ಮುದ್ರಾ ಅನುಷ್ಠಾನದಲ್ಲಿ ರಾಜ್ಯವೇ ಮೊದಲು

 ಬ್ಯಾಂಕ್‌ಗೆ ಆಗಮಿಸಿ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಿರಿ: ದಾಮೋದರನ್‌  ಸಾಲ ಸಂಪರ್ಕ ಕಾರ್ಯಕ್ರಮ

Team Udayavani, Oct 29, 2021, 6:01 PM IST

ಮುದ್ರಾ ಅನುಷ್ಠಾನದಲ್ಲಿ ರಾಜ್ಯವೇ ಮೊದಲು

ಮೈಸೂರು: ಸ್ವಯಂ ಉದ್ಯೋಗಗಳಿಗೆ ನೆರವಾಗುವ ಮುದ್ರಾ ಯೋಜನೆ ಅನುಷ್ಠಾನದಲ್ಲಿ ದೇಶದÇÉೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ ಉಪ ಪ್ರಧಾನ ವ್ಯವಸ್ಥಾಪಕ ಪಿ.ಸಿ.ದಾಮೋದರನ್‌ ಹೇಳಿದರು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌, ಭಾರತೀಯ ಸ್ಟೇಟ್‌ ಬ್ಯಾಂಕ್‌, ಕರ್ನಾಟಕ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ ಸಹಯೋಗದಲ್ಲಿ ಗುರುವಾರ ಮುಕ್ತಗಂಗೋತ್ರಿ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುದ್ರಾ ಯೋಜನೆಯಲ್ಲಿ 2020- 21 ನೇ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಈ ವರ್ಷದ ಸೆಪ್ಟೆಂಬರ್‌ ತಿಂಗಳ ತನಕ 15.37 ಲಕ್ಷ ಜನರ ಪೈಕಿ 8,510 ಮಂದಿಗೆ ಸಾಲ ನೀಡಿ ಮೊದಲ ಸ್ಥಾನದಲ್ಲಿದ್ದೇವೆ. ಅದೇ ರೀತಿ ಸ್ವನಿಧಿ ಯೋಜನೆಯಡಿ 1.25 ಲಕ್ಷ ರಸ್ತೆಬದಿ ವ್ಯಾಪಾರಿಗಳಲ್ಲಿ 1.03 ಲಕ್ಷ ಜನರಿಗೆ ಸಾಲ ವಿತರಣೆ ಮಾಡಿ ನಾಲ್ಕನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು. ವಂಚನೆ: ಸಾಲ ಕೊಡುತ್ತೇವೆಂದು ವಂಚಕರು ದೂರವಾಣಿ ಮೂಲಕ ಮಾಹಿತಿ ಪಡೆದು ವಂಚಿಸುತ್ತಿರುವುದು ನಡೆದಿದ್ದು, ಕೊಡಗು ಜಿÇÉೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚು ನಡೆದಿದೆ.

ಗ್ರಾಹಕರು ದೂರವಾಣಿ ಮೂಲಕ ಮಾಹಿತಿ ಕೊಡದೆ ನೇರವಾಗಿ ಬ್ಯಾಂಕ್‌ಗೆ ಆಗಮಿಸಿ ಸಂಬಂಧಿಸಿದವರನ್ನು ಸಂಪರ್ಕಿಸಬೇಕು ಎಂದು ಹೇಳಿದರು. ಎಸ್‌ಬಿಐ ಜನರಲ್‌ ಮ್ಯಾನೇಜರ್‌ ರವಿರಂಜನ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರವು ಅಮೃತ್‌ ಮಹೋತ್ಸವ ಪ್ರಯುಕ್ತ ಸರ್ಕಾರ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಸಿಗುವ ಸೇವೆಗಳಿಗೆ ಜನರಿಗೆ ಮನವರಿಕೆ ಮಾಡಿಕೊಡುವಂತೆ ಹೇಳಿದೆ. ವಿಶೇಷವಾಗಿ ಕಿಸಾನ್‌ ಕ್ರೆಡಿಟ್‌ ಅಗ್ರಿ ಗೋಲ್ಡ್‌ ಲೋನ್‌, ಪಿಎಂ ಸ್ವನಿಧಿ, ಸ್ಟಾರ್ಟ್‌ ಆಪ್‌ ಇಂಡಿಯಾ, ಸಬ್ಸಿಡಿ ಸಾಲ ತಲುಪಬೇಕಾಗಿದೆ. ನಿಗದಿತ ಸಮಯದೊಳಗೆ ಸಾಲ ಮಂಜೂರು ಮಾಡುವ ಜತೆಗೆ ಮರುಪಾವತಿ ಬಗ್ಗೆ ನೋಡಿಕೊಳ್ಳಬೇಕು.

ಇದನ್ನೂ ಓದಿ;- ನ.1ರಿಂದ ಸಲಗ ಯಶಸ್ಸು ಅಭಿಯಾನ

ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಕಡಿಮೆ ಪ್ರೀಮಿಯಂ ಮತ್ತು ಕಡಿಮೆ ಬಡ್ಡಿ ದರದಲ್ಲಿ ದೊರೆಯಲಿರುವ ಸಾಲ ಸೌಲಭ್ಯದ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಹೇಳಿದರು. ಪ್ರದರ್ಶನ ಮಳಿಗೆ ಉದ್ಘಾಟನೆ: ಸಾರ್ವಜನಿಕ ರಂಗದ ಬ್ಯಾಂಕ್‌ಗಳು ಸಾಲ ಸಂಪರ್ಕ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಪ್ರದರ್ಶನದ ಮಳಿಗೆಯನ್ನು ಸಂಸದ ಪ್ರತಾಪ್‌ ಸಿಂಹ ಉದ್ಘಾಟಿಸಿದರು. ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ, ಕೆನರಾ ಬ್ಯಾಂಕ್‌, ಕರ್ಣಾಟಕ ಬ್ಯಾಂಕ್‌, ಯೂಕೊ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡ, ಕಾವೇರಿ ಗ್ರಾಮೀಣ ಬ್ಯಾಂಕ್‌, ನಬಾರ್ಡ್‌, ಕೆವಿಐಸಿ, ಕೆವಿಐಬಿ, ರುಡ್‌ಸೆಟ್, ಖಾಸಗಿ ವಲಯದ ಬ್ಯಾಂಕ್‌ಗಳು ವಿವಿಧ ಸಾಲ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿದವು. ‌

ಸ್ವಯಂ ಉದ್ಯೋಗ ಮಾಡುವ ವರಿಂದ ಅರ್ಜಿಗಳನ್ನು ಸ್ವೀಕರಿಸಿ ಮಂಜೂರು ಮತ್ತು ತಾತ್ವಿಕ ಮಂಜೂರು ಪತ್ರಗಳನ್ನು ವಿತರಿಸಲಾಯಿತು. ಎಸ್‌ಬಿಐ ಡೆಪ್ಯುಟಿ ಜನರಲ್‌ ಮ್ಯಾನೇಜರ್‌ ಸುಮನಾ ದಾಸ್‌ ಗುಪ್ತಾ, ಉಪ ಪ್ರಧಾನ ವ್ಯವಸ್ಥಾಪಕ ಪಂಕಜ್‌ ಥಪ್ಲಿಯಾಲ…, ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಉಪ ಪ್ರಧಾನ ವ್ಯವಸ್ಥಾಪಕ ಜ್ಯೋತಿ ಕೃಷ್ಣನ್‌, ಕೆನರಾ ಬ್ಯಾಂಕ್‌ ಉಪ ಪ್ರಧಾನ ವ್ಯವಸ್ಥಾಪಕ ಐ.ಪಿ. ಮಿಥಾತ್ಥಾಯ, ಮುಖೇಶ್‌ ಕುಮಾರ್‌ ಝಾ, ಮಾರ್ಗದರ್ಶಿ ಬ್ಯಾಂಕ್‌ ಸಹಾಯಕ ಪ್ರಧಾನ ವ್ಯವಸ್ಥಾಪಕ ಪಿ.ಗೋಪಿನಾಥ ಶಾಸ್ತ್ರೀ ಹಾಜರಿದ್ದರು.

ಆತ್ಮನಿರ್ಭರ ಯೋಜನೆಯಡಿ ಉದ್ಯಮಿಗಳಿಗೆ ನೆರವು: ಸಂಸದ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕೃಷಿಕರು, ರೈತರು, ಸ್ವಯಂ ಉದ್ಯೋಗ ಮಾಡುವವರಿಗೆ ಬ್ಯಾಂಕ್‌ಗಳಿಂದ ಸಬ್ಸಿಡಿ ಸೇರಿ ಸಾಲ ಸೌಲಭ್ಯಗಳಿವೆ. ಬ್ಯಾಂಕ್‌ಗಳು ಸಾಲ ಸಂಪರ್ಕ ಕಾರ್ಯಕ್ರಮದ ಮೂಲಕ ಜನರನ್ನು ತಲುಪಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಆತ್ಮನಿರ್ಭರ ಯೋಜನೆಯಡಿ ದೇಸಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಮತ್ತು ಉದ್ಯಮಿಗಳಿಗೆ ನೆರವು ಕಲ್ಪಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.