ಪಕ್ಷ ಸಂಘಟನೆಗಾಗಿ ವಿಸ್ತಾರಕ್ ಆದ ಕೇಂದ್ರ ಸಚಿವೆ
Team Udayavani, Jul 14, 2017, 11:47 AM IST
ಮೈಸೂರು: ಪಕ್ಷದ ತತ್ವ-ಸಿದ್ಧಾಂತ, ವಿಚಾರಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆ ವಿಸ್ತರಣೆ ದೃಷ್ಟಿಯಿಂದ ಬಿಜೆಪಿ ಹಮ್ಮಿಕೊಂಡಿರುವ ವಿಸ್ತಾರಕ್ ಯೋಜನೆಯಡಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ನಿರ್ಮಲ ಸೀತಾರಾಮನ್ ಗುರುವಾರ ಮೈಸೂರಿನಲ್ಲಿ ಒಂದು ದಿನದ ವಿಸ್ತಾರಕ್ ಆಗಿ ಕೆಲಸ ಮಾಡಿದರು.
ಬೆಳಗ್ಗೆ 7 ಗಂಟೆಗೆ ಎನ್.ಆರ್.ಮೊಹಲ್ಲಾದ ರಾಜೇಂದ್ರ ನಗರದಲ್ಲಿ ಸ್ವತ್ಛ ಭಾರತ ಅಭಿಯಾನ ಮತ್ತು ವೃûಾರೋಪಣ, ರಕ್ತದಾನ ಶಿಬಿರ ಕಾರ್ಯಕ್ರಮ, 10 ಗಂಟೆಗೆ ಗೋಕುಲಂನ 31ನೇ ವಾರ್ಡ್‌ನಲ್ಲಿ ಮತಗಟ್ಟೆಗೆ ಭೇಟಿ, ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ, ವಿದ್ಯಾರಣ್ಯಪುರಂನ ವಾರ್ಡ್ ಸಂಖ್ಯೆ 6ರಲ್ಲಿ ಬೂತ್ ಸಮಿತಿ ಸಭೆ ಹಾಗೂ ಉದ್ಯಮಿಗಳ ಜತೆಗೆ ಜಿಎಸ್‌ಟಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
3 ಸ್ಥಾನ ಗೆಲುವು: ನಗರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಇದೇ ವೇಳೆ ನಿರ್ಮಲ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದರು.
ಬೇರೆ ಬೇರೆ ಕಾರಣಗಳಿಂದ ಪಕ್ಷದ ಶಾಸಕರಿದ್ದ ನಗರದ ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳನ್ನು ಕಳೆದುಕೊಂಡಿದೆ. 2018ರ ಚುನಾವಣೆಯಲ್ಲಿ ಈ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಕರ್ನಾಟಕದಲ್ಲಿ ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಸ್ತಾರಕ್ ಯೋಜನೆ ಹಾಗೂ ದಲಿತರ ಮನೆಗಳಿಗೆ ಭೇಟಿ ಕಾರ್ಯಕ್ರ ಮಗಳನ್ನು ರೂಪಿಸಿಲ್ಲ. ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಜನ್ಮಶತಾಬ್ಧಿ ವರ್ಷಾಚರಣೆ ಹಿನ್ನೆಲೆ ದೇಶವ್ಯಾಪಿ ಬಿಜೆಪಿ ನಡೆಸುತ್ತಿರುವ ಕಾರ್ಯಕ್ರಮ.
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಜತೆಗೆ ಪಕ್ಷದ ವಿಚಾರಗಳನ್ನು ತಿಳಿಸಲಾಗುತ್ತಿದೆ. ದೇಶದ ಎಲ್ಲ ವರ್ಗದ ಜನರನ್ನೂ ಒಟ್ಟಿಗೆ ಕರೆದೊಯ್ಯಬೇಕು ಎಂಬ ಸದುದ್ದೇಶದಿಂದ ದಲಿತರ ಮನೆಗಳಿಗೆ ಪಕ್ಷದ ಮುಖಂಡರು ಭೇಟಿ ನೀಡುತ್ತಿದ್ದಾರೆ. ಈ ಮೂಲಕ ಬಿಜೆಪಿಯನ್ನು ಸರ್ವವ್ಯಾಪಿ-ಸರ್ವಸ್ಪರ್ಶಿಗೊಳಿಸುವ ಯೋಜನೆ ಇದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.