ವೆಂಕಟೇಶ್ ಕರಿಮುದ್ದನಹಳ್ಳಿ ಗ್ರಾಪಂ ಅಧ್ಯಕ್ಷ
Team Udayavani, Jun 26, 2018, 2:21 PM IST
ಹುಣಸೂರು: ತಾಲೂಕಿನ ಕರಿಮುದ್ದನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಕೆ.ಇ.ವೆಂಕಟೇಶ್ 13 ಮತ ಪಡೆದು ಚುನಾಯಿತರಾದರೆ, ಪ್ರತಿಸ್ಪರ್ಧಿ ನಾಗರಾಜು ಕೇವಲ ಎರಡು ಮತ ಪಡೆದು ಸೋಲನುಭವಿಸಿದರು.
ಈ ಹಿಂದೆ ಅಧ್ಯಕ್ಷರಾಗಿದ್ದ ರಾಜಶೇಖರ್ ನೀಡಿದ್ದ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಗ್ರಾಪಂನ ಒಟ್ಟು 16 ಸದಸ್ಯರ ಪೈಕಿ ವೆಂಕಟೇಶ್ ಪರವಾಗಿ 13, ನಾಗರಾಜ 2 ಹಾಗೂ ಒಂದು ಮತ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಯಾಗಿದ್ದ ಎಇಇ ನರಸೇಗೌಡ ತಿಳಿಸಿದ್ದಾರೆ. ಪಿಡಿಒ ಸಣ್ಣೇಗೌಡ ಹಾಜರಿದ್ದರು.
ವಿಜಯೋತ್ಸವ: ಕರಿಮುದ್ದನಹಳ್ಳಿ ಗ್ರಾಮದ ವೆಂಕಟೇಶ್ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಗ್ರಾಪಂ ಕಚೇರಿ ಮುಂದೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ನೂತನ ಅಧ್ಯಕ್ಷ ಕೆ.ಇ. ವೆಂಕಟೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿಯೂ ಯಾವುದೇ ಜಾತಿ ಮತ್ತು ರಾಜಕೀಯ ಬೇರಸದೆ ಮೂಲ ಸೌಲಭ್ಯ ಕಲ್ಪಿಸಲು ಎಲ್ಲ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಲಹೆ ಸಹಕಾರ ಪಡೆದು ಗ್ರಾಪಂ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.