ಕಾಡಾನೆದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ಸಿಬ್ಬಂದಿಗೆ ಗಾಯ
ರೇಡಿಯೋ ಕಾಲರ್ ಅಳವಡಿಸಲು ತೆರಳಿದ್ದ ಅರಣ್ಯ ಸಿಬ್ಬಂದಿ ಇದಾಯತ್ ಮೇಲೆ ಕಾಡಾನೆ ಹಠಾತ್ ದಾಳಿ. ಪ್ರಾಣಾಪಾಯದಿಂದ ಪಾರು.
Team Udayavani, Aug 23, 2021, 12:30 PM IST
ಪ್ರಾತಿನಿಧಿಕ ಚಿತ್ರ
ಹುಣಸೂರು : ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಸುವ ವೇಳೆ ಹಠಾತ್ ದಾಳಿ ನಡೆಸಲು ಮುಂದಾದ ಕಾಡಾನೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕವಾಡಿಯೊಬ್ಬ ಆಯತಪ್ಪಿ ಬಿದ್ದು ಕೈ ಮೂಳೆ ಮುರಿದು ಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಾಗರಹೊಳೆ ಉದ್ಯಾನವನದ ವೀರನಹೊಸಹಳ್ಳಿ ವಲಯದಲ್ಲಿ ನಡೆದಿದೆ.
ಮತ್ತಿಗೋಡು ಆನೆ ಶಿಬಿರದ ಕವಾಡಿ ಇದಾಯತ್ ರವರ ಎಡಗೈ ಮೂಳೆ ಮುರಿದಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಆರತಿ ಬೆಳಗಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡ ಸಚಿವ ಕೆಎಸ್ ಈಶ್ವರಪ್ಪ
ಘಟನೆ ವಿವರ : ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಪ್ಪಿಸುವ ಸಲುವಾಗಿ ಅರಣ್ಯ ಇಲಾಖೆಯು ನಾಗರಹೊಳೆ ಉದ್ಯಾನವನದಂಚಿನಲ್ಲಿ ನಿತ್ಯ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ, ನಿಗಾ ಇಡುವ ಸಂಬಂದ ಶನಿವಾರದಂದು ಮತ್ತಿಗೋಡು ಶಿಬಿರದ ಅರ್ಜುನ, ಗೋಪಾಲಸ್ವಾಮಿ, ಭೀಮ, ಶ್ರೀಕಂಠ, ಮಹೇಂದ್ರ, ಸಾಕಾನೆಗಳೊಂದಿಗೆ ಉದ್ಯಾನವನದವೀರನಹೊಸಹಳ್ಳಿ ವಲಯ ವ್ಯಾಪ್ತಿಯದ ಮಂಟಳ್ಳಿ-ತುಪ್ಪದಕೊಳ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಕಾಡಾನೆಯೊಂದು ಕಾಣಿಸಿದೆ.
ತಕ್ಷಣ ಸಾಕಾನೆಗಳ ಸಹಾಯದಿಂದ ಆನೆಗೆ ಅರವಳಿಕೆ ಮದ್ದು ನೀಡಲು ಮುಂದಾಗಿದ್ದ ವೇಳೆ ಕಾಡಾನೆಯು ತಪ್ಪಿಸಿಕೊಂಡು ಸಾಕಾನೆಯ ಕಾವಾಡಿ ಇದಾಯತ್‌ರ ಮೇಲೆ ಒಮ್ಮೆಲೆ ದಾಳಿ ಮಾಡಲು ಯತ್ನಿಸಿದೆ. ಇದಾಯತ್ ತಪ್ಪಿಸಿಕೊಳ್ಳುವ ಭರದಲ್ಲಿ ಎಡವಿ ಬಿದ್ದು ಗಾಯಗೊಂಡು ಎಡಗೈನ ಮೂಳೆ ಮುರಿದುಕೊಂಡಿದ್ದಾರೆ.
ಸ್ಥಳದಲ್ಲಿದ್ದ ಸಿಬ್ಬಂದಿಗಳು ಜೋರಾಗಿ ಕೂಗಿಕೊಂಡ ಪರಿಣಾಮ ಕಾಡಾನೆ ಗಾಬರಿಗೊಂಡು ವಾಪಾಸ್ಸಾದ್ದರಿಂದ ಅನಾಹುತ ತಪ್ಪಿದೆ. ಗಾಯಗೊಂಡ ಕಾವಾಡಿ ಇದಾಯತ್‌ರನ್ನು ಸಿಬ್ಬಂದಿಗಳು ತಕ್ಷಣವೇ ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯದಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ಈ ಘಟನೆ ನಡೆದಿದ್ದು, ಕವಾಡಿ ಇನಾಯತ್‌ರ ಕೈ ಮುರಿದಿದೆ. ಸೂಕ್ತ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆತಂಕಪಡುವಂತಿಲ್ಲಾ, ಕೊನೆಗೂ ಆ ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ : ಸಸಿ ನೆಡುವ ಮೂಲಕ ಶಾಲೆ- ಕಾಲೇಜು ಭೌತಿಕ ತರಗತಿ ಪುನಾರಂಭಕ್ಕೆ ಚಾಲನೆ ನೀಡಿದ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.