ರಂಗಭೂಮಿಗೆ ಮತ್ತೆ ಪುನಶ್ಚೇತನ ನೀಡಬೇಕು


Team Udayavani, May 28, 2017, 12:24 PM IST

mys1.jpg

ಮೈಸೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ರಂಗ ಚಟುವಟಿಕೆಗಳು ಸರ್ಕಾರದ ಆಶ್ರಯದಲ್ಲಿ ಉಸಿರಾಡುವ ಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಮತ್ತೂಮ್ಮೆ ಪುನಶ್ಚೇತನ ನೀಡಬೇಕಾದ ಅವಶ್ಯಕತೆ ಇದೆ ಎಂದು ಸಂಸದ ಡಾ.ಎಂ.ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು. 

ನಗರದ ಸಂವಹನ ಪ್ರಕಾಶನದ ವತಿಯಿಂದ ಅಗ್ರಹಾರದ ಜೆಎಸ್‌ಎಸ್‌ ಆಸ್ಪತ್ರೆ ಆವರಣದ ಡಾ. ಶಿವರಾತ್ರಿ ರಾಜೇಂದ್ರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿ.ಎ.ಶಂಕರ್‌ರ ಸಮಗ್ರ ನಾಟಕ ಸಂಪುಟ ಬಿಡುಗಡೆಗೊಳಿಸಿ ಮಾತನಾಡಿದರು.

ರಂಗಭೂಮಿ ಜನರಲ್ಲಿ ಯೋಚನಾ ಶಕ್ತಿ ಬೆಳೆಸಲ್ಲಿದ್ದು, ನಾಟಕ ನೋಡುವ ಪ್ರೇಕ್ಷಕರಲ್ಲೂ ಸಹ ಸೃಜನಶೀಲತೆ ಬೆಳೆಸಲಿದೆ. ಆದರೆ ಇಂದು ಜನರಲ್ಲಿ ಸೃಜನಶೀಲತೆ ಇಲ್ಲದಂತಾಗಿರುವುದರಿಂದ ಎಲ್ಲರೂ ಟಿವಿ ಮುಂದೆ ಕುಳಿತು ಒಂದೇ ಮಾದರಿಯ ಧಾರವಾಹಿಗಳನ್ನು ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಹೀಗಾಗಿ ಜನರನ್ನು ಇದರಿಂದ ಹೊರತರಬೇಕಾದಲ್ಲಿ ರಂಗ ಚಟುವಟಿಕೆಗಳು ಅತ್ಯಂತ ಕ್ರಿಯಾಶೀಲವಾಗಿರಬೇಕಿದೆ. ಅಲ್ಲದೆ ಪ್ರಸ್ತುತ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವಗಳಲ್ಲಿ ರಂಗಭೂಮಿ ಚಟುವಟಿಕೆಗಳು ಕ್ಷೀಣಿಸುತ್ತಿದ್ದು, ಈ ನಿಟ್ಟಿನಲ್ಲಿ ಯುವಕರನ್ನು ರಂಗಭೂಮಿಯತ್ತ ಸೆಳೆಯಬೇಕಿದೆ ಎಂದು ಹೇಳಿದರು.

ಅಲ್ಲದೆ ನಮ್ಮ ನಾಟಕಗಳು ಸ್ಥಳೀಯವಾಗಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ಪ್ರದರ್ಶನಗೊಳ್ಳಬೇಕಿದ್ದು, ಆ ಮೂಲಕ ಕನ್ನಡದ ನಾಟಕಗಳು ಮತ್ತೆ ಜೀವಂತವಾಗಿ ಎಲ್ಲೆಡೆ ಪ್ರದರ್ಶನಗೊಳ್ಳುವಂತೆ ನೋಡಿಕೊಳ್ಳಬೇಕಿದೆ. ಅದೇ ರೀತಿಯಲ್ಲಿ ಹೊರ ರಾಜ್ಯಗಳ ನಾಟಕಗಳು ಸಹ ನಮ್ಮಲ್ಲಿ ಪ್ರದರ್ಶನವಾಗ ಬೇಕಿದ್ದು, ಇದರಿಂದ ರಂಗಭೂಮಿ ಬೆಳವಣಿಗೆಗೆ ಅನುಕೂಲವಾಗಲಿದೆ.

ಇನ್ನೂ ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿರುವ ರಂಗಮಂದಿರಗಳು ದೊಡ್ಡದಾಗಿದ್ದು, ರಂಗ ಚಟುವಟಿಕೆಗಳಿಗಿಂತ ಇತರೆ ಸಾಂಸ್ಕೃತಿಕ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ನಾಟಕಗಳಿಗೆ ಮಾತ್ರ ಸೀಮಿತವಾದ ರಂಗಕೇಂದ್ರಗಳನ್ನು ಕಲ್ಪಿಸುವ ಸಲುವಾಗಿ ಮಿನಿ ರಂಗಮಂದಿರ ನಿರ್ಮಿಸಬೇಕಿದೆ ಎಂದರು.

ಶಾಸಕ ವಾಸು, ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್‌, ಹಿರಿಯ ರಂಗಕರ್ಮಿ ಪೊ›.ಎಚ್‌.ಎಸ್‌. ಉಮೇಶ್‌, ಲೇಖಕ ಡಿ.ಎ.ಶಂಕರ್‌, ಸಂವಹನ ಪ್ರಕಾಶನದ ಡಿ.ಎನ್‌.ಲೋಕಪ್ಪ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.