ವಿಚಾರವಾದಿ ಪ್ರೊ.ಭಗವಾನ್ ವಿರುದ್ಧ ಎರಡು ಪ್ರತ್ಯೇಕ ದೂರು
Team Udayavani, Dec 29, 2018, 5:53 AM IST
ಮೈಸೂರು: ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಅವರ ರಾಮ ಮಂದಿರ ಏಕೆ ಬೇಕು? ಎಂಬ ಪುಸ್ತಕದಲ್ಲಿ ಶ್ರೀರಾಮ ಮದ್ಯ ಸೇವಿಸುತ್ತಿದ್ದ, ಮಾಂಸಾಹಾರ ತಿನ್ನುತ್ತಿದ್ದ ಎಂದು ಬರೆದು ಅಪಮಾನ ಮಾಡಿರುವುದನ್ನು ವಿರೋಧಿಸಿ ರಾಮ ಭಕ್ತರು ಶುಕ್ರವಾರ ಕುವೆಂಪು ನಗರದಲ್ಲಿನ ಪ್ರೊ.ಭಗವಾನ್ ಅವರ ಮನೆ ಎದುರು ಶ್ರೀರಾಮನ ಫೋಟೋ ತಂದು ಪೂಜೆ ಮಾಡಲು ಮುಂದಾದಾಗ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಹಿಂದೂ ಪರ ಕಾರ್ಯಕರ್ತ ನಿಶಾಂತ್ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಶ್ರೀರಾಮನ ಫೋಟೋ ತಂದು ಪೂಜೆ ಮಾಡಲು ಮುಂದಾದರು. ಆದರೆ, ರಸ್ತೆ ಮಧ್ಯೆ ಪೂಜೆ ಮಾಡಲು ಅನುಮತಿ ನೀಡಿಲ್ಲ ಎಂದು ಪೊಲೀಸರು ತಡೆಯಲು ಮುಂದಾದರೆ, ನಾವು ಪೂಜೆ ಮಾಡುತ್ತಿಲ್ಲ, ಪುಷ್ಪಾರ್ಚನೆ ಮಾಡುತ್ತಿದ್ದೇವೆ ಎಂದು ಹಿಂದೂ ಪರ ಕಾರ್ಯಕರ್ತರು ವಾದಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು. ಕಡೆಗೆ ನಿಶಾಂತ್ ಸೇರಿದಂತೆ ನಾಲ್ವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದರು.
ಹೆಚ್ಚಿನ ಭದ್ರತೆ: ಮತ್ತೆ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪ್ರೊ.ಕೆ.ಎಸ್.ಭಗವಾನ್ ಅವರ ಮನೆಗೆ 3 ಜನ ಇನ್ಸ್‌ಪೆಕ್ಟರ್, 15ಜನ ಪೊಲೀಸರು ಸೇರಿದಂತೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಪ್ರತ್ಯೇಕ: ಶ್ರೀರಾಮನಿಗೆ ಅಪಮಾನ ಮಾಡಿರುವ ಬಗ್ಗೆ ನಗರದ ವಿದ್ಯಾರಣ್ಯ ಪುರಂ ಮತ್ತು ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಪ್ರತ್ಯೇಕ ದೂರು ದಾಖಲಿಸಲಾಗಿದೆ. ವಿದ್ಯಾರಣ್ಯಪುರಂ ನಿವಾಸಿ ಸಂಜಯ್ ಎಂಬುವರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ವಿದ್ಯಾರಣ್ಯಪುರಂ ಠಾಣೆಯಲ್ಲಿ ದೂರು ದಾಖಲಿಸಿ, ಪ್ರೊ.ಭಗವಾನ್‌ರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಯುವ ಮೋರ್ಚಾ ದೂರು: ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ವಕೀಲ ಗೋಕುಲ್ ಗೋವರ್ಧನ್ ನಜರ್‌ಬಾದ್ ಪೊಲೀಸ್ ಠಾಣೆಗೆ ದೂರು ನೀಡಿ, ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಪುಸ್ತಕವನ್ನು ಬರೆದು-ಪ್ರಕಟಿಸಿ, ನಾನು ದೇವರೆಂದು ಪೂಜಿಸುವ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಇನ್ನಿತರೆ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿರುವ ಪ್ರೊ.ಕೆ.ಎಸ್.ಭಗವಾನ್ ಮತ್ತು ಪುಸ್ತಕದ ಪ್ರಕಾಶಕರಾದ ಗದಗ್‌ನ ಮೆ.ಲಡಾಯಿ ಪ್ರಕಾಶನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಭದ್ರತೆ ಕೇಳಿಲ್ಲ: ನಾನು ಭದ್ರತೆಯನ್ನೂ ಕೇಳಿಲ್ಲ. ಆ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ. ನಾನು ಹೇಳಬೇಕಾದ್ದನ್ನೆಲ್ಲಾ ಈಗಾಗಲೇ ಪುಸ್ತಕದಲ್ಲಿ ಹೇಳಿದ್ದೇನೆ. ಆಸಕ್ತರು ಪುಸ್ತಕ ಓದಲಿ, ಪುಸ್ತಕದಲ್ಲಿನ ವಿಚಾರಗಳನ್ನು ಒಪ್ಪುವುದು, ಬಿಡುವುದು ಜನರಿಗೆ ಬಿಟ್ಟವಿಚಾರ ಅದರಿಂದ ನನಗೇನು ಆಗಬೇಕಾಗಿಲ್ಲ ಎಂದು ಪ್ರೊ.ಕೆ.ಎಸ್.ಭಗವಾನ್ ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.