ಕಾಂಗ್ರೆಸ್ ನಲ್ಲಿ ಟಿಕೆಟ್ ಪ್ರಹಸನ: ಆಪ್ತನಿಗೆ ಟಿಕೆಟ್ ಘೋಷಿಸಿದ ವೀರಪ್ಪ ಮೊಯಿಲಿ
Team Udayavani, Feb 4, 2023, 1:39 PM IST
ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಘೋಷಣೆ ಪ್ರಹಸನ ಮುಂದುವರಿದಿದ್ದು, ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು ತಮ್ಮ ಆಪ್ತನಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.
ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ. ನಾನು ಮತ್ತು ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು. ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ. ಮಾಜಿ ಶಾಸಕ ವಾಸುಗೆ ಟಿಕೆಟ್ ಖಚಿತ ಎಂದು ಚಾಮರಾಜ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದಾರೆ.
ವಾಸು ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ. ವಾಸು ಬಲಿಷ್ಠವಾದ ಅಭ್ಯರ್ಥಿ. ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತದೆ. ಸಿದ್ದರಾಮಯ್ಯ ಬಣ ಇಲ್ಲ, ಇದು ಕಾಂಗ್ರೆಸ್ ಬಣ. ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ ಎಂದರು.
ಟಿಕೆಟ್ ಘೋಷಣೆಯಾಗುವರೆಗೂ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ. ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕಿಂತ ಮುನ್ನ ಎಲ್ಲರೂ ಆಕಾಂಕ್ಷಿಗಳೆ. ಎರಡು ಕ್ಷೇತ್ರಗಳಿಗೆ ಯಾರು ಟಿಕೆಟ್ ಆಕಾಂಕ್ಷಿಗಳಿಲ್ಲ. ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ. ಪರೋಕ್ಷವಾಗಿ ಸಿದ್ದರಾಮಯ್ಯ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ವೀರಪ್ಪ ಮೊಯ್ಲಿ ಹೇಳಿದರು.
ಸಿಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಹೆಸರು ಪ್ರಸ್ತಾಪ ವಿಚಾರವಾಗಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಸಮರ್ಥವಾಗಿ ಉತ್ತರ ಕೊಟ್ಟಿದ್ದಾರೆ. ಸಾಕಷ್ಟು ಸಿಡಿಗಳಿವೆ, ಚುನಾವಣೆ ಸಂದರ್ಭದಲ್ಲಿ ಇಂತಹ ಸಿಡಿಗಳು ಸಾಕಷ್ಟು ಬರುತ್ತೆ. ಸಿಡಿ ವಿಚಾರ ಇಟ್ಟುಕೊಂಡು ಡಿಕೆ ಶಿವಕುಮಾರ್ ಬ್ಲ್ಯಾಕ್‌ಮೇಲ್ ಮಾಡುವುದಿಲ್ಲ, ಬಿಜೆಪಿ ಬ್ಲ್ಯಾಕ್ ಮೇಲ್ ಮಾಡಬಹುದು. ವೈಯಕ್ತಿಕ ವಿಚಾರವನ್ನು ಸಿಬಿಐಗೆ ಕೊಡಲು ಬರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.