ಬಿಜೆಪಿಯಿಂದ ಇಂದು ಹುಣಸೂರು ಬಂದ್‌


Team Udayavani, Dec 4, 2017, 1:27 PM IST

m2-hun-bandh.jpg

ಮೈಸೂರು: ಹನುಮಜಯಂತಿ ಮೆರವಣಿಗೆಗೆ ಅವಕಾಶ ನೀಡದಿರುವುದನ್ನು ಖಂಡಿಸಿ ಬಿಜೆಪಿ ಸೋಮವಾರ ಹುಣಸೂರು ಬಂದ್‌ಗೆ ಕರೆ ನೀಡಿರುವುದರಿಂದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಹಿರಿಯ ಅಧಿಕಾರಿಗಳ ಮೊಕ್ಕಾಂ: ದಕ್ಷಿಣ ವಲಯ ಐಜಿಪಿ ವಿಫ‌ುಲ್‌ ಕುಮಾರ್‌, ಜಿಲ್ಲಾಧಿಕಾರಿ ರಂದೀಪ್‌ ಡಿ., ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹುಣಸೂರಿನಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿ ಅವಲೋಕಿಸಿದರು.

ಮೈದಾನದಲ್ಲಿ ಹನುಮ: ಮೆರವಣಿಗೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮುನೇಶ್ವರ ಕಾವಲ್‌ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಆಂಜನೇಯನ ಬೃಹತ್‌ ವಿಗ್ರಹವನ್ನು ಸ್ವಸ್ಥಾನಕ್ಕೆ ತೆಗೆದುಕೊಂಡು ಹೋಗುವುದಿಲ್ಲ ಎಂದು ಹನುಮಂತೋತ್ಸವ ಸಮಿತಿ ಪಟ್ಟು ಹಿಡಿದಿದೆ. ಆದರೆ, ಸೆಕ್ಷನ್‌ 144ಜಾರಿಯಿಂದ ಮೈದಾನದಲ್ಲಿ ಜನ ಸೇರಲು ಪೊಲೀಸರು ಅವಕಾಶ ನೀಡದಿರುವುದರಿಂದ ಮೈದಾನದಲ್ಲಿ ಹನುಮಂತನ ವಿಗ್ರಹದಜತೆಗೆ ಹನುಮಂತೋತ್ಸವ ಸಮಿತಿ ಅಧ್ಯಕ್ಷ ವಿ.ಎನ್‌.ದಾಸ್‌ ಮತ್ತು ಬೆರಳೆಣಿಕೆ ಜನರು ಮಾತ್ರ ಕಾವಲಿಗಿದ್ದಾರೆ. 

ಈ ಮಧ್ಯೆ ಮಾಜಿ ಸಂಸದ ಎಚ್‌.ವಿಶ್ವನಾಥ್‌, ಬಿಜೆಪಿ ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಪೊಲೀಸರು ದೌರ್ಜನ್ಯ ನಡೆಸಿ ಹನುಮ ಜಯಂತಿಯನ್ನು ಹತ್ತಿಕ್ಕಿದ್ದಾರೆ ಎಂದು ಖಂಡಿಸಿದರು. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್‌ಸಿಂಹ ಅವರ ಬಂಧಿಸಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್‌ ಹೆಗ್ಡೆ,  

ರಾಜ್ಯ ಸರ್ಕಾರ ಬಹುಸಂಖ್ಯಾತರ ಬಾವನೆಗಳಿಗೆ ಕಡಿವಾಣ ಹಾಕುವ ಮೂಲಕ ಅಪಾಯದೊಂದಿಗೆ ಆಟವಾಡುತ್ತಿದ್ದು, ಇದರ ಗಂಭೀರತೆ ರಾಜ್ಯ ಸರ್ಕಾರಕ್ಕೆ ಅರ್ಥವಾಗಲಿದೆ ಎಂದು ಎಚ್ಚರಿಸಿದರು. ರಾಜ್ಯ ಸರ್ಕಾರ ಜನರ ಭಾವನೆಗಳು ಹಾಗೂ ಸ್ವಾತಂತ್ರ್ಯಕ್ಕೆ ಗೌರವಿಸುವ ನಿಟ್ಟಿನಲ್ಲಿ ಅವಕಾಶ ಕಲ್ಪಿಸಬೇಕಿದೆ. ಹಿಟ್ಲರ್‌ಶಾಹಿ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಸಂಸದರನ್ನು ಪ್ರತಿಬಂಧಿಸುವುದು ಪ್ರಜಾಸತ್ತೆ ಹತ್ಯೆಯಾಗಿದ್ದು, ಈ ವಿಷಯದಲ್ಲಿ ರಾಜ್ಯ ಸರ್ಕಾರದ ನಡತೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. 

ಬಿಜೆಪಿ ಅಧಿಕಾರಕ್ಕೆ: ರಾಜ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಉತ್ತಮವಾಗಿ ನಡೆಯುತ್ತಿದ್ದು, ಎಲ್ಲೆಡೆ ದೊರೆಯುತ್ತಿರುವ ಅದ್ಭುತ ಜನಬೆಂಬಲ ಬಿಜೆಪಿಯನ್ನು ಗೆಲ್ಲಿಸಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯದ ಕೆಲವೇ ಕ್ಷೇತ್ರಗಳಿಗೆ ಮಾತ್ರ ಪರಿವರ್ತನಾ ಯಾತ್ರೆ ತಲುಪಿದ್ದು, ಅನೇಕ ಕ್ಷೇತ್ರಗಳಿಗೆ ಹೋಗಬೇಕಿದೆ. ಆದರೆ ಅತ್ಯಂತ ಯಶಸ್ಸಿನೊಂದಿಗೆ ಪರಿವರ್ತನಾ ಯಾತ್ರೆ ಪೂರ್ಣಗೊಳ್ಳಲಿದ್ದು, ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯಡಿಯೂರಪ್ಪಮುಖ್ಯಮಂತ್ರಿ ಆಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪಪ್ಪೂ ಬಗ್ಗೆ ಮಾತಾಡಲ್ಲ: ಗುಜರಾತ್‌ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಆ ಮೂಲಕ ಉತ್ತರ ಪ್ರದೇಶದಲ್ಲಿ ಎದ್ದಿರುವಂತೆ ಗುಜರಾತ್‌, ಕರ್ನಾಟಕ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಬಿಜೆಪಿ ಬಿರುಗಾಳಿ ಎದ್ದೇಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿ, ನಂತರ ಬೇರೊಬ್ಬರ ಬಗ್ಗೆ ಮಾತನಾಡಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಪ್ಪೂಗಳ ಬಗ್ಗೆ ಮಾತನಾಡುವ ಅಭ್ಯಾಸವಿಲ್ಲ ಎಂದು ರಾಹುಲ್‌ಗಾಂಧಿ ಪಟ್ಟಾಭಿಷೇಕದ ಕುರಿತು ಲೇವಡಿ ಮಾಡಿದರು.

ನಾವೂ ಸುಮ್ಮನೇ ಕೂರುವುದಿಲ್ಲ: ದಮನಕಾರಿ ನೀತಿ ಕೈಬಿಟ್ಟು,ಶಾಂತಿ ಸೌಹಾರ್ದತೆಯಿಂದ ಬದುಕುವುದನ್ನು ಕಲಿಯಲಿ, ಸಿಎಂ ಸಿದ್ದರಾಮಯ್ಯ ಏಕಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿದ್ದಾರೆ. ಇದರ ಪರಿಣಾಮವಾಗಿ ಬಹು ಸಂಖ್ಯಾತರ ಭಾವನೆಗಳನ್ನು ಕೆರಳಿಸುವ ಕೆಲಸ ನಡೆದಿದೆ. ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ನಾವೂ ಸುಮ್ಮನೇ ಕೂರುವುದಿಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೆಗ್ಡೆ ತಿಳಿಸಿದರು.

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.