ಲೋಕಸಭೆ ಚುನಾವಣೆಗೆ ಈ ಚುನಾವಣೆ ಮೆಟ್ಟಿಲು
Team Udayavani, Apr 21, 2018, 12:37 PM IST
ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗೆ ಅಡಿಗಲ್ಲಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಶುಕ್ರವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು.
ದೇಶದ ಹಿತದೃಷ್ಟಿಯಿಂದ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರತಿಷ್ಠೆಯದ್ದಾಗಿದೆ. ಇದೇ ಕಾರಣಕ್ಕೆ ಇಡೀ ದೇಶ ಕರ್ನಾಟಕದ ಚುನಾವಣೆಯತ್ತ ನೋಡುತ್ತಿದೆ. ಮುಂದಿನ ಆರು ತಿಂಗಳಲ್ಲಿ ಮಧ್ಯಪ್ರದೇಶ ಚುನಾವಣೆ ನಡೆಯಲಿದೆ. ಒಂದು ವರ್ಷದಲ್ಲಿ ಲೋಕಸಭೆ ಚುನಾವಣೆ ಎದುರಾಗುತ್ತೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಈ ಚುನಾವಣೆ ಗೆದ್ದರೆ, 2019ರ ಲೋಕಸಭೆ ಚುನಾವಣೆ ಗೆಲ್ಲಲು ಮೆಟ್ಟಿಲಾಗಲಿದೆ ಎಂದರು.
ಭ್ರಮನಿರಸ: 2015ರಲ್ಲಿ ಇದ್ದ ಮೋದಿ ಅಲೆ ಈಗಿಲ್ಲ. ಮೋದಿ ವರ್ಚಸ್ಸು ಕುಗ್ಗಿದೆ. ಮಾತಿನಲ್ಲೇ ಮನೆ ಕಟ್ಟಲು ಆಗುವುದಿಲ್ಲ ಎಂಬುದು ಜನತೆಗೆ ಗೊತ್ತಾಗಿದೆ. ಅಲ್ಪಸಂಖ್ಯಾತರು, ದಲಿತರಿಗೆ ರಕ್ಷಣೆ ಇಲ್ಲ. ಇವರ ಮಾತು-ಕಾರ್ಯಕ್ರಮಗಳಿಂದ ಜನ ಭ್ರಮನಿರಸರಾಗಿದ್ದಾರೆ ಎಂದರು.
ಬಿಜೆಪಿಯವರು ಹೇಗಾದರೂ ಮಾಡಿ ಅಧಿಕಾರ ಹಿಡಿಯಲು ಕಸರತ್ತು ನಡೆಸಿದ್ದರೆ, ಜೆಡಿಎಸ್‌ನವರು ಅತಂತ್ರ ವಿಧಾನಸಭೆ ರಚನೆಯಾಗಲಿ ಎಂದು ಕಾದಿದ್ದಾರೆ. ಇವರ ಆಟಗಳನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ವಚನ ಭ್ರಷ್ಟ, ಯಡಿಯೂರಪ್ಪ ಮಹಾ ಭ್ರಷ್ಟ, ಮುಖ್ಯಮಂತ್ರಿಯಾಗಿ ಸ್ವತಃ ಜೈಲಿಗೆ ಹೋದವರು ಎಂದು ಟೀಕಿಸಿದರು.
ಸಾಮಾಜಿಕ ನ್ಯಾಯ: ಪ್ರಜಾಪ್ರಭುತ್ವ ವ್ಯವಸ್ಥೆ, ಸಾಮಾಜಿಕ ನ್ಯಾಯ, ಜಾತ್ಯತೀತ ವಾದದಲ್ಲಿ ನಂಬಿಕೆ ಇರಿಸಿರುವ, ರೆಸಾರ್ಟ್ ರಾಜಕೀಯ ಮಾಡದೆ, ಐದು ವರ್ಷ ಸ್ಥಿರ ಸರ್ಕಾರ ನೀಡಿರುವ ನಮ್ಮದು ಅಭಿವೃದ್ಧಿ ಅಜೆಂಡಾ, ಬಿಜೆಪಿ-ಜೆಡಿಎಸ್‌ನವರಿಗೆ ಅಭಿವೃದ್ಧಿಯ ಅಜೆಂಡಾ ಇಲ್ಲ. ಅಧಿಕಾರಕ್ಕೆ ಬಂದರೆ ಏನೇನೋ ಮಾಡುತ್ತೇನೆ ಎನ್ನುತ್ತಿರುವ ಎಚ್.ಡಿ.ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿ ಆಗಿದ್ದಾಗ ಏನು ಮಾಡಿದರು ಎಂಬುದನ್ನು ಜನರಿಗೆ ಹೇಳಲಿ ಎಂದು ಹೇಳಿದರು.
ಇನ್ನು 24 ದಿನಗಳಲ್ಲಿ ನಾನೇ ಮುಖ್ಯಮಂತ್ರಿ, ಅಧಿಕಾರಕ್ಕೆ ಬಂದರೆ ನೀರಾವರಿಗೆ 1 ಲಕ್ಷ ಕೋಟಿ ಖರ್ಚು ಮಾಡುವುದಾಗಿ ಹೇಳುತ್ತಿರುವ ಯಡಿಯೂರಪ್ಪ3 ವರ್ಷ 2 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ಏನು ಮಾಡಿದ್ದರು? ಹಾವೇರಿಯಲ್ಲಿ ಗೊಬ್ಬರ-ಬಿತ್ತನೆ ಬೀಜ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ, ಇಬ್ಬರು ರೈತರನ್ನು ಸಾಯಿಸಿದ್ದರು ಎಂದು ಟೀಕಿಸಿದರು.
ಮುಂದಿನ ಅಭಿವೃದ್ಧಿ ಪ್ರಸ್ತಾಪ: ಚುನಾವಣೆಯಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಮತ್ತು ಸಾಧನೆಗಳನ್ನು ಜನರ ಮುಂದಿಡಬೇಕು. ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆಯಲ್ಲೂ ನಾವು ಇದನ್ನೇ ಮಾಡಿದ್ದು, ಈ ಚುನಾವಣೆಯಲ್ಲಿ ಕೂಡ ಕಳೆದ ಐದು ವರ್ಷಗಳಲ್ಲಿ ನಮ್ಮ ಸರ್ಕಾರ ಮಾಡಿದ ಸಾಧನೆ ಹಾಗೂ ಮುಂದೆ ಮಾಡಲಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಸ್ತಾಪ ಮಾಡುತ್ತೇವೆ.
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ: ಕೆಲ ಶಾಸಕರ ವಿರುದ್ಧ ಆಡಳಿತ ವಿರೋಧಿ ಅಲೆ ಇರಬಹುದು. ಆದರೆ, ನಮ್ಮ ಸರ್ಕಾರದ ಮೇಲೆ ಆಡಳಿತ ವಿರೋಧಿ ಅಲೆ ಇಲ್ಲ. ಗುಪ್ತಚರ ಇಲಾಖೆ ವರದಿ ಸೇರಿದಂತೆ ನಾವೂ ಮೂರು ಸರ್ವೇ ಮಾಡಿಸಿದ್ದೇವೆ. ಎಲ್ಲ ಸಮೀಕ್ಷೆಗಳಲ್ಲೂ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬರುವುದಾಗಿ ಹೇಳಲಾಗಿದೆ. ಜತೆಗೆ ರಾಜ್ಯದ ಜನತೆ ಈಗಾಗಲೇ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಲು ತೀರ್ಮಾನ ಮಾಡಿದ್ದಾರೆ. ಹೀಗಾಗಿ ಮೋದಿ-ಶಾ ಅವರು ನೂರು ಬಾರಿ ರಾಜ್ಯಕ್ಕೆ ಬಂದರೂ ಏನೂ ಆಗಲ್ಲ. ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂಬುದು ಜೆಡಿಎಸ್‌ನವರ ಭ್ರಮೆ ಎಂದು ಹರಿಹಾಯ್ದರು.
ಆಧಾರ ರಹಿತ ಹೇಳಿಕೆ: ಬಿಜೆಪಿಯವರು ಅಭಿವೃದ್ಧಿ ವಿಚಾರಗಳನ್ನು ಮಾತನಾಡದೆ, ಕ್ಷುಲ್ಲಕ ವಿಚಾರಗಳನ್ನು ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾವ ಹಗರಣ, ಭ್ರಷ್ಟಾಚಾರ ನಡೆದಿಲ್ಲ. ಆದರೂ ಪ್ರಧಾನಮಂತ್ರಿಯವರು ಕರ್ನಾಟಕಕ್ಕೆ ಬಂದು ಸಿದ್ದರಾಮಯ್ಯ ಅವರದ್ದು ಟೆನ್ ಪರ್ಸೆಂಟ್ ಸರ್ಕಾರ ಎಂದು ಆಧಾರ ರಹಿತ, ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಈ ರೀತಿ ಮೋದಿ, ಅಮಿತ್ ಶಾ, ಯಡಿಯೂರಪ್ಪಸುಳ್ಳು ಆರೋಪಗಳನ್ನು ಮಾಡಿದಾಗ ರಾಜಕೀಯ ಹೇಳಿಕೆಗಳನ್ನು ನೀಡಿರುವುದನ್ನು ಬಿಟ್ಟರೆ, ಬಿಜೆಯವರಂತೆ ತಾವು ಅನಗತ್ಯ ಟೀಕೆಗಳನ್ನು ಮಾಡಿಲ್ಲ ಎಂದರು.
ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಕಾರು ಅಪಘಾತವಾದರೆ ಅದರಲ್ಲಿ ರಾಜ್ಯ ಸರ್ಕಾರದ ಕೈವಾಡ ಇದೆ ಎಂದು ಆಧಾರ ರಹಿತ ಹೇಳಿಕೆ ನೀಡುತ್ತಾರೆ. ಇಂಥವನ್ನೆಲ್ಲಾ ನಂಬಲು ಜನ ಮೂರ್ಖರು ಎಂದು ಕೊಂಡಿದ್ದಾರಾ? ಪದೇಪದೆ ಸುಳ್ಳು ಹೇಳಿದರೆ ಇವರೇ ಮೂರ್ಖರಾಗುತ್ತಾರೆ ಎಂದು ಜರಿದರು.ಈ ವೇಳೆ ಸಚಿವ ತನ್ವೀರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.