ರೈತ ದಸರಾದಲ್ಲಿ ರೈತರ ಬದುಕು ಅನಾವರಣ
Team Udayavani, Oct 2, 2019, 3:00 AM IST
ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ನಡೆಯುತ್ತಿರುವ ರೈತ ದಸರಾ, ರೈತರ ಬದುಕನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ಜೀವಣ್ಣರಾಯನಕಟ್ಟೆ ಮೈದಾನದಲ್ಲಿ ಆಯೋಜಿಸಿರುವ ರೈತ ದಸರಾ ಉದ್ಘಾಟಿಸಿ ಮಾತನಾಡಿದರು.
ಮೈಸೂರು ದಸರಾಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಬಂದು ಕಣ್ತುಂಬಿ ಕೊಳ್ಳುತ್ತಾರೆ. ಮೈಸೂರು ದಸರಾವನ್ನು ಸರಿಗಟ್ಟುವ ಮತ್ತೊಂದು ಹಬ್ಬ ರಾಜ್ಯದಲ್ಲಿ ಆಚರಿಸುವುದು ಕಡಿಮೆ. ರೈತರು ನಮ್ಮೆಲ್ಲರ ಬೆನ್ನೆಲುಬು ಅವರಿಗಾಗಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಒಳ್ಳೆಯ ಸಂದೇಶ ಕೊಡುತ್ತದೆ. ದಸರಾ ಹಬ್ಬದಲ್ಲಿ ನಾಡಿನ ರೈತರು ಭಾಗಿಯಾಗಿ ಮತ್ತಷ್ಟು ಮೆರಗು ನೀಡಬೇಕು. ದಸರಾ ಎಂದರೆ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಹಬ್ಬವಾಗಿದ್ದು ರೈತರು ಭಾಗಿಯಾಗುವುದು ಸಾಂಪ್ರದಾಯಿಕ ಸಂಕೇತ ಎಂದು ಬಣ್ಣಿಸಿದರು.
ಕೃಷಿ ಬಜೆಟ್: ಯಡಿಯೂರಪ್ಪ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿ ರೈತರಿಗೆ ಇದು ನಮ್ಮ ಬಜೆಟ್ ಅನ್ನುವ ಭಾವನೆ ಮೂಡಿಸಿದರು. ರಾಜ್ಯದಲ್ಲಿ ಅನೇಕ ವರ್ಷಗಳಿಂದ ಬರಗಾಲ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಭಾರೀ ಮಳೆಯಾಗಿ ಪ್ರವಾಹ ಸಂಭವಿಸಿ ಅಲ್ಲಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಾಗಿರಬಹುದು. ಆದರೆ, ರಾಜ್ಯದ ಎಲ್ಲಾ ಜಲಾಶಯಗಳೂ ತುಂಬಿರುವುದರಿಂದ ರೈತರಿಗೆ ನೆಮ್ಮದಿಯ ಭಾವ ಬಂದಿದೆ.
ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ ಎಂದರು. ಶಾಸಕ ಎಲ್.ನಾಗೇಂದ್ರ ಮಾತನಾಡಿ, ದಸರಾ ಕಾರ್ಯಕ್ರಮಗಳಲ್ಲಿ ರೈತರಿಗೆ ವಿಶೇಷವಾಗಿ ಅವಕಾಶ ಕಲ್ಪಿಸಲು ಹಾಗೂ ಅವರನ್ನು ಕ್ರೀಡೆ ಮತ್ತಿತರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಅವರಿಗೂ ದಸರಾ ಪರಂಪರೆ ತಿಳಿಸುವ ಸಂಪ್ರದಾಯ ಈ ರೈತ ದಸರಾ ಕಾರ್ಯಕ್ರಮದಲ್ಲಿ ಅಡಗಿದೆ ಎಂದು ಹೇಳಿದರು.
ವಿಚಾರ ವಿನಿಮಯ: ತಂಬಾಕು ಬೆಳೆಗೆ ಪರ್ಯಾಯ ಬೆಳೆ ಯೋಜನೆ ಕುರಿತು ಸಾಧಕ ರೈತರೊಂದಿಗೆ ವಿಚಾರ ವಿನಿಮಯ, ಕೃಷಿ ಸಂಬಂಧಿತ ರೇಷ್ಮೆ, ತೋಟಗಾರಿಕೆ, ಅರಣ್ಯ, ಪಶುಪಾಲನೆ, ಮೀನುಗಾರಿಕೆಯಲ್ಲಿ ಸಾಧನೆ ಮಾಡಿದ ರೈತರನ್ನು ಸನ್ಮಾನಿಸಲಾಯಿತು.
ಮೆರವಣಿಗೆ: ಸಭಾ ಕಾರ್ಯಕ್ರಮಕ್ಕೂ ಮುನ್ನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಿಂದ ಜೆ.ಕೆ.ಮೈದಾನದವರೆಗೆ ರೈತ ದಸರಾ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಪೂಜಾ ಕುಣಿತ, ವೀರಗಾಸೆ, ಹುಲಿವೇಷ ಸೇರಿದಂತೆ ಹಲವಾರು ಕಲಾ ತಂಡಗಳು, ಸ್ತಬ್ಧಚಿತ್ರಗಳು ಭಾಗಿಯಾಗಿದ್ದು, ಬಂಡೂರಿ ಕುರಿಗಳ ಪ್ರದರ್ಶನ ಹಾಗೂ ಏಳು ಎತ್ತಿನ ಗಾಡಿಗಳ ಮೂಲಕ ರೈತರು ಜೆ.ಕೆ ಮೈದಾನದವರೆಗೆ ಮೆರವಣಿಗೆ ಮೂಲಕ ಸಾಗಿದರು. ಈ ವೇಳೆ ಶಾಸಕ ಎಸ್.ಎ ರಾಮದಾಸ್, ಮೇಯರ್ ಪುಷ್ಪಲತಾ ಜಗನ್ನಾಥ್, ಉಪ ಮೇಯರ್ ಶಫೀ ಅಹಮದ್, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ಜಂಟಿ ಕೃಷಿ ನಿರ್ದೇಶಕ ಡಾ.ಮಹಂತೇಶಪ್ಪ ಇತರರಿದ್ದರು.
ದೇಗುಲಗಳಲ್ಲಿ ಸಾಮೂಹಿಕ ವಿವಾಹ: ರಾಜ್ಯದಲ್ಲಿ 34 ಸಾವಿರಕ್ಕೂ ಹೆಚ್ಚು ಮುಜರಾಯಿ ದೇವಸ್ಥಾನಗಳಿದ್ದು, ಈ ಪೈಕಿ ಸಂಪದ್ಬರಿತ ದೇವಸ್ಥಾನಗಳ ಮೂಲಕ ಸಾಮೂಹಿಕ ವಿವಾಹ ಏರ್ಪಡಿಸಿ, ವಧುವಿಗೆ ತಾಳಿ, ಸೀರೆ ಕೊಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮುಜರಾಯಿ ಹಾಗೂ ಮೀನುಗಾರಿಕೆ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.