ಮತಯಂತ್ರ, ವಿವಿ ಪ್ಯಾಟ್ ದಾಸ್ತಾನು
Team Udayavani, Feb 24, 2018, 1:06 PM IST
ಮೈಸೂರು: ಮುಂಬರುವ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗುವ ಮುನ್ನವೇ ಚುನಾವಣೆಗಾಗಿ ಮೈಸೂರು ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಮತಯಂತ್ರಗಳನ್ನು ಸುರಕ್ಷಿತವಾಗಿ ಇರಿಸಲು ಅಗತ್ಯವಿರುವ ಸ್ಥಳಗಳಿಗಾಗಿ ಜಿಲ್ಲಾಧಿಕಾರಿ ರಂದೀಪ್ ಡಿ., ಶುಕ್ರವಾರ ಪರಿಶೀಲನೆ ನಡೆಸಿದರು.
ವಿಧಾನಸಭಾ ಚುನಾವಣೆಗೆ ಕೇವಲ ಎರಡು ತಿಂಗಳು ಬಾಕಿಯಿದ್ದು, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಇಡುವ ಸ್ಥಳಗಳಿಗಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ನಗರದ ವಿದ್ಯಾವರ್ಧಕ ಕಾಲೇಜು ಎದುರಿನ ನಗರಪಾಲಿಕೆ ಚುನಾವಣಾ ಶಾಖೆಯ ಗೋದಾಮಿನಲ್ಲಿ 3500 ವಿವಿ ಪ್ಯಾಟ್‌ಗಳನ್ನು ಭದ್ರವಾಗಿ ಇಡಲಾಗಿದೆ.
ಚುನಾವಣೆಗಾಗಿ ತಮಿಳುನಾಡಿನಿಂದ 3600 ಬ್ಯಾಲೆಟ್ ಯೂನಿಟ್, 3000 ಕಂಟ್ರೋಲ್ ಯೂನಿಟ್‌ಗಳು ಮೈಸೂರಿಗೆ ತರಲಾಗಿದ್ದು, ಶೀಘ್ರವೇ ಎಲ್ಲಾ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ವಿವಿ ಪ್ಯಾಟ್‌ಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಥಳವನ್ನು ಬಾಂಬ್ ಪತ್ತೆ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ.
ಇವಿಎಂ ಯಂತ್ರ, ವಿವಿಪ್ಯಾಟ್‌ಗಳಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಪರಿಶೀಲನೆ ನಡೆದಿದೆ. ಚುನಾವಣೆ ವೇಳೆ ವಿವಿ ಪ್ಯಾಟ್‌ಗಳಲ್ಲಿ ಕೆಲವೊಂದು ಲೋಪಗಳಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಶೇ.40 ಹೆಚ್ಚಿನ ವಿವಿ ಪ್ಯಾಟ್‌ಗಳನ್ನು ಸಂಗ್ರಹಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.