ಆರ್‌ಬಿಐ ಅಧಿಕಾರಿಗಳ ಮನೆಗಳಲ್ಲಿ ಸರಣಿ ಕಳವು
Team Udayavani, Sep 19, 2017, 9:20 AM IST
ಮೈಸೂರು: ಮೂರು ಮನೆಗಳ ಬೀಗ ಮುರಿದು ಒಳ ನುಗ್ಗಿರುವ ಖದೀಮರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ನಗರದ ಮೇಟಗಳ್ಳಿ ಆರ್‌ಬಿಐ ಕಾಲೋನಿಯಲ್ಲಿ ನಡೆದಿದೆ. ಆರ್‌ಬಿಐ ಕಾಲೋನಿ ನಿವಾಸಿಗಳಾದ ಆರ್‌ಬಿಐ ನೋಟು ಮುದ್ರಣ ಘಟಕದ ವ್ಯವಸ್ಥಾಪಕ ಶ್ರವಣ ಪ್ರಕಾಶ್, ಆರ್‌ಬಿಐ ಅಧಿಕಾರಿಗಳಾದ ದಿನೇಶ್, ಹರೀಶ್‌ರ ಮನೆಯಲ್ಲಿ ಕಳ್ಳತನ ನಡೆದಿದೆ. ಒಟ್ಟು 320 ಗ್ರಾಂ ತೂಕದ ಚಿನ್ನಾಭರಣ ಕಳುವಾಗಿದೆ. ಪಿತೃ ಪಕ್ಷದ ಹಿನ್ನೆಲೆಯಲ್ಲಿ ಮೂವರು ಕುಟುಂಬ ಸಮೇತ ಊರಿಗೆ ತೆರಳಿದ್ದರು. ಇದನ್ನು ಗಮನಿಸಿರುವ ಖದೀಮರು ಈ ಕೃತ್ಯವೆಸಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಸಿಪಿ ಡಾ.ವಿಕ್ರಮ್‌ಆಮಟೆ, ಮೇಟಗಳ್ಳಿ ಠಾಣೆ ಪ್ರಭಾರ ಇನ್ಸ್‌ಪೆಕ್ಟರ್ ಅನಿಲ್‌ಕುಮಾರ್, ಶ್ವಾನದಳ, ಬೆರಳಚ್ಚು ತಂಡದ ಸಿಬಂದಿ ಪರಿಶೀಲನೆ ನಡೆಸಿದರು.
ಸ್ಥಳೀಯರಿಂದಲೇ ಕೃತ್ಯ?: ದಿನದ 24 ಗಂಟೆಗಳ ಕಾಲವೂ ಭದ್ರತಾ ಸಿಬಂದಿ ಇರುವ ಆರ್‌ಬಿಐ ಕಾಲೋನಿಯಲ್ಲಿ ನಡೆದಿರುವ ಸರಣಿ ಕಳ್ಳತನ ಸ್ಥಳೀಯರಲ್ಲಿ ಆತಂಕದ ಜತೆಗೆ ಅನು ಮಾನಕ್ಕೂ ಕಾರಣವಾಗಿದೆ. ಆರ್‌ಬಿಐ ಕಾಲೋನಿಗೆ ಸ್ಥಳೀಯ ನಿವಾಸಿಗಳನ್ನು ಹೊರತುಪಡಿಸಿ, ಹೊರಗಿನವರ ಪ್ರವೇಶಕ್ಕೆ ಅವಕಾಶವಿಲ್ಲ. ಅಲ್ಲದೆ ಕಾಲೋನಿಗೆ ಆಗಮಿಸುವ ಪ್ರತಿಯೊಬ್ಬರನ್ನೂ ಭದ್ರತಾ ಸಿಬಂದಿ ತಪಾಸಣೆ ನಡೆಸಿಯೇ ಒಳಗೆ ಬಿಡಲಿದ್ದಾರೆ. ಜತೆಗೆ ಕಾಲೋನಿಯಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗಿದೆ. ಹೀಗಾಗಿ ಸಾಕಷ್ಟು ಭದ್ರತೆ ನಡುವೆಯೂ ಕಾಲೋನಿಯಲ್ಲಿ ಸರಣಿ ಕಳ್ಳತನ ನಡೆದಿರುವುದರ ಹಿಂದೆ ಸ್ಥಳೀಯರ ಕೈವಾಡವಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.