ವರುಣಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ: ಡಾ.ಯತೀಂದ್ರ

Team Udayavani, Jun 16, 2017, 12:55 PM IST

mys5.jpg

ಮೈಸೂರು: ವರುಣಾ ಕ್ಷೇತ್ರದ ಎಲ್ಲಾ ಗ್ರಾಮಗಳ ಉಳಿದ ರಸ್ತೆಗಳ ಕಾಮಗಾರಿಯನ್ನು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಗುರುವಾರ ವರುಣಾ ಕ್ಷೇತ್ರದ ಸುತ್ತೂರಿನಲ್ಲಿ ಕಬಿನಿ ನದಿ ಬಳಿ 45 ಲಕ್ಷ ರೂ. ವೆಚ್ಚದಲ್ಲಿ ಸೋಪಾನಕಟ್ಟೆ ನಿರ್ಮಾಣಕ್ಕೆ ಹಾಗೂ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಿಂದೆಂದೂ ಆಗದಂತಹ ಕಾಮಗಾರಿಗಳು ಕ್ಷೇತ್ರದಲ್ಲಿ ಆಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬಡವರು, ದಲಿತರು, ಹಿಂದುಳಿದವರ ಪರವಾಗಿ ಕೆಲಸ ಮಾಡುತ್ತಿದ್ದು, ಹಸಿವುಮುಕ್ತ, ಗುಡಿಸಲು ಮುಕ್ತ, ಶೌಚಾಲಯ ಮುಕ್ತ ಕರ್ನಾಟಕ ಮಾಡಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ ಎಂದರು.

ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಕೊಡಲು ಸಾವಿರಾರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಮೆಡಿಕಲ್‌ ಕಾಲೇಜುಗಳು, ಬಿಪಿಎಲ್‌ ಕಾರ್ಡ್‌ ಇರುವವರಿಗೆ ಉಚಿತ ಚಿಕಿತ್ಸೆ, ಹೊಸ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಸುಮಾರು 50 ಸಾವಿರ ಕೋಟಿ ಖರ್ಚು ಮಾಡಿ ನಾಲೆಗಳ ಆಧುನೀಕರಣಗೊಳಿಸಲಾಗಿದೆ.

ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿಕೊಡುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ ಮಾತನಾಡಿ, ಕಳೆದ ನಾಲ್ಕು ವರ್ಷದಲ್ಲಿ ಕ್ಷೇತ್ರದ ಶೇ. 90ರಷ್ಟು ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ.

ಉಳಿದ ಕೆಲಸವನ್ನು ಆದ್ಯತೆಯ ಮೇಲೆ ಒಂದು ವರ್ಷದ ಅವಧಿಯಲ್ಲಿ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಎಸ್‌. ಸೋಮಶೇಖರ್‌, ತಹಶೀಲ್ದಾರ್‌ ದಯಾನಂದ್‌, ಗ್ರಾಪಂ ಅಧ್ಯಕ್ಷ ಸೋಮಣ್ಣ, ತಾಪಂ ಸದಸ್ಯೆ ಲಿಂಗರಾಜಮ್ಮ, ಎಪಿಎಂಸಿ ಉಪಾಧ್ಯಕ್ಷ ಸಿದ್ದರಾಜು ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.