ಈ ಬಾರಿ ದಾಖಲೆಯ ಗೆಲುವು: ಧ್ರುವ
Team Udayavani, Apr 8, 2019, 3:00 AM IST
ನಂಜನಗೂಡು: ಚಾಮರಾಜನಗರ ಕ್ಷೇತ್ರದಾದ್ಯಂತ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ತಮ್ಮ ಗೆಲುವು ಶತಸಿದ್ಧ ಎಂದು ಕಾಂಗ್ರೆಸ್ ಅಭ್ಯರ್ಥಿ, ಸಂಸದ ಆರ್. ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಯತೀಂದ್ರ ಸಿದ್ದರಾಮಯ್ಯ ಜೊತೆ ವರುಣಾ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ತಮಗೆ ಮತದಾರರು ಹೆಚ್ಚಿನ ಬೆಂಬಲ ತೋರುತ್ತಿದ್ದಾರೆ. ಅವರ ಕಷ್ಟಗಳಿಗೆ ತಾವು ಸದಾ ಸ್ಪಂದಿಸಿದ್ದು, ದಾಖಲೆಗಳ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ತಿಳಿಸಿದರು.
ಮೈತ್ರಿ ಅಭ್ಯರ್ಥಿಯಾಗಿರುವ ತಮ್ಮ ಗೆಲುವಿಗಾಗಿ ಜನತಾದಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅವಿರಿತವಾಗಿ ದುಡಿಯುತ್ತಿದ್ದಾರೆ. ಕ್ಷೇತ್ರದಲ್ಲಿ ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಗ್ಗಟ್ಟು ಪ್ರದರ್ಶಿಸಿ ಜಂಟಿಯಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಭರವಸೆಗಳು ಹುಸಿಯಾಗಿವೆ. ಮತದಾರರು ಬೇಸತ್ತಿದ್ದು, ಈ ಬಾರಿ ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು,
-ಕೆಪಿಸಿಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ಎಸ್.ಸಿ.ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಸಿದ್ದರಾಜು, ಶಿವನಾಗಪ್ಪ, ಗುರುಮಲ್ಲಪ್ಪ, ಜಿಪಂ ಮಾಜಿ ಸದಸ್ಯ ಎಚ್.ಎನ್. ನಂಜಪ್ಪ, ಹೊಸಕೋಟೆ ಬಸವರಾಜು,
-ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಕಿರುಗುಂದ ಶಿವನಾಗ, ಕೆ.ಎಸ್.ಹುಂಡಿ ಯೋಗೇಶ, ನಂಜಯ್ಯ, ಚಿನ್ನಂಬಳ್ಳಿ ಸಿ.ಆರ್.ಮಹದೇವು, ರಾಯನಹುಂಡಿ ಮಾದಪ್ಪ, ಹೆಬ್ಯಾ ರಾಜು, ಸೇರಿದಂತೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.