![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 13, 2023, 11:55 AM IST
ಮೈಸೂರು: ಅಸಾಂವಿಧಾನಿಕ ಒತ್ತಡಗಳು ಸರ್ಕಾರವನ್ನು ನಿಯಂತ್ರಣ ಮಾಡುತ್ತಿವೆ. ರಾಷ್ಟ್ರಭಕ್ತನಂತೆ ಉದ್ದುದ್ದ ಬರೆಯುವ ಚಕ್ರವರ್ತಿ ಸೂಲಿಬೆಲೆ, ಪಠ್ಯಪುಸ್ತಕ ಕುಲಗೆಡಿಸಿದ ಚಕ್ರತೀರ್ಥ, ಶತಾವದಾನಿ ಗಣೇಶ್, ಪ್ರಮೋದ್ ಮುತಾಲಿಕ್ ಮುಂತಾದವರು ಸರ್ಕಾರವನ್ನು ನಿಯಂತ್ರಿಸುತ್ತಿದ್ದಾರೆ. ಸಂವಿಧಾನವನ್ನು ಗೇಲಿ ಮಾಡಿದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ವಿಧಾನ ಪರಿಷತ್ತು ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಕಿರುನಾಟಕ ಪ್ರದರ್ಶನ ಮಾಡಲಾಗಿದೆ. ಅದರಲ್ಲಿ ಜಾತೀಯತೆ, ಅಸ್ಪೃಶ್ಯತೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ವ್ಯವಸ್ಥೆ ಬಗ್ಗೆ ಏನೋ ಹೇಳಲು ಹೋಗಿ ತಿರುಚಿದ್ದಾರೆ. ಅದರ ವಿಡಿಯೋ ನೋಡಿದ್ದೇನೆ. ದಲಿತ ಹುಡುಗ ಮೇಲ್ವರ್ಗದ ಹುಡುಗಿಯನ್ನು ಮುಟ್ಟುವಾಗ ಟಚ್ ಮಿ ನಾಟ್ ಅಂತ ಹಾಡು ಹಾಕಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಬಿಯರ್ ಅಂಬೇಡ್ಕರ್ ಎಂದು ಸಂಭೋದಿಸಲಾಗಿದೆ. ಪ್ರೇಕ್ಷಕರ ಸಾಲಿನಲ್ಲಿದ್ದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಕೇಕೆ ಹಾಕಿ ನಕ್ಕಿದ್ದಾರೆ. ಇದು ರಾಷ್ಟ್ರೀಯ ಅವಮಾನ. ಖಾಸಗಿ ವಿಶ್ವವಿದ್ಯಾಲಯಗಳಿಗೆ ಲಂಗು ಲಗಾಮಿಲ್ಲ. ಕೋಟ್ಯಂತರ ರೂ. ತೆಗೆದುಕೊಂಡು ವಿವಿಗಳಿಗೆ ಅನುಮೋದನೆ ಕೊಟ್ಟರು. ಸಾಮಾಜಿಕ ಜಾಲತಾಣಗಳಲ್ಲಿ ನಾಟಕಕ್ಕೆ ವಿರೋಧ ವ್ಯಕ್ತವಾಗಿದೆ. ಸರ್ಕಾರ ಜೈನ್ ವಿಶ್ವವಿದ್ಯಾಲಯದ ಮಾನ್ಯತೆ ರದ್ದುಪಡಿಸಬೇಕಿತ್ತು. ಸರ್ಕಾರ ಯಾರದ್ದೋ ಒತ್ತಡಕ್ಕೆ ಮಣಿದು ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಂಡಿದೆ. ಉನ್ನತ ಶಿಕ್ಷಣ ಸಚಿವರು, ಸಮಾಜ ಕಲ್ಯಾಣ ಸಚಿವರು, ರಾಜ್ಯಪಾಲರು ದನಿ ಎತ್ತಿಲ್ಲ ಎಂದರು.
ಕಾಲೇಜು ಆಡಳಿತ ಮಂಡಳಿ ಕನಿಷ್ಠ ಕ್ಷಮೆ ಕೇಳಿಲ್ಲ. ಸಂಸದರು, ಶಾಸಕರು ಸೊಲ್ಲೆತ್ತಿಲ್ಲ. ವಿರೋಧ ಪಕ್ಷಗಳೂ ಖಂಡಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್, ಗೃಹ ಮಂತ್ರಿಗಳು ಭಾರತ ಮಾತೆಯ ದೇವಾಲಯ ಉದ್ಘಾಟಿಸಿದ್ದಾರೆ. ಭಾರತ ಮಾತೆ ಭಾರತೀಯರ ಹೃದಯ ಮಂದಿರಗಳಲ್ಲಿ ರಾರಾಜಿಸುತ್ತಿದ್ದಾಳೆ. ಭಾರತ ಮಾತೆ ಪೂಜಿಸುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ. ನಿಮ್ಮನ್ನು ನೋಡಿ ದೇವರುಗಳೇ ಹೆದರಿಕೊಂಡು ಓಡಿಹೋಗುತ್ತಾರೆ. ಎಲ್ಲ ಕಡೆ ಭಾರತ ಮಾತೆ ದೇವಾಲಯ ಕಟ್ಟುತ್ತಾರಂತೆ. ಸಂವಿಧಾನಕ್ಕೆ ಅಪಮಾನ ಮಾಡಿ ಭಾರತ ಮಾತೆ ಪೂಜೆ ಮಾಡುವುದನ್ನು ಹೇಳಿಕೊಡುತ್ತಿದ್ದೀರಿ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.