ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಎಚ್ಚರಿಕೆ
Team Udayavani, Mar 3, 2017, 11:16 AM IST
ಮೈಸೂರು: “ನ್ಯಾಯಾಲಯವೇ ನನ್ನನ್ನು ನಿರ್ದೋಷಿ ಎಂದಿದೆ. ಆದರೂ ಪದೇ ಪದೆ ಭ್ರಷ್ಟ, ಜೈಲಿಗೆ ಹೋಗಿಬಂದವರು ಎಂದು ಟೀಕಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, “ನನ್ನ ವಿರುದ್ಧದ ಪ್ರಕರಣಗಳ ಮರು ತನಿಖೆ ಮಾಡಿಸುವ ಸಿದ್ದರಾಮಯ್ಯ ಬೆದರಿಕೆಗೆ ಜಗ್ಗುವುದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ಧದ ಹೋರಾಟ ಮುಂದುವರಿಸುತ್ತೇನೆ. ಹೋದಲ್ಲಿ-ಬಂದಲ್ಲಿ ನನ್ನನ್ನು ಭ್ರಷ್ಟ ಎಂದು ಟೀಕಿಸುತ್ತಿರುವ ಸಿದ್ದರಾಮಯ್ಯ, ದೇಶ ಕಂಡ ಮಹಾನ್ ಭ್ರಷ್ಟ ಮುಖ್ಯಮಂತ್ರಿ’ ಎಂದು ಟೀಕಿಸಿದರು.
“ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರಿಗಾಗಿ ಅಲ್ಪ ಸ್ವಲ್ಪ ಡಿನೋಟಿಫೀಕೇಷನ್ ಮಾಡಿದ್ದ ಆರೋಪಗಳಿಂದ ನ್ಯಾಯಾಲಯವೇ ದೋಷ ಮುಕ್ತಗೊಳಿಸಿದೆ. ಹೀಗಿದ್ದರೂ ಸಿದ್ದರಾಮಯ್ಯ ನನ್ನನ್ನು ಬೆದರಿಸುವ ತಂತ್ರಗಳನ್ನು ಮಾಡುತ್ತಿದ್ದಾರೆ. ಅವರ ಬೆದರಿಕೆಗಳಿಗೆ ಹೆದರುವುದಿಲ್ಲ’ ಎಂದು ಕಿಡಿಕಾರಿದರು. ಸಿದ್ದರಾಮಯ್ಯಗೆ ಧೈರ್ಯವಿದ್ದರೆ ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಲೆಹರ್ ಸಿಂಗ್ ಅವರ ಡೈರಿ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಸವಾಲು ಹಾಕಿದರು.
ಭಿನ್ನಾಭಿಪ್ರಾಯ ಶಮನ:
“ನನ್ನ ಮತ್ತು ಮಾಜಿ ಸಚಿವ ಸೋಮಣ್ಣ ನಡುವಿನ ಮನಸ್ತಾಪ ಹೋಗಲಾಡಿಸುವ ಸಲುವಾಗಿಯೇ ಅವರ ಮನೆಗೆ ಹೋಗಿದ್ದೆ. ಅವರೊಂದಿಗೆ ಮಾತನಾಡಿ, ಎಲ್ಲವನ್ನು ಬಗೆಹರಿಸಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ನನ್ನ ಮತ್ತು ಸೋಮಣ್ಣ ನಡುವೆ ಭಿನ್ನಾಭಿಪ್ರಾಯ ಬರುವುದಿಲ್ಲ’ ಎಂದು ಬಿಎಸ್ವೈ ಸ್ಪಷ್ಟಪಡಿಸಿದರು.
16ಕ್ಕೆ ಪರಿಮಳಾ ನಾಗಪ್ಪ ಬಿಜೆಪಿಗೆ:
ಹನೂರು ಕ್ಷೇತ್ರದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಮಾ.16ರಂದು ಕೊಳ್ಳೇಗಾಲದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು.
ಯಾರೇ ಬಂದರು ಸ್ವಾಗತ
ಬಿಜೆಪಿ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಯಾರೇ ಪಕ್ಷಕ್ಕೆ ಬಂದರೂ ಅವರಿಗೆ ಮುಕ್ತ ಸ್ವಾಗತವಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ಪಕ್ಷದಲ್ಲೇ ಬಲಿಷ್ಠ ಅಭ್ಯರ್ಥಿಗಳಿದ್ದು, ಬಿಜೆಪಿಗೆ ಸೇರ್ಪಡೆಯಾಗುವ ಯಾರಿಗೂ ಟಿಕೆಟ್ ನೀಡುವ ಭರವಸೆ ನೀಡಿಲ್ಲ. ಆದರೆ ಇನ್ನೂ 50ರಿಂದ 60 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಅವಶ್ಯಕತೆ ಇದೆ. ಹೀಗಾಗಿ ಯಾರಿಗೆ ಟಿಕೆಟ್ ನೀಡಬೇಕೆಂಬ ಕುರಿತು ಪಕ್ಷದ ವತಿಯಿಂದ ಸಮೀಕ್ಷೆ ನಡೆಸಿ, ನಂತರ ರಾಷ್ಟ್ರೀಯ ಅಧ್ಯಕ್ಷರ ಮುಂದೆ ಟಿಕೆಟ್ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.