ಕೈ ಬಿಟ್ಟು ಜೆಡಿಎಸ್‌ ಸೇರಿದ ವಿಶ್ವಕರ್ಮ ಮುಖಂಡರು


Team Udayavani, Apr 15, 2018, 2:06 PM IST

m2-kai-bittu.jpg

ಮೈಸೂರು: ಹಣ ಬಲದಿಂದ ಮತದಾರರನ್ನು ಕೊಂಡುಕೊಳ್ಳಲು ಬಂದಿರುವ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ಅವರ ದುರಹಂಕಾರ ಇಳಿಸಿ, ಜಿ.ಟಿ.ದೇವೇಗೌಡರಂಥ ಜನಸ್ನೇಹಿ ಶಾಸಕರನ್ನು ಗೆಲ್ಲಿಸಿಕೊಳ್ಳಿ ಎಂದು ಜೆಡಿಎಸ್‌ ರಾಜಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಜಯಪುರ ಗೇಟ್‌ನ ದೇವಮ್ಮ ಚಿಕ್ಕ ಅಂಕೇಗೌಡ ಕಲ್ಯಾಣಮಂಟಪದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮರ ನಡೆ-ಜೆಡಿಎಸ್‌ ಕಡೆ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ಹಲವು ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿ, ಈ ಚುನಾವಣೆಯನ್ನು ತಮ್ಮನ್ನು ಬೆಂಬಲಿಸಿ, ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರ ರಚನೆಯಾದರೆ ವಿಶ್ವಕರ್ಮ ಸಮಾಜದ ಮುಖಂಡರನ್ನು ತಿಂಗಳಿಗೊಮ್ಮೆ ವಿಧಾನಸೌಧದ ಮೂರನೇ ಮಹಡಿಗೆ ಕರೆಸಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಮನವಿ ಸಲ್ಲಿಕೆ: ಬೇಲೂರಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಪ್ರತಿಮೆ ನಿರ್ಮಾಣ, ಸಮಾಜಕ್ಕೆ ರಾಜಕೀಯ ಸ್ಥಾನಮಾನ ಕಲ್ಪಿಸುವುದು, ಪ್ರತ್ಯೇಕವಾಗಿ ಶೇ.3 ಒಳ ಮೀಸಲಾತಿ ನೀಡುವುದು, ಕುಶಲಕರ್ಮಿಗಳಿಗೆ ಪ್ರತ್ಯೇಕ ವಸತಿ ನೀತಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ 100 ಕೋಟಿ ರೂ. ಅನುದಾನ, ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ವಿಶ್ವಕರ್ಮ ಸಮುದಾಯ ಭವನ,

ಗ್ರಾಮೀಣ ಪ್ರದೇಶಗಳಲ್ಲಿ ಪಂಚ ಕಸುಬುಗಳನ್ನು ಮಾಡುವ ವಿಶ್ವಕರ್ಮರಿಗೆ ಪ್ರತ್ಯೇಕ ಶೆಡ್‌ ನಿರ್ಮಾಣ, ಅಮರಶಿಲ್ಪಿ ಜಕಣಾಚಾರಿ ಹೆಸರಲ್ಲಿ ಪ್ರತ್ಯೇಕ ವಿವಿ ಸ್ಥಾಪನೆ, ಕುಲ ಕಸುಬುಗಳನ್ನು ಉಳಿಸುವ ಸಲುವಾಗಿ ಸಮಾಜದವರಿಗೆ ಟೂಲ್ಸ್‌ ಕಿಟ್‌ ವಿತರಣೆ ಮಾಡುವುದು ಸೇರಿದಂತೆ ಅನೇಕ ಬೇಡಿಕೆಗಳ ಮನವಿ ಪತ್ರವನ್ನು ಸಮಾಜದ ಮುಖಂಡರು ಕುಮಾರಸ್ವಾಮಿಗೆ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕುಮಾರಸ್ವಾಮಿ, ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುವುದು ಸರಿಯಲ್ಲ. ತಮ್ಮ ಜತೆಗೆ ನಾನಿದ್ದೇನೆ. ತನ್ನನ್ನು ನಂಬಿ ಜೆಡಿಎಸ್‌ ಬೆಂಬಲಿಸಿ, ಜಿ.ಟಿ.ದೇವೇಗೌಡರನ್ನು ಗೆಲ್ಲಿಸಿ, ತಮ್ಮ ಕೆಲಸಗಳನ್ನು ಮಾಡಿಕೊಡಲು ತಾನು ಸಿದ್ಧನಿದ್ದೇನೆ ಎಂದರು.

ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ತಾಲೂಕು ಅಧ್ಯಕ್ಷ ಹಿನಕಲ್‌ ರಾಜು, ವಿಶ್ವಕರ್ಮ ಸಮಾಜದ ಮುಖಂಡರಾದ ಆನಂದೂರು ಪುಟ್ಟಸ್ವಾಮಾಚಾರ್‌, ಮುಳ್ಳೂರು ರಾಮಲಿಂಗಾಚಾರ್‌, ಕೆಂಡಗಣ್ಣ ವಿಶ್ವಕರ್ಮ, ರವಿಕುಮಾರ್‌ ಹೆಬ್ಟಾಳ್‌, ನಿಂಗಾಚಾರ್‌, ರಿಷಿ, ಆರ್‌.ಮುಕುಂದಾಚಾರ್‌ ಹಾಜರಿದ್ದರು. ಇದೇ ವೇಳೆ ಸಮಾಜದ ಹಲವು ಮುಖಂಡರು ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಿದರು. 

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.