿ ಸರ್ವಮಂಗಳಾ ಅವರನ್ನು ಸನ್ಮಾನಿಸಲಾಯಿತು.

ಶಾಸಕ ಜಿ.ಟಿ. ದೇವೇಗೌಡ, ಮೇಯರ್‌ ಎಂ.ಜೆ. ರವಿಕುಮಾರ್‌, ಉಪಮೇಯರ್‌ ರತ್ನ ಲಕ್ಷ್ಮಣ, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನಾ, ವಿವಿಧ ನಿಗಮ- ಮಂಡಳಿ ಅಧ್ಯಕ್ಷರಾದ ಮಲ್ಲಿಗೆ ವೀರೇಶ್‌, ಬಿ. ಸಿದ್ದರಾಜು, ಎಚ್‌.ಎ. ವೆಂಕಟೇಶ್‌, ಡಿ. ಧ್ರುವಕುಮಾರ್‌, ಜಿಲ್ಲಾಧಿಕಾರಿ ಡಿ. ರಂದೀಪ್‌, ನಗರ ಪೊಲೀಸ್‌ ಆಯುಕ್ತ ಡಾ. ಎ. ಸುಬ್ರಹ್ಮಣ್ಯೇಶ್ವರರಾವ್‌, ದಕ್ಷಿಣ ವಲಯ ಐಜಿಪಿ ವಿಫ‌ುಲ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ, ಜಿಪಂ ಸಿಇಒ ಪಿ. ಶಿವಶಂಕರ್‌, ನಗರಪಾಲಿಕೆ ಆಯುಕ್ತ ಜಗದೀಶ್‌, 
ಮುಡಾ ಆಯುಕ್ತ ಡಾ. ಮಹೇಶ್‌ ಮೊದಲಾದವರು ಸಮಾರಂಭದಲ್ಲಿ ಹಾಜರಿದ್ದರು.

ಆಕರ್ಷಕ ಪಥಸಂಚಲನ
68ನೇ ಗಣರಾಜ್ಯೋತ್ಸವ ಅಂಗ ವಾಗಿ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಪ್ರಧಾನ ದಳಪತಿ ಶಿವರಾಜು ಅವರೊಂದಿಗೆ ತೆರೆದ ವಾಹನದಲ್ಲಿ ತಂಡಗಳ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕರಿಸಿದರು.

ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ನಾಗರಿಕ ಪೊಲೀಸ್‌ ತಂಡ, ನಗರ ನಾಗರಿಕ ಪೊಲೀಸ್‌ ತಂಡ, ಸತೀಶ್‌ ನೇತೃತ್ವದ ನಗರ ನಾಗರಿಕ ಪೊಲೀಸ್‌ ಪಡೆ, ಕೇಶವಮೂರ್ತಿ ನೇತೃತ್ವದ ಸಿಟಿ ಪೊಲೀಸ್‌ ತಂಡ, ನಗರ ಸಂಚಾರ ಪೊಲೀಸ್‌, ರೈಲ್ವೆ ರಕ್ಷಣಾ ದಳ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಮಹಿಳಾ ನಾಗರಿಕ ಪೊಲೀಸ್‌ ಪಡೆ, ಗೃಹರಕ್ಷಕ ದಳ, ಕರ್ನಾಟಕ ಪೊಲೀಸ್‌ ಅಕಾಡೆಮಿ ತಂಡ, ಅಗ್ನಿಶಾಮಕ ಮತ್ತು ತುರ್ತು ಸೇವೆ ವಿಭಾಗ, ಅಬಕಾರಿ ಇಲಾಖೆ, ಎನ್‌ಸಿಸಿ ಭೂ ಸೇನಾ, ಎನ್‌ಸಿಸಿ ನೌಕದಳ, ಎನ್‌ಸಿಸಿ ವಾಯುದಳ, ಪೊಲೀಸ್‌ ಪಬ್ಲಿಕ್‌ ಶಾಲೆ, ಎಸ್‌ಎಆರ್‌ಎಸ್‌ ತಂಡ, ಜವಾಹರ್‌ ನವೋದಯ ವಿದ್ಯಾಲಯ, ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ 30 ತಂಡಗಳು ಪಥಸಂಚಲನ ನಡೆಸಿದವು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.