ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡಿರುವ ಮೋದಿಗೆ ವೋಟ್‌ ಮುಖ್ಯವಲ್ಲ: ಪ್ರತಾಪಸಿಂಹ

ಭವಿಷ್ಯದ ಮಕ್ಕಳಿಗೆ ಉತ್ತಮ ಪರಿಸರ ನೀಡುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ.

Team Udayavani, Oct 13, 2022, 5:48 PM IST

ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡಿರುವ ಮೋದಿಗೆ ವೋಟ್‌ ಮುಖ್ಯವಲ್ಲ: ಪ್ರತಾಪಸಿಂಹ

ಮೈಸೂರು: ಕೇಂದ್ರ ಸರ್ಕಾರದ 08 ವರ್ಷಗಳ ಸಾಧನೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಷನ್‌ 2047, ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವದ ಛಾಯಾಚಿತ್ರ ಪ್ರದರ್ಶನ ಹಾಗೂ ವಿಚಾರ ಸಂಕಿರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಚಾಲನೆ ನೀಡಿದರು.

ಕೇಂದ್ರ ಸಂವಹನ ಇಲಾಖೆ, ಮೈಸೂರು ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ  ಸಂಯುಕ್ತಾಶ್ರಯದಲ್ಲಿ ಮಹಾರಾಜ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 7 ದಿನಗಳ ಛಾಯಾಚಿತ್ರ, ಪ್ರದರ್ಶನ ವಿಚಾರ ಸಂಕಿರಣದಲ್ಲಿ ಕೇಂದ್ರ ಸರ್ಕಾರದ ಸಾಧನೆ, ಸ್ವಾತಂತ್ರ್ಯ ಚಳವಳಿಯಲ್ಲಿ ಕರ್ನಾಟದ ಕೊಡುಗೆಯನ್ನು ಬಿಂಬಿಸುವ 64 ಛಾಯಾಚಿತ್ರಗಳ ಪ್ರದರ್ಶನ ಹಾಗೂ 6 ಮಳಿಗೆಗಳಲ್ಲಿ ರಕ್ತದಾನ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ ಒದಗಿಸಲಾಗುತ್ತಿದೆ.

ಮೋದಿ ಕೊಡುಗೆ ಅಪಾರ:
ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ ಮಾತನಾಡಿ, ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 8 ವರ್ಷದಲ್ಲಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಗಾಂಧಿಕನಸಿನ ಸ್ವಚ್ಛ ಭಾರತ ಯೋಜನೆಗೆ ಮುನ್ನುಡಿ ಬರೆದು ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರು. ಮೈಸೂರಿನ ಸೂಯೇಜ್‌ ಫಾರಂ ಸೇರಿದಂತೆ ಕರ್ನಾಟಕದ ಹಲವೆಡೆ ಇರುವ ನೂರಾರು ಟನ್‌ ಕಸ ತೆರವಿಗೆ 2025ರ ಗಡುವು ನೀಡಿದ್ದಾರೆ. ಭವಿಷ್ಯದ ಮಕ್ಕಳಿಗೆ ಉತ್ತಮ ಪರಿಸರ ನೀಡುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡಿರುವ ಮೋದಿ ಅವರಿಗೆ ವೋಟ್‌ ಮುಖ್ಯವಲ್ಲ ಎಂದರು.

ಜನಧನ್‌ ಯೋಜನೆ, ಉಜ್ವಲ ಯೋಜನೆ, ಕಿಸಾನ್‌ ಸಮ್ಮಾನ್‌, ಆತ್ಮನಿರ್ಭರ, ಬೀದಿಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆ ಜಾರಿಗೊಳಿಸಿ ಬಡವರಿಗೆ, ಧೀನದಲಿತರಿಗೆ ನೆರವಾಗಿದ್ದಾರೆ ಎಂದರು. ಇದೇ ವೇಳೆ ಐವರು ಫ‌ಲಾನು ಭವಿಗಳಿಗೆ ಶ್ರವಣದೋಷ ಉಪಕರಣ ನೀಡಲಾಯಿತು. ಚಾಮರಾಜ ಕ್ಷೇತ್ರದ ಕೋವಿಡ್‌ನಿಂದ ಮೃತಮಟ್ಟ ಕುಟುಂಬಸ್ಥರಿಗೆ ಒಂದು ಲಕ್ಷ ಪರಿಹಾರದ ಚೆಕ್‌ ವಿತರಿಸಲಾಯಿತು.

ಶಾಸಕ ಎಲ್‌.ನಾಗೇಂದ್ರ, ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಡಾ.ಜಿ. ರೂಪಾ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್‌, ದಕ್ಷಿಣ ವಲಯ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮಹಾ ನಿರ್ದೇಶಕ ಎಸ್‌.ವೆಂಕಟೇಶ್ವರ, ಕರ್ನಾಟಕ ವಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಮಹಾನಿರ್ದೇಶಕ ಎಸ್‌.ಜಿ.ರವೀಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ, ಜಿಪಂ ಸಿಇಒ ಬಿ.ಆರ್‌.ಪೂರ್ಣಿಮಾ ಇದ್ದರು.

ಮೋದಿಗೆ ಮೈಸೂರಿನ ಬಗ್ಗೆ ಹೆಚ್ಚು ಪ್ರೀತಿ
ಮೈಸೂರಿನ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿರುವ ಮೋದಿ ಅವರು, ನಗರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಮೈಸೂರಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ, ಅಮೃತ ಯೋಜನೆಯಡಿ ಅನುದಾನ ನೀಡಿದ್ದಾರೆ. ಜಲಜೀವನ ಮಿಷನ್‌ ಅಡಿ ಮನೆ ಮನೆಗೆ ನಲ್ಲಿ ನೀರು ನೀಡಲಾಗುತ್ತಿದೆ. ವಿಮಾನ ನಿಲ್ದಾಣದ ಅಭಿವೃದ್ಧಿ, ರೈಲು ನಿಲ್ದಾಣದ ಅಭಿವೃದ್ಧಿಗೆ ಒತ್ತು ನೀಡಿದ್ದು, 10 ಹೊಸ ರೈಲು ನೀಡಿದ್ದಾರೆ. ಮನೆಮನೆಗೆ ಪೈಪ್‌ ಲೈನ್‌ ಮೂಲಕ ಗ್ಯಾಸ್‌ ತಲುಪಿಸುವ ಯೋಜನೆ ಪ್ರಗತಿಯಲ್ಲಿದೆ. ಮೈಸೂರಿನ ಸಂಪರ್ಕ ವ್ಯವಸ್ಥೆ ಉತ್ತಮಗೊಳಿಸಿ ಹೊಸ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡುತ್ತಿದ್ದು, 75 ಸಾವಿರ ಕೋಟಿ ಮೊತ್ತದ ಸೆಮಿ ಕಂಡಕ್ಟರ್‌ ಯೋಜನೆ ನೀಡಿದ್ದಾರೆ ಎಂದು ಸಂಸದ ಸಿಂಹ ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.