ಇಂದು ಅರಮನೆಯಲ್ಲಿ ವಿಜಯದಶಮಿ ಆಚರಣೆ
Team Udayavani, Oct 22, 2018, 11:48 AM IST
ಮೈಸೂರು: ವಿಜಯದಶಮಿಯ ದಿನದಂದು ಮೈಸೂರು ರಾಜಮನೆತನದ ಇಬ್ಬರು ನಿಧನ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ವಜ್ರಮುಷ್ಠಿ ಕಾಳಗ ಹಾಗೂ ಇನ್ನಿತರ ಧಾರ್ಮಿಕ ಪೂಜಾಕೈಂಕರ್ಯಗಳು ಇಂದು ನಡೆಯಲಿದೆ.
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟರತ್ನಮ್ಮಣ್ಣಿ ಹಾಗೂ ದಿ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿದೇವಿ ಅವರ ನಿಧನದಿಂದ ನವರಾತ್ರಿಯ ಹತ್ತನೇ ದಿನದ ವಿಜಯದಶಮಿಯ ಎಲ್ಲಾ ಧಾರ್ಮಿಕ ಆಚರಣೆಗಳನ್ನು ಮುಂದೂಡಲಾಗಿತ್ತು.
ಹೀಗಾಗಿ ಈ ಎಲ್ಲಾ ಕಾರ್ಯಕ್ರಮಗಳನ್ನು ಅ.22ರಂದು ನಡೆಸಲಾಗುತ್ತಿದ್ದು, ವಜ್ರಮುಷ್ಠಿ ಕಾಳಗ, ಶಮಿಪೂಜೆ ಹಾಗೂ ವಿಜಯಯಾತ್ರೆ ನಡೆಸಲಾಗುತ್ತಿದೆ. ನವರಾತ್ರಿ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯುವ ಸಂದರ್ಭದಲ್ಲಿ ರಾಜಮನೆತನದವರು ತಮ್ಮದೇ ಕೆಲವು ಕಟ್ಟುಪಾಡುಗಳನ್ನು ಅನುಸರಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ನವರಾತ್ರಿ ಪೂಜಾ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಸಿದ ನಂತರ ಅರಮನೆ ಆವರಣದ ಭುವನೇಶ್ವರಿ ದೇವಾಲಯಕ್ಕೆ ಚಿನ್ನದ ಅಡ್ಡಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯಿಟ್ಟು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬೆಳ್ಳಿ ರಥದಲ್ಲಿ ಕುಳಿತು ತೆರಳಿ ಶಮಿ ಪೂಜೆ ಸಲ್ಲಿಸಿ, ಬಳಿಕ ಅರಮನೆಗೆ ವಿಜಯಯಾತ್ರೆ ಬರುವುದು ಸಂಪ್ರದಾಯ.
ಆದರೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟರತ್ನಮ್ಮಣ್ಣಿ ಅವರ ನಿಧನದಿಂದ ಅ.19ರಂದು ನಡೆಯಬೇಕಿದ್ದ ದಸರಾ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು. ಬಳಿಕ ರಾಜಮನೆತನದ ಗುರುಗಳು, ರಾಜಪುರೋತರ ಸಲಹೆಯ ಮೇರೆಗೆ ಅ.22ರಂದು ವಜ್ರಮುಷ್ಠಿ ಕಾಳಗ, ಶಮಿ ಪೂಜೆ, ವಿಜಯ ಯಾತ್ರೆ ನಡೆಸಲು ಸಿದ್ಧತೆಗಳು ನಡೆದಿವೆ.
ಅರಮನೆಗೆ ನಿರ್ಬಂಧ: ದಸರಾ ಮಹೋತ್ಸವ ಅಂಗವಾಗಿ ರಾಜಮನೆತನದವರು ವಿಜಯದಶಮಿ ಪೂಜಾಕೈಂಕರ್ಯಗಳನ್ನು ನಡೆಸುವ ಹಿನ್ನೆಲೆಯಲ್ಲಿ ಅ.22 ರಂದು ಪ್ರವಾಸಿಗರು ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಅರಮನೆಗೆ ಬೇಟಿ ನೀಡುವ ಪ್ರವಾಸಿಗರಿಗೆ ಅರಮನೆ ಒಳಾವರಣ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.