ಮುಗಿಲು ಮುಟ್ಟಿದ ಉಪಚುನಾವಣಾ ಸಮರ


Team Udayavani, Mar 28, 2017, 3:45 AM IST

IMG-20170327-WA0005.jpg

ಮೈಸೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ನಂಜನಗೂಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್‌ ಅವರಿಗೆ ಚುನಾವಣಾಧಿಕಾರಿ ಜಿ.ಜಗದೀಶ್‌ ಒಂದೇ ದಿನ ಎರಡು ನೋಟಿಸ್‌ಗಳನ್ನು ಜಾರಿ ಮಾಡಿದ್ದಾರೆ.

ಭಾನುವಾರ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದ ಪುಟ್ಟತಾಯಮ್ಮ ಎಂಬ ವೃದೆಟಛಿಗೆ ಬಹಿರಂಗವಾಗಿ 100 ರೂ. ನೀಡುವ ಮೂಲಕ ಹಾಗೂ ಬದನವಾಳು ಗ್ರಾಮದ ಶಾಲಾ ಆವರಣದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಪ್ರಚಾರ ಭಾಷಣ ಮಾಡಿದ್ದು, ಪ್ರಚಾರ ಸಭೆ ನಡೆಸಲು ಅನುಮತಿ ಪಡೆದಿದ್ದರೂ ಷರತ್ತು ಉಲ್ಲಂ ಸಿ ಶಾಲಾ ಆವರಣದಲ್ಲಿ ಸಭೆ ನಡೆಸಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಆದ್ದರಿಂದ ಈ ಬಗ್ಗೆ ಲಿಖೀತ ವಿವರಣೆ ನೀಡಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಿಎಂ ವಿರುದ್ಧ ಚುನಾವಣಾಧಿಕಾರಿಗೆ ದೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಚುನಾವಣಾ ನೀತಿ ಸಂಹಿತೆ ಉಲ್ಲಂ ಸಿದ್ದಾರೆಂದು ಆರೋಪಿಸಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಉಮೇಶ್‌ ಕುಮಾರ್‌ ಚುನಾವಣಾಧಿಕಾರಿ ಜಿ.ಜಗದೀಶ್‌ ಅವರಿಗೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೃತಜ್ಞತಾ ಸಮರ್ಪಣ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.72ರಷ್ಟು ಮೀಸಲಾತಿ ಹೆಚ್ಚಿಸಲು ಪ್ರತ್ಯೇಕ ಕಾನೂನು ತರಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಕಾಂಗ್ರೆಸ್‌ ಪ್ರಚಾರ ವೀಕ್ಷಕರಾಗಿ ಐವನ್‌
ಮಂಗಳೂರು:
ನಂಜನಗೂಡು ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್‌ನ ಪ್ರಚಾರ ವೀಕ್ಷಕರಾಗಿ ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್‌ ನೇಮಕ ಮಾಡಿದ್ದಾರೆ.

ಕಳಲೆಗೆ ಮದುವೆ ಮಾಡಿಸ್ತಾರಂತೆ ಮಹದೇವಪ್ಪ!
ನಂಜನಗೂಡು:
ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಕಳಲೆ ಕೇಶವಮೂರ್ತಿ ಗೆದ್ದರೆ ಶಾಸಕರಷ್ಟೇ ಅಲ್ಲ, ಅವಿವಾಹಿತರೂ ಆಗಿರುವ ಅವರು ಸಂಸಾರಿಯೂ ಆಗಲಿದ್ದಾರೆ. ಲೋಕೋಪಯೋಗಿ ಸಚಿವ ಡಾ. ಎಚ್‌.ಸಿ.ಮಹದೇವಪ್ಪನವರು ಸೋಮವಾರ ಅಭ್ಯರ್ಥಿ ಕೇಶವ ಮೂರ್ತಿಯವರ ತವರು ಕಳಲೆಯಲ್ಲಿ ಚುನಾವಣಾ ಪ್ರಚಾರ ಮಾಡುವ ವೇಳೆ “ನಿಮ್ಮೂರಿನ ಪುತ್ರನಿಗೆ ನೀವು ಅಧಿಕಾರದ ಭಾಗ್ಯ ನೀಡಿ, ನಾವು ಅವರಿಗೆ ಶಾದಿಭಾಗ್ಯ ನೀಡುತ್ತೇವೆ’ ಎಂದು ಭರವಸೆ ನೀಡಿದ್ದಾರೆ. ಕಳಲೆಯ ಐತಿಹಾಸಿಕ ಲಕ್ಷ್ಮೀಕಾಂತ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ದೇವಾಲಯದ ಆವರಣದ ಅರಳಿಕಟ್ಟೆ ಮೇಲೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಕಳಲೆಯ ಜನತೆ ಸೇರಿ ಮತ ಹಾಕಿ ನಿಮ್ಮ ಮನೆ ಮಗನಿಗೆ ಅಧಿಕಾರ ಭಾಗ್ಯ ನೀಡಿ, ನಂತರ ನಾವು ಈ ಬ್ರಹ್ಮಚಾರಿಗೆ ಶಾದಿಭಾಗ್ಯ(ಮದುವೆ) ಮಾಡಿಸುತ್ತೇವೆ ಎಂದರು. ಇದಕ್ಕೆ ಜನತೆ ಹರ್ಷೋದ್ಘಾರದ ಮೂಲಕ ಸಹಮತ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ದಿನಗಣನೆ
ಮೈಸೂರು:
ಕಾಂಗ್ರೆಸ್‌ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದ್ದು, ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ಅದರ ಟ್ರೇಲರ್‌ ಆಗಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮರುಳೀಧರರಾವ್‌ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ವಿರೋಧಿ ಮತದಾರರಿಗೆ ಬಿಜೆಪಿ ಬಿಟ್ಟರೆಪರ್ಯಾಯವೇ ಇಲ್ಲ. ಹೀಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಹೋರಾಟ ನಡೆಯಲಿದೆ.ಮೋದಿ ಮತ್ತು ರಾಹುಲ್‌ ನಡುವೆ ಸ್ಪರ್ಧೆ ಎಂದಾಗ ಸಹಜವಾಗಿ ಯಾರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು. 

ವಿಶೇಷ ವೀಕ್ಷಕರಾಗಿ ಡಾ.ಕರುಣಾ ರಾಜು: ನಂಜನಗೂಡು ಕ್ಷೇತ್ರದ ಉಪ ಚುನಾವಣೆಗೆ ವಿಶೇಷ ವೀಕ್ಷಕರನ್ನಾಗಿ ಹಿರಿಯ ಐಎಎಸ್‌ ಅಧಿಕಾರಿ ಡಾ.ಕರುಣಾ ರಾಜು ಅವರನ್ನು ಚುನಾವಣಾ ಆಯೋಗ ನೇಮಕ ಮಾಡಿದೆ. ಸೋಮವಾರ ನಂಜನಗೂಡು ಪಟ್ಟಣದಲ್ಲಿ ಕರುಣಾ ರಾಜು ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದರು.

ಕಾಗಲವಾಡಿ ಶಿವಣ್ಣ ಬಿಜೆಪಿಗೆ ಸೇರ್ಪಡೆ
ಚಾಮರಾಜನಗರ:
ಮಾಜಿ ಸಂಸದ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಕಾಗಲವಾಡಿ ಎಂ.ಶಿವಣ್ಣ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಗುಂಡ್ಲುಪೇಟೆ ತಾಲೂಕಿನ ಶಿಂಡನಪುರದಲ್ಲಿ ಬಿಜೆಪಿ ಪ್ರಚಾರ ರ್ಯಾಲಿಯಲ್ಲಿ ಮಾಜಿ ಸಂಸದ ಎಂ. ಶಿವಣ್ಣ ಅವರಿಗೆ ಬಿ.ಎಸ್‌. ಯಡಿಯೂರಪ್ಪಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು. ಬಳಿಕ ಶಿವಣ್ಣ ಯಡಿಯೂರಪ್ಪಅವರೊಂದಿಗೆ ರೋಡ್‌ ಶೋನಲ್ಲಿ ಭಾಗವಹಿಸುವ ಮೂಲಕ ಪ್ರಚಾರ ನಡೆಸಿದರು.

ಡಿಕೆಶಿ ಹಣ ಹಂಚಿಕೆ ಆರೋಪ
ಮೈಸೂರು
: ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಪರ ಪ್ರಚಾರಕ್ಕೆ ಬಂದ ಸಚಿವ ಡಿ.ಕೆ.ಶಿವಕುಮಾರ್‌ ಮತದಾರರಿಗೆ ಹಣ ಹಂಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಿನೇಶ್‌ ಗುಂಡೂರಾವ್‌ ಅವರೊಂದಿಗೆ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ. ಶಿವಕುಮಾರ್‌, ಹೊರಬಂದ ನಂತರ ರಸ್ತೆಯ ಮಧ್ಯೆಯೇ ನಿಂತು ತನ್ನ ಜತೆಯಲ್ಲಿದ್ದ ಕಾರ್ಯಕರ್ತರಿಗೆ
ಹಣ ನೀಡಿದ್ದು, ಅವರು ಮತದಾರರಿಗೆ ಹಂಚಿದ್ದಾರೆಂಬ ಮಾತು ಕೇಳಿಬಂದಿದೆ.

ಗುಂಡ್ಲುಪೇಟೆ: ಮತಯಾಚನೆ ಮಾಡುವ ವೇಳೆಯಲ್ಲಿ ಚಾ.ನಗರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಮತದಾರರಿಗೆ ಹಣ ಹಂಚಿಕೆ ಮಾಡುವುದರೊಂದಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಬಿ.ಜೆ.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.