2 ಲಕ್ಷ ಬೀಜದ ಚೆಂಡಿನಿಂದ ಬರಡು ಭೂಮಿ ಹಸಿರಾಗಿಸುವ ಕಾರ್ಯ


Team Udayavani, Jun 12, 2019, 3:00 AM IST

2lakh-bija

ಮೈಸೂರು: ನಾನು ಕೆರೆ ಕಟ್ಟಿರುವುದು ನನಗಲ್ಲ ನಿಮ್ಮಂತ ವಿದ್ಯಾರ್ಥಿಗಳಿಗೆ, ಯುವಕರಿಗಾಗಿ. ನಾನು ಸತ್ತ ನಂತರ ಕೆರೆಗಳನ್ನು ನೀವೆಲ್ಲ ಉಳಿಸಿ ಬೆಳಿಸಬೇಕು. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೆರೆ ಕಟ್ಟುವಂತೆ ನಿಮ್ಮ ಅಪ್ಪ ಅವ್ವನಿಗೆ ಒತ್ತಾಯಿಸಿ ಎಂದು ಕೆರೆಗಳ ನಿರ್ಮಾತೃ ಕಾಮೇಗೌಡ ಮಕ್ಕಳೊಂದಿಗೆ ಭಾವನತ್ಮಾಕವಾಗಿ ಮಾತನಾಡಿದರು.

ಜನ ಚೇತನ್‌ ಟ್ರಸ್ಟ್‌, ಸ್ವದೇಶಿ ಜಾಗರಣ ಮಂಚ್‌ ಸಹಯೋಗದಲ್ಲಿ ನಂಜುಮಳಿಗೆ ಸಮೀಪದ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “2 ಲಕ್ಷ ಚಮತ್ಕಾರಿ ಬೀಜದ ಚೆಂಡಿನಿಂದ ಬರಡು ಭೂಮಿಯನ್ನು ಹಸಿರು ಮಾಡುವ’ ಕಾರ್ಯಾಗಾರ ಹಾಗೂ ಬೀಜದುಂಡೆ ತಯಾರಿಕೆಗೆ ಚಾಲನೆ ನೀಡಿ ಮಾತನಾಡಿದರು.

ಶಿವನಿಗಿಂತ ವೃಕ್ಷ ದೊಡ್ಡದ್ದು, ವೃಕ್ಷಕ್ಕಿಂತ ಗಂಗಮ್ಮ ದೊಡ್ಡವಳು. ವೃಕ್ಷ-ಗಂಗಮ್ಮನನ್ನು ಉಳಿಸಿಕೊಳ್ಳಬೇಕು. ಇತ್ತೀಚಿಗೆ ಸರಿಯಾಗಿ ಮೋಡ ಕಟ್ಟುತ್ತಿಲ್ಲ. ಮಳೆ ಬೀಳುತ್ತಿಲ್ಲ. ಕೆರೆ ಕಟ್ಟೆಗಳು ಬತ್ತಿ ಹೋಗುತ್ತಿವೆ. ಹೀಗಾಗಿ ಮರ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ. ಈ ಮೂಲಕ ಮಳೆಯಾಗುವಂತೆ ಮಾಡಬೇಕು.

ಅದಕ್ಕಾಗಿ ಕೆರೆ, ಕಟ್ಟೆಗಳನ್ನು ಕಟ್ಟಿ ಮರ ಗಿಡಗಳನ್ನು ಬೆಳಸಬೇಕು. ಈ ಜವಾಬ್ದರಿಯನ್ನು ಯುವ ಪಿಳಿಗೆಯೇ ಹೊರಬೇಕು. ಮಕ್ಕಳು ಹಠ ಮಾಡಿ, ಉಪವಾಸ ಮಾಡಿ ಪೋಷಕರು ಕೆರೆ ಕಟ್ಟುವಂತೆ ಪ್ರೇರೇಪಿಸಬೇಕು. ಇಲ್ಲವಾದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡುವಂತೆ ಒತ್ತಾಯಿಸಿ ಎಂದು ಮಕ್ಕಳಿಗೆ ಕರೆಕೊಟ್ಟರು.

ನಾನೊಬ್ಬ ಕೆರೆ ಕಟ್ಟಿದರೆ ಪ್ರಯೋಜನವಿಲ್ಲ. ನೀವೆಲ್ಲ ಒಂದಾಗಬೇಕು. ನಿಮಗೆ ಸ್ಥಳ ಕೊಟ್ಟು ಮುಂದಕ್ಕೆ ಹೋಗುವಷ್ಟು ವಯಸ್ಸಾಗಿದೆ ನನಗೆ. ಆದ್ದರಿಂದ ನೀವೆಲ್ಲಾ ಕೆರೆ-ಕಟ್ಟೆ ಉಳಿವಿಗಾಗಿ ಪಣ ತೊಡಬೇಕು. ಸುಧಾರಣೆಗೆ ರಾಜಕಾರಣಿಗಳನ್ನು ನಂಬಿ ಕೂತರೆ ಪ್ರಯೋಜನವಿಲ್ಲ. ನಮ್ಮಂತೆ ಪ್ರಾಣಿ-ಪಕ್ಷಿಗಳಿಗೂ ನೀರು, ನೆರಳು ಬೇಕು. ಅದಿಲ್ಲದಿದ್ದರೆ ಪಾಪ ಅವು ತಾನೆ ಎಲ್ಲಿಗೆ ಹೋದಾವು ಎಂದರು.

ಜನಚೇತನ ಟ್ರಸ್ಟ್‌ ಅಧ್ಯಕ್ಷ ಪ್ರಸನ್ನ ಎನ್‌.ಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಿರುಗಾವಲಿ, ಕಾಲುವೆಗಳು ಮುಚ್ಚಿ ಹೋಗುತ್ತಿರುವ ಕಾರಣಕ್ಕೆ ನದಿಗಳು ಬತ್ತಿ ಹೋಗುತ್ತಿವೆ. ಇದಕ್ಕೆ ಹುಣಸೂರಿನ ಲಕ್ಷ್ಮಣ ತೀರ್ಥ ನದಿ ತಾಜಾ ಉದಾಹರಣೆ.

ಕಿರುಗಾವಲಿ, ಕಾವಲಿಗಳನ್ನು ಉಳಿಸಿಕೊಳ್ಳುವ ಮೂಲಕ ಉಪ ನದಿಗಳನ್ನು ಕಾಪಾಡಿಕೊಳ್ಳಬೇಕು. ಈ ಮೂಲಕ ನದಿಗಳನ್ನು ರಕ್ಷಣೆ ಮಾಡುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಕಾವೇರಿ ನದಿ ಉಳಿಸಿಕೊಳ್ಳಲು ಅನಿವಾರ್ಯ ಕ್ರಮ ತೆಗದುಕೊಳ್ಳಬೇಕಿದೆ ಎಂದು ತಿಳಿಸಿದರು. ಸ್ವದೇ ಜಾಗರಣ ಮಂಚ್‌ನ ರಾಜ್ಯ ಸಂಯೋಜಕ ಎನ್‌.ಆರ್‌.ಮಂಜುನಾಥ್‌ ಸೇರಿದಂತೆ ಮತ್ತಿತರಿದ್ದರು.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.