![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Feb 14, 2023, 8:23 PM IST
ಹುಣಸೂರು: ನಾಗರಹೊಳೆ ಉದ್ಯಾನದಂಚಿನ ಎಸ್ಟೇಟ್‌ನಲ್ಲಿ ಹುಲಿ ದಾಳಿಗೆ ಜೀವ ಕಳೆದುಕೊಂಡ ಹುಣಸೂರು ತಾಲೂಕಿನ ಕೊಳವಿಗೆ ಹಾಡಿಯ ಆದಿವಾಸಿ ರಾಜು, ಮೊಮ್ಮಗ ಚೇತನ್‌ರ ಶವವನ್ನು ಉದ್ಯಾನದಂಚಿನ ಕೊಳವಿಗೆ ಹಾಡಿಯ ಲಕ್ಷ್ಮಣ ತೀರ್ಥ ನದಿ ದಡದಲ್ಲಿ ಬುಧವಾರ ಸಂಜೆ ಅಂತ್ಯಕ್ರಿಯೆ ನಡೆಸಿದರು.
ಕುಟುಂಬದ ಇಬ್ಬರ ಸಾವಿನಿಂದ ಆಘಾತಕ್ಕೊಳಗಾಗಿ ಮೃತಪಟ್ಟ ಚೇತನ್‌ರ ಅಜ್ಜಿ ಜಯಮ್ಮರ ಮೃತದೇಹವನ್ನು ಇವರಿಬ್ಬರ ಅಂತ್ಯಕ್ರಿಯೆಗೂ ಮುನ್ನ ಕುಟುಂಬದವರು ಶವ ಸಂಸ್ಕಾರ ನಡೆಸಿದರು. ಶಾಸಕ ಎಚ್.ಪಿ.ಮಂಜುನಾಥರ ಸಹೋದರ ಉದ್ಯಮಿ ಎಚ್.ಪಿ.ಅಮರ್‌ನಾಥ್, ಕಾಂಗ್ರೆಸ್ ಕಾರ್ಯಾಧ್ಯಕ್ಷ ಪುಟ್ಟರಾಜು. ದೊಡ್ಡಹೆಜ್ಜೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಮುದಗನೂರು ಸುಭಾಷ್, ಜಿ.ಪಂ.ಮಾಜಿ ಅಧ್ಯಕ್ಷ ಕಟ್ಟನಾಯಕ ಮತ್ತಿತರ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
ಅಂತ್ಯ ಸಂಸ್ಕಾರದ ವೇಳೆ ಹಾಡಿಯ ಆದಿವಾಸಿಗಳು ಹಾಗೂ ನೆಂಟರಿಷ್ಟರು, ಸುತ್ತ ಮುತ್ತಲ ಗ್ರಾಮಸ್ಥರು ಸಾಕಷ್ಟು ಮಂದಿ ಭಾಗವಹಿಸಿದ್ದರು. ನೋವಿನ ಆಕ್ರಂದನ ಮುಗಿಲು ಮುಟ್ಟಿತ್ತು. ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ.ಗುರುಮೂರ್ತಿ ಇಲಾಖೆ ಪರವಾಗಿ ಹಾಜರಿದ್ದರು.
ಇದನ್ನೂ ಓದಿ: ಖಾತೆ ಬದಲಾವಣೆಗೆ ಲಂಚ: ಪ್ರಥಮದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.