ಮತ್ತೆ ಹುಲಿ ಉಪಟಳ: ಕುರಿ ಬಲಿ

Team Udayavani, May 20, 2019, 3:00 AM IST

mathe

ಹುಣಸೂರು: ನಾಗರಹೊಳೆ ಉದ್ಯಾನವನದಂಚಿನ ನೇರಳೆ ಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಹಾಡುಹಗಲೇ ಮೇಯಲು ಬಿಟ್ಟಿದ್ದ ಕುರಿಯನ್ನು ಕೊಂದು ಹಾಕಿದೆ.

ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಪಂನ ಚಂದನಗಿರಿ ರಸ್ತೆಯ ಹಂದಿ ಹಳ್ಳದ ಬಳಿ ಭಾನುವಾರ ನೇರಳಕುಪ್ಪೆ ಗ್ರಾಮದ ಶಿವರಾಜು ಅವರಿಗೆ ಸೇರಿದ ಕುರಿಗಳನ್ನು ಮಧ್ಯಾಹ್ನ 3 ರ ವೇಳೆಯಲ್ಲಿ ಮೇಯಿಸುತ್ತಿದ್ದ ವೇಳೆ ದಿಢೀರ್‌ ಪ್ರತ್ಯಕ್ಷವಾದ ಹುಲಿ ಕುರಿಯ ಮೇಲೆರಗಿ ಒಂದು ಕುರಿಯನ್ನು ಕೊಂದು ಹಾಕಿದೆ.

ಬೇಟೆಯಾಡಿದ್ದ ಕುರಿಯನ್ನು ಹೊತ್ತೂಯ್ಯುವ ವೇಳೆ ಕುರಿಗಾಹಿಗಳು ಗಮನಿಸಿ ಸಹಾಯಕ್ಕಾಗಿ ಕೂಗಿಕೊಂಡಾಗ ಸುತ್ತಮುತ್ತಲಿನ ಜಮೀನಿನಲ್ಲಿದ್ದವರು ಜೋರಾಗಿ ಕೂಗಾಡಿದ್ದರಿಂದ ಹುಲಿಯು ಕೊಂದು ಹಾಕಿದ್ದ ಕುರಿಯನ್ನು ಅಲ್ಲೇ ಬಿಟ್ಟು ಹಂದಿಹಳ್ಳ ಅರಣ್ಯ ಪ್ರದೇಶದತ್ತ ಓಡಿದೆ.

ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಕಚುವಿನಹಳ್ಳಿ ಶ್ರೇಣಿಯ ಡಿಆರ್‌ಎಫ್‌ಓ ವೀರಭದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ದಿನಗಳ ಹಿಂದೆ ಸಹ ಹುಲಿ ಪ್ರತ್ಯಕ್ಷವಾಗಿ ಚಂದನಗಿರಿಯಲ್ಲಿ ಮೇಕೆಯೊಂದನ್ನು ಕೊಂದು ಹಾಕಿತ್ತು.

ಕಳೆದ 2018ರ ಆಗಸ್ಟ್‌ ತಿಂಗಳಿನಿಂದ ಹುಲಿಗಳು ಆಗಾಗ್ಗೆ ಕಾಣಿಸಿಕೊಂಡು ಈ ಭಾಗದಲ್ಲಿ ಸಾಕಷ್ಟು ಸಾಕು ಪ್ರಾಣಿಗಳನ್ನು ಕೊಂದು ಹಾಕಿದೆ. ಕಳೆದ ಮೂರು ತಿಂಗಳ ಹಿಂದೆ ಕಾಡಿನಿಂದ ಬೇಟೆಯಾಡಲು ಬಂದಿದ್ದ ಹುಲಿಯು ರೈತರು ಹಂದಿಗೆ ಹಾಕಿದ್ದ ಉರುಳಿಗೆ ಸಿಲುಕಿ ಓಡಲಾಗದೆ ಪರಿತಪಿಸುತ್ತಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿತ್ತು.

ಈ ಭಾಗದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿರುವುದು ಕಾಡಂಚಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.