ಘನತ್ಯಾಜ್ಯ ವಿಂಗಡಣೆಗೆ ಐಟಿಸಿ ಜತೆಗೆ ಒಡಂಬಡಿಕೆ
Team Udayavani, Mar 22, 2018, 12:42 PM IST
ಮೈಸೂರು: ನಗರದಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ಘನತ್ಯಾಜ್ಯವನ್ನು ಮೂಲದಲ್ಲೇ ವೈಜ್ಞಾನಿಕ ರೀತಿಯಲ್ಲಿ ವಿಂಗಡಣೆ ಮಾಡಲು ಒತ್ತು ನೀಡುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಹಾಗೂ ಐಟಿಸಿ ಕಂಪನಿ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಮೇಯರ್ ಬಿ.ಭಾಗ್ಯವತಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಐಟಿಸಿ ಕಂಪನಿಯ ಪ್ರಮುಖರು ಹಾಗೂ ಪಾಲಿಕೆಯ ಪ್ರಮುಖರು ಒಡಂಬಡಿಕೆಗೆ ಸಹಿ ಹಾಕಿದರು. ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ(ಸಿಎಸ್‌ಆರ್) ಯೋಜನೆಯಡಿ ಮೂರು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಅದರಂತೆ ನಗರ ಪಾಲಿಕೆಯ ಎಲ್ಲಾ 65 ವಾರ್ಡ್‌ಗಳಲ್ಲಿ ಮಾಹಿತಿ, ಶಿಕ್ಷಣ ಹಾಗೂ ಸಂವಹನ(ಐಇಸಿ) ಚಟುವಟಿಕೆಗಳನ್ನು ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ.
ಒಡಂಬಡಿಕೆ ಉದ್ದೇಶ: ಮೈಸೂರು ನಗರದಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ತ್ಯಾಜ್ಯವನ್ನು ಮೂಲದಲ್ಲೇ ಹಸಿ ಹಾಗೂ ಒಣ ಕಸವನ್ನು ಸಮರ್ಪಕ ರೀತಿಯಲ್ಲಿ ವಿಂಗಡಣೆ ಮಾಡುವ ಬಗ್ಗೆ ಪೌರಕಾರ್ಮಿಕರು ಹಾಗೂ ಸಾರ್ವಜನಿಕರನ್ನು ಪೋತ್ಸಾಹಿಸಲಾಗುವುದು. ಪಾಲಿಕೆ ಹಾಗೂ ಐಟಿಸಿ ಸಂಸ್ಥೆಯ ಒಡಂಬಡಿಕೆಯಂತೆ ಮೂಲದಲ್ಲೇ ತ್ಯಾಜ್ಯವನ್ನು ವಿಂಗಡಿಸುವ ಪೌರಕಾರ್ಮಿಕರು, ಸಾರ್ವಜನಿಕರಿಗೆ ಪ್ರೋತ್ಸಾಹಧನವನ್ನು ಸಹ ನೀಡಲಾಗುವುದು.
ಅಲ್ಲದೆ ಒಡಂಬಡಿಕೆ ಹಿನ್ನೆಲೆಯಲ್ಲಿ ಐಟಿಸಿ ಕಂಪನಿಯ ಸ್ವಯಂಸೇವಕರು ನಗರ ಪಾಲಿಕೆ ವ್ಯಾಪ್ತಿಯ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ, ಮೂಲದಲ್ಲೇ ತ್ಯಾಜ್ಯ ವಿಂಗಡಣೆ ಮಾಡುವ ಬಗ್ಗೆ ಅರಿವು ಮೂಡಿಸಲಿದ್ದಾರೆ. ಪ್ರತಿನಿತ್ಯ ತ್ಯಾಜ್ಯ ಸಂಗ್ರಹಿಸುವ ಪೌರಕಾರ್ಮಿಕರು ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ, ನಗರ ಪಾಲಿಕೆಯ 47 ತಾಜ್ಯ ವಿಲೇವಾರಿ ಘಟಕಗಳಿಗೆ ನೀಡಿದರೆ ಐಟಿಸಿ ಕಂಪನಿ 150-200 ರೂ.ಗಳ ಪೋ›ತ್ಸಾಹಧನ ನೀಡಲಾಗುವುದು ಎಂದು ನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್ ಮಾಹಿತಿ ನೀಡಿದರು.
ವಲಯವಾರು ಆರಂಭ: ಮೂಲದಲ್ಲೇ ತ್ಯಾಜ್ಯ ವಿಂಗಡಣೆ ಮಾಡುವ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಾಲಿಕೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಐಟಿಸಿ ಕಂಪನಿಗೆ ಈಗಾಗಲೇ ದೇಶದ ಇತರೆ ರಾಜ್ಯಗಳ ಸ್ಥಳೀಯ ಸಂಸ್ಥೆಗಳೊಂದಿಗೂ ಒಡಂಬಡಿಕೆ ಮಾಡಿಕೊಂಡಿದೆ.
ಒಡಂಬಡಿಕೆ ಪ್ರಕಾರ ಐಟಿಸಿ ಕಂಪನಿಯ ಸ್ವಯಂಸೇವಕರು ಪ್ರತಿನಿತ್ಯ ಬೆಳಗ್ಗೆ 6ರಿಂದ 10ರವರೆಗೆ 65 ವಾರ್ಡ್ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಮೂಲದಲ್ಲೇ ತ್ಯಾಜ್ಯವನ್ನು ವಿಂಗಡಣೆ ಮಾಡುವ ಬಗ್ಗೆ ಅರಿವು ಮೂಡಿಸಲಿದ್ದಾರೆ. ಸದ್ಯ ಪಾಲಿಕೆ ವ್ಯಾಪ್ತಿಯ ವಲಯವಾರು ಈ ಕಾರ್ಯವನ್ನು ಆರಂಭಿಸಲಿದ್ದು, ಇದಕ್ಕಾಗಿ ಪ್ರತಿ ವಾರ್ಡ್‌ಗೆ 5-10 ಸ್ವಯಂಸೇವಕರನ್ನು ನೇಮಿಸಲಾಗಿದೆ.
ಅಲ್ಲದೆ ದೇಶದ ಹಲವು ರಾಜ್ಯಗಳಲ್ಲಿ 2014ರಿಂದ ಈ ರೀತಿಯ ಒಡಂಬಡಿಕೆಯನ್ನು ಮಾಡಿಕೊಂಡಿರುವ ಐಟಿಸಿ ಕಂಪನಿ, 1.5 ದಶಲಕ್ಷ ಮನೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದ್ದು, 68 ಮೆಟ್ರಿಕ್ ಟನ್‌ಗಳಷ್ಟು ಒಣ ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಣೆ ಮಾಡಲಾಗಿದೆ ಎಂದು ಐಟಿಸಿ ಕಂಪನಿಯ ಕರ್ನಾಟಕದ ಮುಖ್ಯಸ್ಥ ಅಪ್ಸರ್ ಅಹಮದ್ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಈ ಸಂದರ್ಭದಲ್ಲಿ ಉಪ ಮೇಯರ್ ಇಂದಿರಾ, ಪಾಲಿಕೆ ಆಯುಕ್ತ ಜಿ.ಜಗದೀಶ್, ಪಾಲಿಕೆ ಸದಸ್ಯರಾದ ಕೆ.ಟಿ.ಚೆಲುವೇಗೌಡ, ಎಂ.ಜೆ.ರವಿಕುಮಾರ್, ಐಟಿಸಿ ಕಂಪನಿಯ ವ್ಯವಸ್ಥಾಪಕ ಜಿ.ಎನ್.ಮೂರ್ತಿ, ಘನತ್ಯಾಜ್ಯ ನಿರ್ವಹಣೆ ಸಲಹೆಗಾರ ರಮಾಕಾಂತ್ ಇನ್ನಿತರರು ಹಾಜರಿದ್ದರು.
ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ವೇಸ್ಟ್ ಸ್ಟ್ರೀಮ್ ಕಲೆಕ್ಷನ್ ಹೆಸರಿನಲ್ಲಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ. ವಾರಕ್ಕೆ ಒಮ್ಮೆ ಪಾಲಿಕೆ ವ್ಯಾಪ್ತಿಯ ಮನೆಗಳಿಗೆ ತೆರಳಿ ನಿರಪಯುಕ್ತವಾಗಿರುವ ಹಾಸಿಗೆ, ಬಟ್ಟೆ, ಟ್ಯೂಬ್‌ಲೈಟ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಸಂಗ್ರಹಿಸಲಾಗುವುದು. ಅಲ್ಲದೆ, ನಗರದ ಬ್ಯೂಟಿಪಾರ್ಲರ್‌ಗಳು, ಸಲೂನ್‌ಗಳಲ್ಲಿ ಸಂಗ್ರಹವಾಗುವ ಕೂದಲನ್ನು ಸಂಗ್ರಹಿಸುವ ಕಾರ್ಯಕ್ರಮ ಆರಂಭಿಸಲು ಚಿಂತನೆ ನಡೆಸಲಾಗಿದೆ.
-ರಮಾಕಾಂತ್, ಘನತ್ಯಾಜ್ಯ ನಿರ್ವಹಣೆ ಸಲಹೆಗಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.