ರಾಜಕೀಯ ಸ್ಥಾನಕ್ಕಾಗಿ ವೀರಶೈವ ಲಿಂಗಾಯತರು ಒಗ್ಗಟ್ಟಾಗಿ: ಮಹದೇವಸ್ವಾಮಿ
Team Udayavani, Aug 7, 2017, 1:36 PM IST
ಮೂಗೂರು: ಪ್ರಸ್ತುತ ವೀರಶೈವ ಲಿಂಗಾಯತರು ಒಗ್ಗಟ್ಟಾಗಿ ಸಮುದಾಯದ ಏಳಿಗೆಗೆ ಶ್ರಮಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ವಿದ್ಯೋದಯ ಶಿಕ್ಷಣ ಸಂಸ್ಥೆ ಗೌರವ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿ ಹೇಳಿದರು.
ತಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ನಡೆದ ವೀರಶೈವ ಹಿತರಕ್ಷಣಾ ಸಮಿತಿ ಮೈಸೂರು ವಿಭಾಗದ ಹೋಬಳಿ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸೂಯೆ, ಗುಂಪುಗಾರಿಕೆ, ನಿರ್ಲಕ್ಷ್ಯತೆಯಿಂದ ಸಮುದಾಯದಲ್ಲಿ ಒಡಕು ಮೂಡಿದೆ.
ತಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ 12 ಲಕ್ಷ ಮತದಾರರನ್ನು ಹೊಂದಿರುವ ವೀರಶೈವ ಲಿಂಗಾಯತರು ತಮ್ಮ ರಾಜಕೀಯ ಸ್ಥಾನಮಾನಗಳಿಲ್ಲದೇ ಇತರೆ ಸಮುದಾಯದ ಜನರ ಮನೆ ಬಾಗಿಲು ಕಾಯುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜಕೀಯ ಸ್ಥಾನಮಾನ ವಂಚಿತ: ಸಮುದಾಯದಲ್ಲಿ ಒಡಕು ಮಾಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಜೊತೆಗೆ ವೀರಶೈವಲಿಂಗಾಯತ ರಾಜಕೀಯ ಸ್ಥಾನಮಾನಗಳಿಂದ ವಂಚಿಸುವ ಹುನ್ನಾರ ಕಾಣದ ಕೈಗಳಿಂದ ನಡೆಯುತ್ತಿದೆ.
ಸಮುದಾಯದ ಜನರಲ್ಲಿನ ಒಗ್ಗಟ್ಟಿನ ಕೊರತೆಯಿಂದಾಗಿ ಮೀಸಲಾತಿ ಇದ್ದರೂ ಕೂಡ ಸ್ಥಾನಮಾನ ಸಿಗದಂತಾಗಿದೆ. ಈ ನಿಟ್ಟಿನಲ್ಲಿ ಸಮುದಾಯದ ಯುವಕರು ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವ ಮನಸ್ಥಿತಿ ಹೊಂದುವ ಜೊತೆಗೆ ಸಮಾಜದಲ್ಲಿನ ಒಡಕನ್ನು ಸರಿಪಡಿಸಿಕೊಂಡು ರಾಜಕೀಯ ಸ್ಥಾನಮಾನ ಪಡೆದುಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಸಂಘಟಿತ ಹೋರಾಟ ನಡೆಸಿ: ತಿ.ನರಸೀಪುರ ಕ್ಷೇತ್ರ ಮೀಸಲು ವಿಧಾನಸಭಾ ಕ್ಷೇತ್ರವಾದ್ದರಿಂದ ಬಲಾಡ್ಯರು ರಾಜಕೀಯ ಸ್ಥಾನಮಾನಗಳನ್ನು ನಿರಂತರವಾಗಿ ಅನುಭವಿಸಿಕೊಂಡು ಬರುತ್ತಿದ್ದು, ಇತರೆ ವರ್ಗದವರು ರಾಜಕೀಯ, ಸಾಮಾಜಿಕ, ಶೈಕ್ಷಣಿಕವಾಗಿ ಸ್ಥಾನಮಾನಗಳಿಲ್ಲದೇ ಶೋಷಣೆಗೆ ಒಳಗಾಗುತ್ತಿದ್ದಾರೆ. ಇದರ ವಿರುದ್ದ ಇಂದಿನ ಯುವ ಸಮುದಾಯ ಸಂಘಟಿತವಾಗಿ ಹೋರಾಟ ನಡೆಸಬೇಕಿದೆ ಎಂದು ವೀರಶೈವ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಸಿ.ಪಿ.ತಮ್ಮಣ್ಣ ತಿಳಿಸಿದರು.
ಸಭೆಯಲ್ಲಿ ವಾಟಾಳು ಸಿದ್ದಲಿಂಗಶಿವಚಾರ್ಯಸ್ವಾಮೀಜಿ, ವೀರಶೈವ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಸಿ.ಎಂ.ಪ್ರಕಾಶ್, ಮುಖಂಡರಾದ ಎಂ.ಬಿ.ಬಸವಣ್ಣ, ಸೀಹಳ್ಳಿ ಗುರುಮೂರ್ತಿ, ಕುರುಬೂರು ಭೃಂಗೇಶ್, ಕೆ.ಜಿ.ವಿರೇಶ್, ನಾಗರಾಜು, ಎಂ.ಚಂದ್ರಶೇಖರ್, ಹೆಳವರಹುಂಡಿ ಸಿದ್ದಪ್ಪ, ಚಿನ್ನಬುದ್ಧಿ, ಹ್ಯಾಕನೂರು ಉಮೇಶ್, ವಾಟಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಮರಿನಂಜಪ್ಪ, ಬನ್ನಹಳ್ಳಿಹುಂಡಿ ಶಿವಕುಮಾರ್, ಮಮತಾ ಶಿವಪ್ರಸಾದ್, ಮಾದಪ್ಪ, ತೊಟ್ಟವಾಡಿ ಮಹದೇವಪ್ಪ, ಪ್ರಭುಸ್ವಾಮಿ, ಸುತ್ತೂರು ಚಿಕ್ಕಮಾದಪ್ಪ, ಚಂದ್ರಪ್ಪ, ಉಪನ್ಯಾಸಕ ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.