ದಸರಾ ಮೆರವಣಿಗೆಯಲ್ಲಿ ಈ ಬಾರಿ 42 ಸ್ತಬ್ಧಚಿತ್ರಗಳು
Team Udayavani, Sep 7, 2017, 7:40 AM IST
ಮೈಸೂರು: ಈ ಬಾರಿಯ ದಸರಾ ಮೆರವಣಿಗೆಯಲ್ಲಿ 42 ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ ಎಂದು ದಸರಾ ಉಪ ವಿಶೇಷಾಧಿಕಾರಿ ಜಿಪಂ ಸಿಇಒ ಪಿ.ಶಿವಶಂಕರ್ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಸ್ತಬ್ಧಚಿತ್ರ ಉಪ ಸಮಿತಿಯ ರಾಜ್ಯಮಟ್ಟದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 35 ಸ್ತಬ್ಧ ಚಿತ್ರ ಗಳನ್ನು ಅಂತಿಮಗೊಳಿಸಲಾಗಿದ್ದು, 30 ಜಿಲ್ಲಾ ಪಂಚಾಯ್ತಿಗಳಿಂದ ತಲಾ ಒಂದೊಂದು ಸ್ತಬ್ಧ ಚಿತ್ರಗಳು, ರಾಜ್ಯ ವಲಯದಿಂದ ಕೌಶಲ್ಯ ಕರ್ನಾಟಕ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಿಂದ ತಲಾ ಒಂದೊಂದು ಸ್ತಬ್ಧ ಚಿತ್ರಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
ದಸರೆಯಲ್ಲಿ ಭಾಗವಹಿಸುವ ಸ್ತಬ್ಧ ಚಿತ್ರಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿ,ಪರಿಸರ, ಅರಣ್ಯೀಕರಣ, ಅಂತರ್ಜಲ, ಪರಿಸರ ಸ್ನೇಹಿ ಸ್ತಬ್ಧಚಿತ್ರಗಳಾಗಿದ್ದು ಪ್ರವಾಸೋದ್ಯಮ ಹಾಗೂ ಸರ್ಕಾರದ ಕಾರ್ಯಕ್ರಮಗಳು ವಿಶೇಷ ಸಾಧನೆ ಕುರಿತ ಸ್ತಬ್ಧಚಿತ್ರಗಳು, ಸಂವಿಧಾನ, ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಕುರಿತ ಸ್ತಬಟಛಿಚಿತ್ರಗಳು ಮೂಡಿ ಬರಲಿವೆ ಎಂದ ಅವರು ಸೆ.11 ರಿಂದ ಬಂಡೀಪಾಳ್ಯದ ಎಪಿಎಂಸಿ ಆವರಣದಲ್ಲಿ ಸ್ತಬ್ಧಚಿತ್ರಗಳ ನಿರ್ಮಾಣ ಕೆಲಸ ಪ್ರಾರಂಭಿಸಲಾಗುತ್ತಿದೆ. ಸೆ.25 ರಂದು ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ಸ್ತಬ್ಧಚಿತ್ರಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಗುವುದು. 28 ರಂದು ಸ್ತಬ್ಧಚಿತ್ರಗಳ ಪೂರ್ವ ಮೆರವಣಿಗೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.