ಕಾಂಗ್ರೆಸ್ ಅವಸಾನವಾಗುವ ಪಶ್ನೆಯೇ ಇಲ್ಲ
Team Udayavani, Jul 8, 2019, 3:00 AM IST
ಮೈಸೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಅವಸಾನವಾಗುವ ಪ್ರಶ್ನೆಯೇ ಇಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪ್ರದೇಶ ಸೇವಾದಳದ ರಾಜ್ಯಾಧ್ಯಕ್ಷ ಪ್ಯಾರಿಜಾನ್ ತಿಳಿಸಿದರು.
ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಕಾರ್ಯಕಾರಿಣಿ ಸಭೆಯಲ್ಲಿ ಸ್ವಾತಂತ್ರ್ಯ ಸೇನಾನಿ ಎನ್.ಎಸ್.ಹರ್ಡಿಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯದ ಹೋರಾಟಕ್ಕಾಗಿ ರೂಪುಗೊಂಡ ಕಾಂಗ್ರೆಸ್‌ಗೆ ನೂರಾರು ವರ್ಷಗಳ ಇತಿಹಾಸವಿದೆ. ಕೇವಲ ಕೆಲ ಸೋಲುಗಳಿಂದ ಪಕ್ಷ ಅವಸಾನವಾಗುವುದಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ನಮ್ಮದಾಗಿದ್ದು, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇವಾದಳ ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ಶ್ರಮವಹಿಸುವ ಅಗತ್ಯತೆ ಇದೆ ಎಂದು ಹೇಳಿದರು.
ಸರಣಿ ಸಭೆ ನಡೆಸಿ: ಮುಂದಿನ ದಿನಗಳಲ್ಲಿ ಪಕ್ಷವನ್ನು ತಳಹಂತದಿಂದ ಕಟ್ಟುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಸೇವಾದಳದ ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ದುಡಿಯುವ ಅಗತ್ಯತೆ ಹೆಚ್ಚಿದೆ. ಹಾಗಾಗಿ ಸರಣಿ ಸಭೆಯನ್ನು ನಡೆಸುವ ಮೂಲಕ ಪಕ್ಷವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಿದೆ ಎಂದರು.
ಸಂಜೆವರೆಗೂ ನಡೆದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬೂತ್ ಹಂತದಲ್ಲಿ ಬಲಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಸುಜಾತ ಉಳ್ಳಾಲ, ಮಾಜಿ ಶಾಸಕ ವಾಸು, ಜಿಲ್ಲಾ ಉಪಾಧ್ಯಕ್ಷ ಆರ್.ಪ್ರಕಾಶ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.