ಜಮೀನಿಗೆ ಅಳವಡಿಸಿದ್ದ ತಂತಿ ಅಕ್ರಮ ತೆರವು


Team Udayavani, May 21, 2017, 12:02 PM IST

mys1.jpg

ಪಿರಿಯಾಪಟ್ಟಣ: ಜಮೀನಿಗೆ ಅಳವಡಿಸಿದ್ದ ತಂತಿ ಕಂಬಗಳನ್ನು ಅಕ್ರಮವಾಗಿ ಕೆಲವರು ಜೆಸಿಬಿಯಿಂದ ತೆರವುಗೊಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ತಾಲೂಕಿನ ಬೈಲಕುಪ್ಪೆ ಪೊಲೀಸ್‌ ಠಾಣಾಧಿಕಾರಿ ತನಿಖೆ ಕೈಗೊಂಡಿದ್ದಾರೆ.

ತಾಲೂಕಿನ ಆವರ್ತಿ ಗ್ರಾಮದ ಯೋಗೇಶ್‌ ಎಂಬುವರಿಗೆ ಸೇರಿದ ಮರಡಿಯೂರು ಗ್ರಾಮದಲ್ಲಿ ಸರ್ವೇ ನಂ.57ರಲ್ಲಿ 5.38 ಎಕರೆ ಜಮೀನಿಗೆ ಸಿಲ್ವರ್‌ ಗಿಡ ನೆಟ್ಟು ತಂತಿ ಹಾಗೂ ಕಲ್ಲು ಕಂಬಗಳನ್ನು ಅಳವಡಿಲಾಗಿತ್ತು. ಇದೇ ಜಮೀನಿನ ಪಕ್ಕದಲ್ಲಿ ಸರ್ಕಾರಿ ರಸ್ತೆ ಇದ್ದು, ರಸ್ತೆಯನ್ನು ತಾಲೂಕು ಭೂಮಾಪಕರಾದ ನಾರಾಯಣಸ್ವಾಮಿ ಹಾಗೂ ಕಂದಾಯ ಅಧಿಕಾರಿ ಸಿ.ಮಹೇಶ್‌ರ ಸಮ್ಮಖದಲ್ಲಿ ಕೆಲವು ತಿಂಗಳುಗಳ ಹಿಂದೆ ಸರ್ವೇ ಕಾರ್ಯ ಮಾಡಿ ಹದ್ದು ಬಸ್ತ್ ಮಾಡಿದ್ದರು.

ಯೋಗೇಶ್‌ ಎಂಬುವರಿಗೆ ಮೌಖೀಕವಾಗಿ ತಂತಿ ಕಂಬ ತೆಗೆಯಿರಿ ಎಂದು ಕಂದಾಯ ಅಧಿಕಾರಿ ತಿಳಿಸಿದ್ದರು. ಅದರಂತೆ ಅಳತೆ ಪ್ರಕಾರ ರಸ್ತೆ ಕಾಮಗಾರಿ ನಡೆಯುವಾಗ ತಾವೇ ತೆಗೆಯುತ್ತೇವೆಂದು ಯೋಗೇಶ್‌ ತಿಳಿಸಿದ್ದರು. ಇದುವರೆಗೆ ಸಹ ಕಂದಾಯ ಇಲಾಖೆಯಿಂದ ಯಾವುದೇ ಆದೇಶ ಬಾರದ ಕಾರಣ ಯೋಗೇಶ್‌ ವ್ಯವಸಾಯ ಮಾಡಿಕೊಂಡಿದ್ದರು.

ಅಕ್ರಮವಾಗಿ ನುಗ್ಗಿದರು?: ಆದರೆ, ಮರಿಡಿಯೂರು ಗ್ರಾಮದ ಪ್ರಕಾಶ್‌ ಅವರ ಮಗ ಸ್ವಾಮಿಕಣ್ಣ(ಜಾರ್ಜ್‌), ಕರ್ಪುಸ್ವಾಮಿಯರ ಮಗ ಶಿವು, ಚಲುವರಾಜರವರ ಮಗ ಗಣೇಶ್‌ ಎಂಬುವರು ಕಳೆದ ಮೇ 8ರಂದು ಗ್ರಾಮದಲ್ಲಿ ಯೋಗೇಶ್‌ ಇಲ್ಲದ ಸಮಯದಲ್ಲಿ ಅವರ ಜಮೀನಿಗೆ ಅಕ್ರಮವಾಗಿ ಮೂರು ಜನ ಪ್ರವೇಶಿಸಿ ಜೆಸಿಬಿಯಿಂದ 250 ತಂತಿ ಕಂಬ ಮತ್ತು ಸಿಲ್ವರ್‌ ಗಿಡಗಳನ್ನು ನಾಶಮಾಡಿದ್ದಾರೆ. 2 ಲಕ್ಷ ರೂ.ಗಿಂತ ಅಧಿಕ ಮೊತ್ತದ ಆಸ್ತಿಯನ್ನು ನಷ್ಟ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಠಾಣಾಧಿಕಾರಿ ರಾಮಚಂದ್ರ ನಾಯಕ ತಿಳಿಸಿದ್ದಾರೆ.

“ಮರಡಿಯೂರು ರಸ್ತೆ ಒತ್ತುವರಿ ನಿಜ’
ಮರಡಿಯೂರು ಗ್ರಾಮಕ್ಕೆ ಸೇರಿದ ಸರ್ವೇ ನಂ.57ರಲ್ಲಿ ಸಾರ್ವಜನಿಕರ ರಸ್ತೆ ಎರಡೂ ಕಡೆ ಒತ್ತುವರಿಯಾಗಿದೆ ಎಂದು ಕಂದಾಯ ಅಧಿಕಾರಿ ಸಿ.ಮಹೇಶ್‌ ಹಾಗು ತಾಲೂಕು ಭೂಮಾಪನ ಅಧಿಕಾರಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

“ಈ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ನಿಯಮಾನುಸಾರವಾಗಿ ರೈತರನ್ನು ಸಂಪರ್ಕಿಸಿ ರಸ್ತೆ ಬಿಡಿಸುವಷ್ಟರಲ್ಲಿ ಅಧಿಕಾರಿಗಳು ಮಾಡಬೇಕಾದ ರಸ್ತೆ ಜಾಗ ತೆರವು ಕೆಲಸವನ್ನು ಬೇರೆಯವರು ಮಾಡಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿಲ್ಲ’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.