ಸಾಲಿಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ
Team Udayavani, Apr 8, 2018, 12:53 PM IST
ಭೇರ್ಯ: ಕೆ.ಆರ್.ನಗರ ತಾಲೂಕು ಸಾಲಿಗ್ರಾಮದಲ್ಲಿ ಕಡ್ಡಾಯ ಮತದಾನ ಜಾಗೃತಿ ಜಾಥಾ ನಡೆಯಿತು. ಜಾಗೃತಿ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಲಕ್ಷ್ಮೀಮೋಹನ್ ನೇತೃತ್ವದಲ್ಲಿ ಮತಗಟ್ಟೆ ಅರಿವು ಗುಂಪಿನ ಸದಸ್ಯರು ಮತದಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ತಿಳಿ ಹೇಳಿದರು.
ಸ್ಥಳೀಯ ಗ್ರಾಪಂ ಕಚೇರಿಯಲ್ಲಿ ಸಭೆ ನಡೆಸಿ, ಬಳಿಕ ಮಹಾತ್ಮ ಗಾಂಧಿ ವೃತ್ತದಿಂದ ಜಾಥಾ ಹೊರಟು ಕೃಷಿ ಉತ್ಪನ್ನ ಮಾರುಕಟ್ಟೆ ಉಪಪ್ರಾಂಗಣದಲ್ಲಿ ಸಂತೆಗೆ ಬಂದಿದ್ದ ಮತದಾರರಿಗೆ “ನಿಮ್ಮ ಮತ-ನಿಮ್ಮ ಭವಿಷ್ಯ’, “ಮತ ಚಲಾವಣೆ ನಿಮ್ಮ ಹಕ್ಕು’, “ತಪ್ಪದೆ ಮತ ಚಲಾಯಿಸಿ’ ಎಂಬ ಮಾಹಿತಿವುಳ್ಳ ಕರಪತ್ರ ನೀಡುವ ಮೂಲಕ ಕಡ್ಡಾಯ ಮತದಾನದ ಕುರಿತು ಅರಿವು ಮೂಡಿಸಲಾಯಿತು.
ಸೆಕ್ಟರ್ ಅಧಿಕಾರಿ ಅಯಾಜ್, ಪಿಡಿಒ ಮಂಜುನಾಥ್, ಲೆಕ್ಕಾಧಿಕಾರಿ ಪಾಂಡು, ಕಾರ್ಯದರ್ಶಿ ಕೆ.ಎ.ಮಂಜುನಾಥ್, ಪೊಲೀಸ್ ಪೇದೆ ವಿಜಯರಘು, ಕಂದಾಯ, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.