ಭತ್ತಕ್ಕೆ 2,488 ರೂ. ನೀಡಲು ಆಗ್ರಹ

Team Udayavani, Nov 21, 2020, 3:06 PM IST

ಭತ್ತಕ್ಕೆ 2,488 ರೂ. ನೀಡಲು ಆಗ್ರಹ

ಕೆ.ಆರ್‌.ನಗರ: ರೈತರು ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಕ್ವಿಂಟಲ್‌ಗೆ 2,488 ರೂ. ನೀಡಬೇಕು ಹಾಗೂ ರೋಗದಿಂದ ಬೆಳೆ ಹಾಳಾಗಿರುವುದಕ್ಕೆ ಎಕರೆಗೆ 25 ಸಾವಿರ ರೂ. ಪರಿಹಾರ ವಿತರಿಸಬೇಕು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಯ್‌ಗೌಡ ಸರ್ಕಾರವನ್ನು ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ರೈತರು ಮುಖಂಡರು ಮತ್ತು ಕಬ್ಬುಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಭತ್ತ ಖರೀದಿ ಕೇಂದ್ರವನ್ನು ಅತೀ ಶೀಘ್ರವಾಗಿ ತೆರೆಯಲು ಕ್ರಮ ಕೈಗೊಳ್ಳಬೇಕು. 2019- 20ನೇ ಸಾಲಿನ ಭತ್ತ ಖರೀದಿಸಿರುವುದಕ್ಕೆ ಮುಖ್ಯಮಂತ್ರಿಯವರು 200 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೂಡಲೇ ರೈತರಿಗೆ ಪ್ರೋತ್ಸಾಹ ಧನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಲೂಕಿನ ಹೊಸ ಅಗ್ರಹಾರ ಗ್ರಾಮದ ಕೆರೆಯ ಸುಮಾರು ಐದು ಎಕರೆಗೂ ಅಧಿಕ ಒತ್ತುವರಿ ಜಾಗವನ್ನು ತೆರವುಗೊಳಿಸಲಾಗಿದ್ದು, ಆ ಜಾಗವನ್ನು ತೋಟಗಾರಿಕೆ ಇಲಾಖೆಗೆ ವಹಿಸಿ ಅದರಲ್ಲಿ ತೋಟಗಾರಿಕೆ ಬೆಳೆ ಅಭಿವೃದ್ಧಿ ಕೇಂದ್ರ ಸ್ಥಾಪಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು. ಇದರಿಂದ ಸುತ್ತ ಮುತ್ತಲ ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆಎಂದು ತಿಳಿಸಿದರು.

ಕಾರ್ಖಾನೆ ಆರಂಭಿಸಿ: ತಾಲೂಕಿನ ರೈತರ ಜೀವನಾಡಿಯಾಗಿರುವ ಚುಂಚನಕಟ್ಟೆಯ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಅಡ್ಡಿಯಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಕಾರ್ಖಾನೆ ಪ್ರಾರಂಭಿಸಬೇಕು. 2017 ರಿಂದ 2020ರವರೆಗೆ ತಾಲೂಕಿನಲ್ಲಿ ಕೆರೆಗಳ ಹೂಳು ತೆಗೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ರೈತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕು. ಇದರ ಬಗ್ಗೆಶೀಘ್ರದಲ್ಲಿ ಸ್ಪಂದಿಸದಿದ್ದರೆ ರೈತ ಸಂಘಟನೆ ವತಿಯಿಂದ ಉಗ್ರ ಹೋರಾಟ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಮುಂದಿನ ಹೋರಾಟದ ಬಗ್ಗೆ ಶೀಘ್ರದಲ್ಲಿ ರೈತ ಮುಖಂಡರ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಎಚ್‌.ಎಸ್‌. ವಿಶ್ವಾಸ್‌, ತಾಲೂಕು ಅಧ್ಯಕ್ಷ ಕೆ.ಪಿ.ಶಿವರಾಜು, ಪ್ರಧಾನ ಕಾರ್ಯದರ್ಶಿ ರುದ್ರೇಶ್‌, ಸಂಘಟನಾ ಕಾರ್ಯದರ್ಶಿ ಜಿತೇಂದ್ರ, ಪದಾಧಿಕಾರಿಗಳಾದ ಡಿ.ಸಿ.ಸುನಿಲ್‌, ಹೇಮಂತ್‌, ಹರೀಶ್‌, ಪ್ರಶಾಂತ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.