ನದಿಗಳಿಲ್ಲದೇ ನೀರಿಲ್ಲ, ನೀರಿಲ್ಲದೆ ನಾವಿಲ್ಲ

Team Udayavani, Feb 20, 2019, 7:30 AM IST

m3-nadi.jpg

ಮೈಸೂರು: ಮೈಯಲ್ಲಿನ ಮಲಿನವನ್ನು ತೊಳೆಯಲು ಗಂಗಾಸ್ನಾನ ಮಾಡುವುದು ಮುಖ್ಯವಲ್ಲ. ಅಂತರಂಗದ ಜ್ಞಾನಗಂಗೆಯ ಸ್ನಾನ ಮುಖ್ಯ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ತಿರುಮಕೂಡಲಿನಲ್ಲಿ ನಡೆದ 11ನೇ ಮಹಾ ಕುಂಭಮೇಳದ ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಎಲ್ಲಾ ನಾಗರಿಕತೆಗಳೂ ನದಿಗಳ ಅಕ್ಕಪಕ್ಕದಲ್ಲೇ ಬೆಳೆದು ಬಂದಿದೆ. ನದಿಗಳಿಲ್ಲದೇ ನೀರಿಲ್ಲ, ನೀರಿಲ್ಲದೆ ನಾವಿಲ್ಲ. ಜಗತ್ತಿನ ಸೃಷ್ಟಿ ಹಾಗೂ ಜಗತ್ತಿನ ವಿನಾಶಕ್ಕೂ ನೀರೆ ಕಾರಣ ಎಂದರು.

ನದಿ ಕೊಳೆಯಾದರೆ ಹೃದಯಾಘಾತ: ನೀರನ್ನು ಸರಿಯಾಗಿ ಬಳಸಿಕೊಂಡರೆ ಸೃಷ್ಟಿಯಾಗುತ್ತದೆ. ಅನಗತ್ಯವಾಗಿ ಬಳಸಿದರೆ ವಿನಾಶಕ್ಕೆ ಕಾರಣವಾಗುತ್ತದೆ. ಸ್ನಾನ ಮಾಡುವುದರಿಂದ ಮೈಯಲ್ಲಿನ ಮಲಿನ ತೊಳೆಯಬಹುದು. ಮನದ ಮಲಿನ ತೊಳೆಯಬೇಕಾದರೆ ಉಪಾಸನೆ ಅವಶ್ಯ. ನದಿಗಳು ದೇಹದ ಆರ್ಟರಿಸ್‌ಗಳಿದ್ದಂತೆ ಆರ್ಟರಿಸ್‌ಗಳನ್ನು ಚೆನ್ನಾಗಿಟ್ಟುಕೊಂಡರೆ ದೇಹ ಚೆನ್ನಾಗಿರುತ್ತೆ.

ಅದೇ ರೀತಿ ನದಿಗಳನ್ನು ಸ್ವತ್ಛವಾಗಿರಿಸಿಕೊಂಡರೆ ದೇಶ ಚೆನ್ನಾಗಿರುತ್ತೆ. ನದಿಗಳು ಕೊಳೆಯಾದರೆ ಹೃದಯಾಘಾತವಾಗುತ್ತದೆ ಎಂದರು. ಈ ಬಾರಿ ಅತ್ಯದ್ಭುತವಾಗಿ ಕುಂಭಮೇಳ ನಡೆದಿದೆ. ಲಕ್ಷಾಂತರ ಮಂದಿ ತ್ರಿವೇಣಿ ಸಂಗಮದಲ್ಲಿ ಮಿಂದಿದ್ದಾರೆ. ಹೀಗೆ ನದಿಯಲ್ಲಿ ಮಿಂದವರು ನಾಸ್ತಿಕ ಭಾವ ಬಿಟ್ಟು, ಆಸ್ತಿಕ ಭಾವದಿಂದ ಹೋಗೋಣ ಎಂದು ಹೇಳಿದರು.

ವಾಟಾಳು ಸೂರ್ಯ ಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಆಯೋಜಿಸುವ ತೀರ್ಮಾನ ಮಾಡಿದ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಬಾಲಗಂಗಾಧರನಾಥ ಸ್ವಾಮೀಜಿಯವರು ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಹಾಗೂ ನಮಗೆ ಸಿದ್ಧತೆಯ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚಿಸಿದ್ದರು. ಹಿಂದೆಲ್ಲಾ ಸರ್ಕಾರದಿಂದ ನೆರವು ಇಲ್ಲದಿದ್ದರಿಂದ ಬಹಳ ಕಷ್ಟಪಟ್ಟು ಸಿದ್ಧತೆ ಮಾಡಬೇಕಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ನೆರವು ಸಿಗುತ್ತಿರುವುರಿಂದ ಕುಂಭಮೇಳ ಯಶಸ್ವಿಯಾಗಿದೆ ಎಂದರು.

ಮೈಮನ ಶುದ್ಧವಿರಲಿ: ಕಾಗಿನೆಲೆ ಕನಕಗುರುಪೀಠ, ಮೈಸೂರು ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ ಮಾತನಾಡಿ, ಸ್ನಾನ ಮಾಡುವುದರಲ್ಲಿ ಎರಡು ವಿಧಗಳಿವೆ. ಒಂದು ಮೈ ತೊಳೆವ ಸ್ನಾನ. ಮತ್ತೂಂದು ಮನಸ್ಸು ತೊಳೆವ ಸ್ನಾನ. ನಾವು ಮನಸ್ಸು ತೊಳೆವ ಸ್ನಾನ ಮಾಡಬೇಕಿದೆ.

ಸ್ನಾನ ಮಾಡುವುದರಿಂದ ನಮ್ಮ ಮೈ-ಮನಸ್ಸು ಶುದ್ಧವಾದಂತೆ, ನಮ್ಮ ಸುತ್ತಲಿನ ಪರಿಸರವನ್ನೂ ಶುದ್ಧವಾಗಿರಿಸಿಕೊಳ್ಳಬೇಕು. ಅನ್ಯಾಯ, ಅನೀತಿಗಳನ್ನು ತ್ಯಾಗ ಮಾಡಿದರೆ ಭಗವಂತನ ಒಲುವೆಯಾಗುತ್ತದೆ. ಸಂಗಮ ಸ್ನಾನ ಎಲ್ಲರ ಮನಸ್ಸನ್ನೂ ಶುಚಿಗೊಳಿಸಲು ಎಂದು ಹಾರೈಸಿದರು.

ಸದಾಕಾಲ ದೈವದ, ಆಧ್ಯಾತ್ಮಿಕ ಚಿಂತನೆಯಲ್ಲಿ ಮುಳುಗಿರುವ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದು ನಾಡಿನ ಸೌಭಾಗ್ಯ.
-ನಿರ್ಮಲಾನಂದನಾಥ ಸ್ವಾಮೀಜಿ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.