ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹ


Team Udayavani, Feb 19, 2020, 3:00 AM IST

naalegalige

ಮೈಸೂರು: ಕಾವೇರಿ ಹಾಗೂ ಕಬಿನಿ ಅಚ್ಚುಕಟ್ಟು ನಾಲೆಗಳಿಂದ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ನಗರದ ಕಾಡಾ ಕಚೇರಿ ಬಳಿ ಜಮಾಯಿಸಿದ ನೂರಾರು ರೈತರು ನೀರಾವರಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿದರು.

ಅಲ್ಲದೆ ನಾಲೆಗೆ ನೀರು ಬಿಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು. ನಂತರ ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ರೈತರನ್ನು ತಡೆದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿದ್ದು, ನೀರಿಲ್ಲದೇ ಭತ್ತ ಒಣಗುತ್ತಿದೆ. ಜನ, ಜಾನುವಾರುಗಳು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ.

ಕಬಿನಿ, ಕಾವೇರಿಯಲ್ಲಿ ನೀರಿದ್ದು, ನಾಲೆಗೆ ನೀರು ಬಿಡುವಂತೆ ಈಗಾಗಲೇ ಮೂರು ಬಾರಿ ನೀರಾವರಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಯಾವ ಪ್ರಯೋಜನವಾಗಲಿಲ್ಲ. ನೀರಾವರಿ ಅಧಿಕಾರಿಗಳು ನಾಲೆಗಳಿಗೆ ನೀರು ಬಿಡದೆ ಮೀನಮೇಷ ಎಣಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ನೀರು ಕೊಟ್ಟರೆ ರೈತರು ಬದುಕಿಕೊಳ್ಳುತ್ತಾರೆ. ಇಲ್ಲದಿದ್ದರೆ ರೈತರು ಸಾವನ್ನಪ್ಪುತ್ತಾರೆ.

ಅಧಿಕಾರಿಗಳು ಸ್ಥಳಕ್ಕಾಗಮಿಸುವವರೆಗೂ ಪ್ರತಿಭಟನೆ ಕೈ ಬಿಡಲ್ಲ. ನಿರ್ಧಾರ ಕೈಗೊಂಡ ನಂತರ ನಾವು ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಪಟ್ಟುಹಿಡಿದರು. ಬಳಿಕ ರೈತರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕಾಗಮಿಸಿದ ನೀರಾವರಿ ಅಧಿಕಾರಿಗಳು ಮಾತನಾಡಿ, ರೈತರು ಈಗಾಗಲೇ ನಾಲೆಗೆ ನೀರು ಬಿಡುವಂತೆ ಮನವಿ ಮಾಡಿದ್ದರು. ಆದ್ದರಿಂದ ಫೆ.25ರಿಂದ 15 ದಿನ ನೀರು ಬಿಡಲು ನಿರ್ಧರಿಸಲಾಗಿದೆ.

ನಂತರ 10 ದಿನ ನಿಲ್ಲಿಸಿ ನಂತರ 15 ದಿನ ನೀರು ಬಿಡಲು ನಿರ್ಧರಿಸಲಾಗಿದೆ. ಮತ್ತೆ 15 ದಿನ ಒಟ್ಟು ಮೂರು ಬಾರಿ ನೀರು ಬಿಡುವ ಭರವಸೆ ನೀಡಿದರು. ಅಧಿಕಾರಿಗಳು ನೀಡಿದ ಭರವಸೆ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಕೈ ಬಿಟ್ಟು ಸ್ಥಳದಿಂದ ತೆರಳಿದರು.ಅತ್ತಹಳ್ಳಿ ದೇವರಾಜು ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.