ವಾಜಪೇಯಿ ಜನ್ಮದಿನ: ರೈತರು, ಪೌರ ಕಾರ್ಮಿಕರಿಗೆ ಸನ್ಮಾನ


Team Udayavani, Dec 27, 2020, 7:30 PM IST

ವಾಜಪೇಯಿ ಜನ್ಮದಿನ: ರೈತರು, ಪೌರ ಕಾರ್ಮಿಕರಿಗೆ ಸನ್ಮಾನ

ಮೈಸೂರು: ಮಾಜಿ ಪ್ರಧಾನಿ ಅಟಲ್‌ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ನಗರದ ವಿವಿಧೆಡೆಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಾಜಪೇಯಿ ಅವರ ಸಾಧನೆ ಮತ್ತು ಕೊಡುಗೆಯನ್ನು ಸ್ಮರಿಸಿದರು.

ಪಿಂಜರಾ ಪೋಲ್‌ನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹಸುಗಳನ್ನು ತೊಳೆದು ಗೋಶಾಲೆ ಸ್ವತ್ಛಗೊಳಿಸುವ ಮೂಲಕ ವಾಜಪೇಯಿಅವರ ಜನ್ಮದಿನ ಆಚರಣೆ ಮಾಡಲಾಯಿತು. ಸಂಸದಪ್ರತಾಪ್‌ ಸಿಂಹ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌.ಶ್ರೀವತ್ಸ ಹಾಗೂಯುವ ಮೋರ್ಚಾ ಕಾರ್ಯಕರ್ತರು ಗೋಶಾಲೆ ಸ್ವತ್ಛಗೊಳಿಸಿ, ಗೋವುಗಳನ್ನು ತೊಳೆದು ಅವುಗಳಿಗೆ ಪೂಜೆ ಸಲ್ಲಿಸಿದರು.

ಸಾಕಷ್ಟು ಕಾರ್ಯಕ್ರಮ : ಈ ವೇಳೆ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ತಾನು ಬಾಲ್ಯದಲ್ಲಿ ಹಸುಗಳನ್ನು ತೊಳೆದು, ಹೋಟೆಲ್‌ಗ‌ಳಿಗೆ ಹಾಲು ಹಾಕಿ ನಂತರ ಶಾಲೆಗೆ ಹೋಗುತ್ತಿದ್ದೆ. ಈಗ ಮತ್ತೆಬಾಲ್ಯದ ನೆನಪಾಯಿತು. ಭಾರತದ ಹೆಮ್ಮೆಯ ವ್ಯಕ್ತಿತ್ವ ಅವರು. ಹೈವೇ, ನ್ಯೂಕ್ಲಿಯರ್‌ ಟೆಸ್ಟ್‌, ಸರ್ವಶಿಕ್ಷಣ ಅಭಿಯಾನ, ಮೊಬೈಲ್‌ ಕ್ರಾಂತಿ, ವಸತಿ ಕ್ಷೇತ್ರದ ಅಭಿವೃದ್ಧಿ ಸೇರಿ ಅಭಿವೃದ್ಧಿಗೆ ಪೂರಕವಾದ ಸಾಕಷ್ಟು ಕಾರ್ಯಕ್ರಮಗಳ ಹರಿಕಾರ ಎಂದು ಸ್ಮರಿಸಿದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್‌ ಗೌಡ, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್‌ ಕುಮಾರ್‌, ಧೀರಜ್‌ ಪ್ರಸಾದ್‌, ಜೈಶಂಕರ್‌ ಮತ್ತಿತರರು ಇದ್ದರು.

ಪ್ರಗತಿಪರ ರೈತರಿಗೆ ಸನ್ಮಾನ: ಬಿಜೆಪಿ ನಗರ ರೈತ ಮೋರ್ಚಾ ವತಿಯಿಂದ ಸಚ್ಚಿನ್‌ ರಾಜೇಂದ್ರ ಭವನದಲ್ಲಿ ವಾಜಪೇಯಿ ಜನ್ಮದಿನಾಚರಣೆ, ಪ್ರಧಾನಿ ಮೋದಿ ರೈತರಿಗೆ ಖಾತೆಗೆ ಹಣ ಹಾಕುತ್ತಿದ್ದ ಹಿನ್ನೆಲೆಯಲ್ಲಿ ದೇವನಗಳ್ಳಿಯ ಶಂಕರೇಗೌಡ (ರೈತ), ಸುರೇಶ್‌ (ಸಮಗ್ರ ಕೃಷಿ ಬೆಳೆಗಾರ), ಪವಿತ್ರ (ರೈತ ಮಹಿಳೆ), ಸೋಮಶೇಖರ್‌ (ಸಮಗ್ರ ಕೃಷಿ ಬೆಳೆಗಾರ), ನವೀನ್‌ (ಅರಣ್ಯ ಆಧಾರಿತ ಬೇಸಾಯಗಾರ) ಅವರನ್ನು ಸನ್ಮಾನಿಸಲಾಯಿತು. ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ಸಂಸದ ಪ್ರತಾಪ್‌ ಸಿಂಹ, ದೇವರಾಜ್‌ ಇದ್ದರು.

ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ಮಾತನಾಡಿ, ಅಟಲ್‌ ಬಿಹಾರಿ ವಾಜಪೇಯಿ ಅಯೋಧ್ಯೆಯಲ್ಲಿ ರಾಮಜನ್ಮ ಭೂಮಿ ನಿರ್ಮಾಣದ ಹೋರಾಟ ಯಶಸ್ವಿಯಾಗಲು ವಿಜಯಸಂಕಲ್ಪ ಯಾತ್ರೆ ರೂಪಿಸಿದವರೇ ಅಟಲ್‌. 1961ರಿಂದ ಬಹುಕಾಲ ಸಾಕಷ್ಟು ರಾಷ್ಟ್ರೀಯ ಸಮಿತಿಗಳ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆಂದರು.

ಪೌರ ಕಾರ್ಮಿಕರಿಗೆ ಸನ್ಮಾನ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಹಿನ್ನೆಲೆ ಬಿಜೆಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸುಶಾಸನ ದಿನವನ್ನು ನರಸಿಂಹ ರಾಜ ಕ್ಷೇತ್ರದ ಬಲಮುರಿ ಗಣಪತಿ ದೇವಾಲಯದಲ್ಲಿ ಸ್ವತ್ಛತೆ ಮಾಡುವ ಮೂಲಕ ಆಚರಿಸಲಾಯಿತು. ಮುಂಜಾನೆ 7 ಗಂಟೆಗೆ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿಮಂಜು ತಂಡ ಸ್ವತ್ಛತಾ ಸಲಕರಣೆಗಳೊಂದಿಗೆ ರಾಜಕುಮಾರ್‌ ರಸ್ತೆಯ ಬಲಮುರಿ ಗಣಪತಿ ದೇವಾಲಯದ ಸುತ್ತಮುತ್ತ ಸ್ವತ್ಛತೆ ಮಾಡಿ, ಪೌರಕಾರ್ಮಿಕರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪೌರಕಾರ್ಮಿಕರಾದ ಬಾಲಸುಂದರ್‌, ಸರೋ ಜಮ್ಮ, ನಾಗರತ್ನ ಅವರನ್ನು ಸನ್ಮಾನಿಸಿ ಸಾರ್ವಜನಿಕ ರಿಗೆ ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್‌ ವಿತರಿಸ ಲಾಯಿತು. ರಾಜ್ಯ ಪ್ರ. ಕಾರ್ಯದರ್ಶಿ ಸುರೇಶ್‌ ಬಾಬು, ಸದಸ್ಯ ಉಮೇಶ್‌, ಪ್ರಧಾನ ಕಾರ್ಯದರ್ಶಿ ಗೋಪಾಲ್, ಮಣಿರತ್ನಂ, ನಾಗೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.