ಸ್ವಚ್ಛ ಸರ್ವೇಕ್ಷಣೆಗೆ ಕಾರ್ಯತಂತ್ರಕ್ಕೆ ವೆಬ್‌ಸೈಟ್‌ನ ಬಳಕೆ


Team Udayavani, Feb 13, 2018, 12:32 PM IST

m5-swachcha.jpg

ಮೈಸೂರು: ಸ್ವಚ್ಛ ಸರ್ವೇಕ್ಷಣೆಗೆ ಸಾರ್ವಜನಿರ ಪ್ರತಿಕ್ರಿಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯತಂತ್ರವನ್ನು ಬದಲಿಸಬೇಕಿದ್ದು, ಇದಕ್ಕಾಗಿ ಸಾರ್ವಜನಿಕರು ಮೀಸಲಿರುವ ವೆಬ್‌ಸೈಟ್‌ನ ಬಳಕೆ ಮಾಡಿಕೊಳ್ಳಬೇಕಿದೆ ಎಂದು ಪಾಲಿಕೆ ಆಯುಕ್ತ ಜಿ.ಜಗದೀಶ್‌ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಡಿ.ರಂದೀಪ್‌ ಅಧ್ಯಕ್ಷತೆಯಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣ್‌ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛತಾ ನಗರಿಯ ಸರ್ವೇಕ್ಷಣೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮುಖ್ಯವಾಗಿದ್ದು, ಹೀಗಾಗಿ ಜನರ ಅಭಿಪ್ರಾಯವನ್ನು ಹೆಚ್ಚಿಸುವ ಅಗತ್ಯವಿದೆ.

ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ವಚ್ಛ ಭಾರತ್‌ ಅಭಿಯಾನಕ್ಕೆ ಸಂಬಂಧಿಸಿದ www.swachhsurvekshan.org ವೆಬ್‌ಸೈಟ್‌ ಮೂಲಕ ಅಭಿಪ್ರಾಯಗಳನ್ನು ತಿಳಿಸುವ ಹಾಗೂ ಇದಕ್ಕಾಗಿಯೇ ಮೀಸಲಾದ ಕ್ಯೂಆರ್‌ ಕೋಡ್‌ ಬಳಕೆ ಮಾಡಿಕೊಳ್ಳಬೇಕಿದೆ.

ಸಾರ್ವಜನಿಕರು ಸ್ವಚ್ಛ ಸಮೀಕ್ಷೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಮಾರ್ಚ್‌ 10 ಕಡೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ 1969 ಟೋಲ್‌ ಫ್ರೀ ಸಂಖ್ಯೆ ಮೂಲಕ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಹೆಚ್ಚಿನ ಪ್ರತಿಕ್ರಿಯೆ ಸಂಗ್ರಹಿಸಬೇಕಿದೆ ಎಂದರು.

ಹೆಚ್ಚಾಗಿ ವೆಬ್‌ಸೈಟ್‌ ಬಳಸಿ: ಸ್ವಚ್ಛ ಸಮೀಕ್ಷೆಗೆ ನಾಗರೀಕರ ಅಭಿಪ್ರಾಯಗಳನ್ನು ಸಂಗ್ರಹಿಸಲು 1969 ಟೋಲ್‌ ಫ್ರೀ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ. ಆದರೆ ಈ ಟೋಲ್‌ ಫ್ರೀ ಸಂಖ್ಯೆಗೆ ಅನೇಕ ಬಾರಿ ಕರೆಮಾಡಿದರೂ, ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಚ್ಛ ಸಮೀಕ್ಷೆಗೆ ತಮ್ಮ ಅಭಿಪ್ರಾಯಗಳನ್ನು ನೀಡಲು ವೆಬ್‌ಸೈಟ್‌ ಹಾಗೂ ಸ್ವಚ್ಛತಾ ಆ್ಯಪ್‌ ಹೆಚ್ಚಾಗಿ ಬಳಸಬೇಕಿದೆ ಎಂದು ಮನವಿ ಮಾಡಿದರು.

ದಾಖಲೆ ಸಂಗ್ರಹಕ್ಕೆ ಮೆಚ್ಚುಗೆ: ಸ್ವಚ್ಛ ಸರ್ವೇಕ್ಷಣ್‌ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ನಗರಕ್ಕಾಗಮಿಸಿದ್ದು, ಸಮೀಕ್ಷೆ ಆರಂಭಿಸಿದ್ದಾರೆ. ಆದರೆ, ನಗರಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಸಮೀಕ್ಷೆಗೆ ಸಂಬಂಧಿಸಿದಂತೆ ಈಗಾಗಲೇ ಸಂಗ್ರಹಿಸಲಾಗಿರುವ ದಾಖಲೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ದಾಖಲೆ ಸಂಗ್ರಹ ಹಾಗೂ ಸ್ಥಳ ಪರಿಶೀಲನೆಯಲ್ಲಿ ಶೇ.100 ಅಂಕ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹದ ಬಗ್ಗೆ ಹೆಚ್ಚಿನ ನಿಗಾವಹಿಸಬೇಕಾದ  ಅಗತ್ಯವಿದ್ದು, ಇದರಿಂದ 800 ಅಂಕಗಳು ಬರಬೇಕಿದೆ ಎಂದರು.

10 ಲಕ್ಷ ವೀಕ್ಷಣೆ: ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಅವರು, ಸ್ವಚ್ಛ ನಗರಿಗೆ ಸಂಬಂಧಿಸಿದಂತೆ ನೀಡಿರುವ ಒಂದು ನಿಮಿಷದ ವೀಡಿಯೊ ಕ್ಲಿಪ್ಪಿಂಗ್‌ ಅನ್ನು 10 ಲಕ್ಷ ಜನರು ಇಷ್ಟಪಟ್ಟಿದ್ದಾರೆ. ಇದರ ಬಗ್ಗೆಯೂ ಸ್ವಚ್ಛ ಸರ್ವೇಕ್ಷಣೆ ಸಂದರ್ಭದಲ್ಲಿ ಮಾಹಿತಿ ನೀಡಲಿದ್ದು, ಇದರಿಂದಲೂ ಸ್ವಚ್ಛ ಸಮೀಕ್ಷೆಗೆ ಅನುಕೂಲವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಜಾಗೃತಿ ವಹಿಸಬೇಕಿದೆ: ಜಿಲ್ಲಾಧಿಕಾರಿ ಡಿ.ರಂದೀಪ್‌ ಮಾತನಾಡಿ, ಸ್ವಚ್ಛತಾ ಸಮೀಕ್ಷೆಗೆ ಸಂಬಂಧಿಸಿದಂತೆ ಆ್ಯಪ್‌ ಬಳಕೆ ಹಾಗೂ ಪ್ರಚಾರ ಕಾರ್ಯದಲ್ಲಿ ನಾವು ಈಗಾಗಲೇ ಯಶಸ್ವಿಯಾಗಿದ್ದೇವೆ. ಆದರೂ ಸಮೀಕ್ಷೆಗೆ ಅಗತ್ಯವಿರುವ ಅಂಕ ಕಡಿಮೆಯಾಗದಂತೆ ಎಚ್ಚರವಹಿಸಬೇಕಿದ್ದು, ಜನರ ಅಭಿಪ್ರಾಯ ಸಂಗ್ರಹದಿಂದ 800 ಅಂಕಗಳು ಬರಬೇಕಿದೆ.

ಹೀಗಾಗಿ 1969 ಟೋಲ್‌ ಫ್ರೀ ಸಂಖ್ಯೆಯ ಬದಲಿಗೆ ಸಾರ್ವಜನಿಕರು ವೆಬ್‌ಸೈಟ್‌ ಬಳಸಿಕೊಂಡು ಸ್ವಚ್ಛತಾ ಸಮೀಕ್ಷೆಗೆ ಅಗತ್ಯವಿರುವ ಅಂಕಗಳಿಕೆಯಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು. ಇದಕ್ಕೂ ಮುನ್ನ ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಪ್ರಮುಖರು ಸ್ವಚ್ಛತಾ ಸಮೀಕ್ಷೆಯಲ್ಲಿ ಹೆಚ್ಚು ಅಂಕಗಳಿಕೆಗಾಗಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಮಾದೇಗೌಡ, ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ಟಿ.ಸಿ.ಪೂರ್ಣಿಮಾ, ಜಿಎಸ್‌ಎಸ್‌ ಫೌಂಡೇಷನ್‌ನ ಶ್ರೀಹರಿ, ವಿಜಯ ವಿಠಲ ಶಿಕ್ಷಣ ಸಂಸ್ಥೆಯ ಆರ್‌. ವಾಸುದೇವ ಭಟ್‌, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.