ಸಿಎಂ ವಿರುದ್ಧ ಭಾರೀ ಅಂತರದಲ್ಲಿ ಗೆಲುವು: ಜಿಟಿಡಿ ವಿಶ್ವಾಸ
Team Udayavani, Mar 29, 2018, 2:53 PM IST
ಕೆ.ಆರ್.ನಗರ: ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭಾರೀ ಅಂತರದಿಂದ ಗೆದ್ದೇ ಗೆಲ್ಲುತ್ತೇನೆ ಎಂದು ಮಾಜಿ ಸಚಿವ ಶಾಸಕ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಿಪಡಿಸಿದರು. ಪಟ್ಟಣದ ಮೀನಾಕ್ಷಿ ಸಮೇತ ಅರ್ಕೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಮೂರು ದಿನಗಳ ಆಯೋಜಿಸಿದ್ದ ಚಂಡಿಕಾ ಹೋಮದಲ್ಲಿ ಪಾಲ್ಗೊಂಡು ಮಾತನಾಡಿದರು.
ವೈರಿಗಳ ಸಂಹಾರ ಮತ್ತು ಯುಗಾದಿಯ ಸಂತರ ರಾಜ್ಯಕ್ಕೆ ಉತ್ತಮ ಮಳೆ, ಬೆಳೆಯಾಗಿ ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದು ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ತಾಲೂಕಿನ ಜೆಡಿಎಸ್ ಮುಖಂಡ ಡಾ.ದೇವೇಂದ್ರ ಕುಮಾರ್ ನೇತೃತ್ವದಲ್ಲಿ ಈ ಪೂಜೆ ನೆರವೇರಿದೆ ಎಂದರು.
ಮೈಸೂರಿನಲ್ಲಿ ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿದ ಅವರು ಸಿದ್ದರಾಮಯ್ಯ ಜೆಡಿಎಸ್ ನಲ್ಲಿ ಇದ್ದಾಗ ಕಾಂಗ್ರೆಸ್ ಸೀಮೆಎಣ್ಣೆ, ಬಿಜೆಪಿ ಬೆಂಕಿಕಡ್ಡಿ ಒಂದು ಕಡ್ಡಿ ಗೀರಿದರೆ ಉರಿಯುತ್ತದೆ ಎಂದು ಹೇಳುತ್ತಿದ್ದವರು, ಇಂದು ಕಾಂಗ್ರೆಸ್ನ ಪರಮೋತ್ಛ ನಾಯಕನಂತೆ ಜೆಡಿಎಸ್ ಟೀಕಿಸುತ್ತಿರುವುದು ಅವರ ಅವನತಿಗೆ ಅವರೇ ಗುಂಡಿ ತೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಮಾಜಿ ಸಚಿವ ಹೆಚ್.ವಿಶ್ವನಾಥ್ ಪತ್ನಿ ಶಾಂತಮ್ಮ ವಿಶ್ವನಾಥ್, ಅಮಿತ್ ದೇವರಹಟ್ಟಿ ಪತ್ನಿ, ಡಾ.ದೇವೇಂದ್ರಕುಮಾರ್ ಮತ್ತು ಪತ್ನಿ ಮತ್ತು ಪುತ್ರಿ, ಪುರಸಭಾ ಸದಸ್ಯ ಕೆ.ಎಲ್.ಜಗದೀಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೈ.ಎಸ್.ಕುಮಾರ್, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್, ನವನಗರ ಬ್ಯಾಂಕ್ ಸದಸ್ಯ ಕೇಶವ, ದೇವಸ್ಥಾನದ ಪಾರುಪತ್ತೆದಾರೆ ಆರತಿ, ಜೆಡಿಎಸ್ ಕಾರ್ಯಕರ್ತರು ಮತ್ತು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.