ಮತಯಂತ್ರ ಹ್ಯಾಕ್ ಆರೋಪಿಸಿ ಧರಣಿ
Team Udayavani, May 18, 2018, 12:58 PM IST
ಮೈಸೂರು: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮತ ಯಂತ್ರಗಳನ್ನು ಹ್ಯಾಕ್ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತಂತೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಚುನಾವಣೆಯಲ್ಲಿ ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದ್ದು, ಹೀಗಾಗಿ ಚುನಾವಣಾ ಪ್ರಕ್ರಿಯೆ ಮೇಲೆ ಅನುಮಾನ ಮೂಡಿದೆ ಎಂದು ದೂರಿದರು.
ಪ್ರಮುಖವಾಗಿ ನಗರದ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಂತ್ರವನ್ನು ಹ್ಯಾಕ್ ಮಾಡಿರುವ ಬಗ್ಗೆ ದೂರುಗಳು ಕೇಳಿ ಬಂದಿತ್ತು. ಈ ಸಂದರ್ಭದಲ್ಲಿ ನಾಲ್ಕು ಮಂದಿಯನ್ನು ಸ್ಥಳೀಯರು ವಿಚಾರಣೆ ನಡೆಸಿದ ವೇಳೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಮತಯಂತ್ರವನ್ನು ಹ್ಯಾಕ್ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.
ಇದು ಇಡೀ ಚುನಾವಣಾ ಪ್ರಕ್ರಿಯೆ ಮೇಲೆ ಅನುಮಾನ ಮೂಡುವಂತೆ ಮಾಡಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ.ವಿಜಯ ಕುಮಾರ್, ನಗರ ಪಾಲಿಕೆ ಸದಸ್ಯರಾದ ಸುನಿಲ್‌ಕುಮಾರ್, ಜಗದೀಶ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.