ಮುಕ್ತ ವಿವಿ ಮಾನ್ಯತೆಗೆ ಯುಜಿಸಿ ಅಧ್ಯಕ್ಷರ ಭೇಟಿ ಮಾಡುವೆ: ಸಿಎಂ
Team Udayavani, Sep 11, 2017, 7:00 AM IST
ಮೈಸೂರು: ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಾನ್ಯತೆ ನವೀಕರಣಕ್ಕಾಗಿ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ)ದ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಮುಕ್ತ ವಿವಿಗೆ 2017-18ನೇ ಸಾಲಿಗೂ ಮಾನ್ಯತೆ ಸಿಗುವುದು ಅನುಮಾನವೆಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಅವರು ಟ್ವೀಟ್ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ದೆಹಲಿಗೆ ಹೋದಾಗ ಯುಜಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ತಿಳಿಸಿದರು. ಮುಕ್ತ ವಿವಿಗೆ ಮಾನ್ಯತೆ ಕೊಡುವಂತೆ ಉನ್ನತ ಶಿಕ್ಷಣ ಇಲಾಖೆಯಿಂದ ಯುಜಿಸಿಗೆ ಪತ್ರ ಬರೆಯಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯಕ್ಕೂ ಪತ್ರ ಬರೆಯಲಾಗಿದೆ. ಆದರೂ, ಮಾನ್ಯತೆ ನವೀಕರಣವಾಗುತ್ತಿಲ್ಲ ಎಂದರೆ, ಇದು ಸರ್ಕಾರದ ತಪ್ಪಲ್ಲ. ಹಿಂದೆ ವಿಶ್ವವಿದ್ಯಾನಿಲಯದ ಆಡಳಿತ ನಡೆಸಿದ ಕುಲಪತಿಗಳ ತಪ್ಪು ಎಂದು ವಿಷಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.