ಅರಣ್ಯ ಹಕ್ಕಿಗಾಗಿ ಆದಿವಾಸಿಗಳ ಅಹೋರಾತ್ರಿ ಸತ್ಯಾಗ್ರಹ
Team Udayavani, May 8, 2019, 3:00 AM IST
ಎಚ್.ಡಿ.ಕೋಟೆ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಹಾಡಿ ಅರಣ್ಯ ಸಮಿತಿಗಳ ಒಕ್ಕೂಟ ಹಾಗೂ ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಹುಣಸೂರು ತಾಲೂಕಿನ ಸಂಘಟನೆಗಳ ನೇತೃತ್ವದಲ್ಲಿ ಆದಿವಾಸಿ ಬುಡಕಟ್ಟು ಜನರು ಪಟ್ಟಣದ ಮಿನಿ ವಿಧಾನಸೌಧ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಬಿಸಿದ್ದಾರೆ.
ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಹುಣಸೂರು ತಾಲೂಕುಗಳಲ್ಲಿ ಹೆಚ್ಚು ಬುಡಕಟ್ಟು ಸಮುದಾಯಗಳು ವಾಸ ಮಾಡುತ್ತಿದ್ದು, ಬುಡಕಟ್ಟು ಸಮುದಾಯಗಳ ಜೇನುಕುರುಬ, ಯರವ, ಕಾಡುಕುರುಬ ಸೋಲಿಗ, ಹಕ್ಕಿಪಿಕ್ಕಿ, ಡೊಂಗ್ರಿ ಗೆರಾಸಿಯಾ ಜನರು ತಲಾ ತಲಾಂತರಗಳಿಂದ ಅರಣ್ಯದ ಒಳಗಡೆ ವಾಸಿಸುತ್ತಿದ್ದು, ಇವರನ್ನು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಹಾಗೂ ನುಗು, ತಾರಕ, ಕಬಿನಿ, ಅಣೆಕಟ್ಟುಗಳನ್ನು ಕಟ್ಟುವಾಗ ಸಹ ಇವರಿಗೆೆ ಯಾವುದೇ ಪುನರ್ವಸತಿ ಕಲ್ಪಿಸದೇ ಅತಂತ್ರ ಸ್ಥಿತಿಗೆ ತರಲಾಗಿದೆ ಆದಿವಾಸಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಅರಣ್ಯ ಹಕ್ಕುಕಾಯ್ದೆ 2006 ನಿಯಮ 2008 ರ ತಿದ್ದುಪಡಿ 2012 ರ ಪ್ರಕಾರ ಕಾಯ್ದೆಯನ್ನು ಅನುಷ್ಠಾನಗೊಳಿಸಿಲ್ಲ ಎಂದು ಧರಣಿ ಸತ್ಯಗ್ರಹಗಳ ಮೂಲಕ ಹಕ್ಕು ಒತ್ತಾಯ ಮಾಡುತ್ತಿದ್ದು, ಆದಿವಾಸಿಗಳಿಗೆ ನ್ಯಾಯ ದೊರಕಿಸುವಲ್ಲಿ ನಿರಂತರ ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ತೀರ್ಪು ರದ್ದುಪಡಿಸಿ: ಅರಣ್ಯ ಹಕ್ಕು ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿ ಆದಿವಾಸಿಗಳ ವಿರುದ್ಧವಾಗಿ ಸುಪ್ರೀಂಕೋರ್ಟ್‌ನಲ್ಲಿ ತಪ್ಪು ತೀರ್ಪನ್ನು ನೀಡಿದೆ. ಈ ತೀರ್ಪನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.
ನಿರ್ಲಕ್ಷ್ಯ: ಆಶ್ರಮ ಶಾಲೆಗಳನ್ನು ಉನ್ನತೀಕರಿಸಿ ಶಿಕ್ಷಣ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸಬೇಕು ಎಂದು 2017ರಲ್ಲಿ ಆದೇಶವಿದ್ದರೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ. ಇದನ್ನು ಕೂಡಲೇ ಅನುಷ್ಠಾನಗೊಳಿಸಬೇಕು ಆಗ್ರಹಿಸಿದರು.
ಕೊಡಗು, ಮೈಸೂರಿನಲ್ಲಿ ಸುಮಾರು 15 ಬಡಕಟ್ಟು ಯುವ ಜನರು 10-12 ವರ್ಷಗಳಿಂದ ಕಡಿಮೆ ವೇತನಕ್ಕೆ ಶಿಕ್ಷಕರಾಗಿದ್ದಾರೆ. ಇವರನ್ನು ಕಾಯಂ ಗೊಳಿಸಬೇಕು. ಜತೆಗೆ ಅದಿವಾಸಿ ಯುವಕ ಯುವತಿಯರು ಡಿ.ಎಡ್ ಮತ್ತು ಬಿ.ಎಡ್ ತರಬೇತಿ ಪಡೆದು ಕೂಲಿ ಕೆಲಸಕ್ಕೆ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ಕೂಡ ಆಶ್ರಮ ಶಾಲೆಗಳಿಗೆ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಲು ನೇಮಕಾತಿಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಇತ್ತೀಚಿಗೆ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 11 ದಿನಗಳ ಧರಣಿ ಸತ್ಯಾಗ್ರಹದ ಪರಿಣಾಮವಾಗಿ ಮೊದಲನೆ ಹಂತದಲ್ಲಿ 10 ಮನೆಗಳನ್ನು ಡಿ.ಬಿ.ಕುಪ್ಪೆ ಮತ್ತು ಎನ್.ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲು ಸಂಸದರು, ಶಾಸಕರು ಮೈಸೂರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದರು.
ಐಟಿಡಿಪಿ ಇಲಾಖೆ ಇದರ ಬಗ್ಗೆ ನಿರ್ಲಕ್ಷ್ಯತನ ತೋರಿದ್ದು, ಅರಣ್ಯ ಭೂಮಿ ಸರ್ವೆ ಹಾಗೂ ಮನೆ ನಿರ್ಮಾಣದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಜಾನಕಮ್ಮ, ಕರಿಯಪ್ಪ, ಮಹದೇವ, ಈರಮ್ಮ, ಅಯ್ಯಪ್ಪ, ಮಹದೇವ, ಶಂಕರ್, ಜವರ, ವಾಣಿ, ಸತ್ಯ, ಗೌರಮ್ಮ, ಈಶ್ವರಿ, ಗೀತಾ, ಜಯಮ್ಮ, ಪುಟ್ಟಮ್ಮ ಸೇರಿದಂತೆ ನೂರಾರು ಆದಿವಾಸಿ ಜನರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.