ಸಿಎಂರಿಂದ ಡಿಜಿಟಲ್‌ ಪ್ರಚಾರ ಫ‌ಲಕ ಅನಾವರಣ


Team Udayavani, Jun 6, 2017, 1:03 PM IST

mys6.jpg

ಮೈಸೂರು: ಸರ್ಕಾರದ ಯೋಜನೆಗಳ ಮಾಹಿತಿಯನ್ನು ವರ್ಣರಂಜಿತವಾಗಿ ಡಿಜಿಟಲ್‌ ರೂಪದಲ್ಲಿ ಒದಗಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ಕರ್ಜನ್‌ ಪಾರ್ಕ್‌ನಲ್ಲಿ ಅಳವಡಿಸಿರುವ ಡಿಜಿಟಲ್‌ ಡಿಸ್‌ಪ್ಲೇ ಬೋರ್ಡ್‌ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಡಿಜಿಟಲ್‌ ಡಿಸ್‌ಪ್ಲೇ ಅನಾವರಣಗೊಳಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುಮಾರು 20 ನಿಮಿಷಗಳ ಕಾಲ ಸರ್ಕಾರದ ಕಾರ್ಯಕ್ರಮಗಳ ಪ್ರಚಾರದ ಸ್ಲೆ„ಡ್ಸ್‌, ಕರ್ನಾಟಕ ಪ್ರವಾಸೋದ್ಯಮ ಪ್ರೋಮೊ ಮುಂತಾದವುಗಳನ್ನು ವೀಕ್ಷಿಸಿದರು.

ದೇಶದಲ್ಲೇ ಮೊದಲ ಪ್ರಯತ್ನ: ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಸರ್ಕಾರ ಯೋಜನೆಗಳನ್ನು ದೊಡ್ಡ ಎಲ್‌ಇಡಿ ಪರದೆಯ ಮೂಲಕ ಪ್ರಚಾರ ನೀಡುವ ಪ್ರಯತ್ನಕ್ಕೆ ವಾರ್ತಾ ಇಲಾಖೆಯು ಕೈ ಹಾಕಿದೆ. ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಇಲಾಖೆಯು ರಾಜ್ಯದ 10 ಕಡೆಗಳಲ್ಲಿ ಮೊದಲ ಹಂತದಲ್ಲಿ ಡಿಜಿಟಲ್‌ ಪ್ರಚಾರ ಫ‌ಲಕಗಳನ್ನು ಅಳವಡಿಸುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌ ಮಾಹಿತಿ ನೀಡಿದರು.

ಮೊದಲ ಹಂತದಲ್ಲಿ ಬೆಂಗಳೂರಿನ ಮೂರು ಕಡೆ ಸೇರಿದಂತೆ ಮೈಸೂರು, ಹಾಸನ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಅಳವಡಿಸಲಾಗುತ್ತಿದೆ. ಹಂತ ಹಂತವಾಗಿ ಇದನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಹೇಳಿದರು.

175 ತಾಲುಕಿನಲ್ಲೂ ಡಿಜಿಟಲ್‌ ಪ್ರಚಾರ: 2017-18ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು 175 ತಾಲೂಕುಗಳಲ್ಲೂ ಡಿಜಿಟಲ್‌ ಪ್ರಚಾರ ಫ‌ಲಕಗಳನ್ನು ಅಳವಡಿಸುವುದಾಗಿ ಘೋಷಿಸಿದ್ದಾರೆ. ಇದನ್ನೂ ಸಹ ಪಿಪಿಪಿ ಮಾದರಿಯಲ್ಲಿ ಅಳವಡಿಸಲು ಇಲಾಖೆಯು ಮುಂದಾಗಿದೆ. ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ.

ವಾರ್ತಾ ಇಲಾಖೆಯು ತನ್ನ ಒಡೆತನದಲ್ಲಿರುವ 2500ಕ್ಕೂ ಹೆಚ್ಚು ಹೆದ್ದಾರಿ ಫ‌ಲಕಗಳಲ್ಲಿ ಫ್ಲೆಕ್ಸ್‌ಅನ್ನು ಅಳವಡಿಸಿ ಸರ್ಕಾರದ ವಿವಿಧ ಯೋಜನೆಗಳಿಗೆ ಪ್ರಚಾರ ನೀಡುತ್ತಿದೆ. ರಾಜ್ಯದಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಲಾಗಿದೆ. ಇದಕ್ಕೆ ಪರ್ಯಾಯವಾಗಿ ಮೊದಲ ಹೆಜ್ಜೆಯಾಗಿ ಇಲಾಖೆಯು ಡಿಜಿಟಲ್‌ ಫ‌ಲಕಗಳ ಮೂಲಕ ಪ್ರಚಾರ ನೀಡಲು ಕ್ರಮ ಕೈಗೊಳ್ಳುತ್ತಿದೆ.

ಕಾರ್ಯಕ್ರಮಗಳ ನೇರ ಪ್ರಸಾರಕ್ಕೆ: ರಾಜ್ಯದಲ್ಲಿ ಅಳವಡಿಸುತ್ತಿರುವ ಹೊಸ ಡಿಜಿಟಲ್‌ ಪ್ರಚಾರ ಫ‌ಲಕಗಳಲ್ಲಿ ಸರ್ಕಾರದ ಯೋಜನೆಗಳನಷ್ಟೇ ಪ್ರಚಾರ ಮಾಡುವುದಿಲ್ಲ. ರಾಜ್ಯದ ಕಲೆ ಸಂಸ್ಕೃತಿ ಮತ್ತು ಪರಂಪರೆ ಮತ್ತು ಪ್ರವಾಸಿ ತಾಣಗಳು ಸೇರಿದಂತೆ ನಾಡು – ನುಡಿಯನ್ನು ಇಲ್ಲಿ ಪ್ರತಿಬಿಂಬಿಸಲಾಗುವುದು.

ಸಾಮಾಜಿಕ ಸಂದೇಶಗಳು ಮತ್ತು ರಸ್ತೆ ಸುರಕ್ಷತೆಯ ಬಗ್ಗೆಯೂ ಇದರ ಮೂಲಕ ಜನರಿಗೆ ಮಾಹಿತಿ ನೀಡಲಾಗುವುದು. ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಸಹ ನೇರ ಪ್ರಸಾರದ ರೂಪದಲ್ಲಿ ಎಲ್ಲಾ ಡಿಜಿಟಲ್‌ ಪ್ರಚಾರ ಫ‌ಲಕಗಳಲ್ಲೂ ಅವುಗಳನ್ನು ಪ್ರದರ್ಶಿಸಬಹುದಾಗಿದೆ.

ಸರ್ಕಾರಿ ಯೋಜನೆಗಳನ್ನು ಪ್ರಚಾರ ಪಡಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಈ ಡಿಜಿಟಲ್‌ ಪ್ರಚಾರ ಫ‌ಲಕಗಳನ್ನು ಸ್ಥಳೀಯ ಜಿಲ್ಲಾಡಳಿತವು ಸಹ ಸಾರ್ವಜನಿಕರಿಗೆ ಮಾಹಿತಿ ನೀಡಲು ಬಳಸಿಕೊಳ್ಳಬಹುದಾಗಿದೆ ಎಂದರು.

ಈ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಸಂಸದ ಧ್ರುವನಾರಾಯಣ, ಮೇಯರ್‌ ಎಂ.ಜೆ. ರವಿಕುಮಾರ್‌, ಶಾಸಕರಾದ ಎಂ.ಕೆ.ಸೋಮಶೇಖರ್‌, ವಾಸು, ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ. ಆರ್‌. ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.