Cauvery ನೀರನ್ನು ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ಹರಿಸಲಾಗುತ್ತಿದೆ: ಪ್ರತಾಪ್ ಸಿಂಹ ಆರೋಪ
Team Udayavani, Sep 16, 2023, 2:42 PM IST
ಮೈಸೂರು: ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರನ್ನು ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೂ ಡ್ಯಾಂ ಗೆ ಹೋಗಿ ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ. ಈ ವಿಚಾರವಾಗಿ ನಾನು ಚಾಲೆಂಜ್ ಮಾಡುತ್ತೇನೆ. ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಸೆ.13 ರಿಂದ ನೀರು ಹರಿಸಲಾಗುತ್ತಿದೆ. ನಾವು ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ಹೇಮಾವತಿ ಡ್ಯಾಂ ನಲ್ಲಿ 12 ಟಿಎಂಸಿ ಇದೆ. ಹಾರಂಗಿ, ಕಬಿನಿ ಡ್ಯಾಂಗಳು ಬರಿದಾಗಿದೆ. ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ನೀರು ಕೊಡಬಾರದು. ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು ಎಂದರು.
ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ. ಸ್ಟಾಲಿನ್ ಅವರ ಡಿಎಂಕೆ ಜೊತೆ ಮೈತ್ರಿ ಮುಖ್ಯ. ತಮಿಳುನಾಡಿಗೆ ನೀರು ಬಿಡಬೇಡಿ, ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ನಾನು ಹೇಳಿದ್ದೆ. ಸಭೆಯಲ್ಲಿಯೂ ಅದನ್ನೇ ಹೇಳಿದ್ದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಟಾಲಿನ್ ಜೊತೆ ಒಳ್ಳೆಯ ನಂಟಿದೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ. ರಾಜ್ಯದ ಜನ 135 ಸೀಟು ಕೊಟ್ಟಿದ್ದಾರೆ. ಇನ್ನು ಐದು ವರ್ಷ ಯಾರು ಏನು ಮಾಡಲಾಗದು ಎಂದುಕೊಂಡಿದ್ದಾರೆ ಎಂದರು.
ಇದನ್ನೂ ಓದಿ:Pocso Case: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ
ಇದೇ ರೀತಿ ನೀರು ಬಿಟ್ಟರೆ ಬೆಂಗಳೂರು ಮೈಸೂರು ಮಂಡ್ಯ ಎಲ್ಲಾ ಕಡೆ ಕುಡಿಯುವ ನೀರಿಗೂ ಹಾಹಾಕಾರ ಬರುತ್ತದೆ. ತಮಿಳುನಾಡಿನಲ್ಲಿ 4 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಬೆಳೆದಿದ್ದಾರೆ. ಅಳತೆಗೆ ಮೀರಿದ ಬೆಳೆ ಬೆಳೆದಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಇದನ್ನು ಮನವರಿಕೆ ಮಾಡಿಕೊಡಬೇಕು. ರಾಜ್ಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಾಪ್ ಸಿಂಹ ಆಗ್ರಹಿಸಿದರು.
ಅದ್ದೂರಿ ಮೈಸೂರು ದಸರಾ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದ್ದೂರಿ, ಸರಳ ದಸರಾ ಚರ್ಚೆಯಲ್ಲಿ ನಾನಿಲ್ಲ. ಸಾಂಪ್ರದಾಯಕವಾಗಿ ದಸರಾ ಮಾಡಲಿ. ದಸರಾ ಮಾಡುವಾಗ ಒಂದಷ್ಟು ಹಣ ಖರ್ಚಾಗುತ್ತದೆ ಎಂದ ಮಾತ್ರಕ್ಕೆ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯ ಮುರಿಯುವುದು ಬೇಡ. ದಸರಾ ಅಂದರೆ ಜಂಬೂಸವಾರಿ, ದೀಪಾಲಂಕಾರ, ಕ್ರೀಡೆ, ಗೋಷ್ಠಿ ಇರುತ್ತದೆ, ಇದಕ್ಕೆಲ್ಲ ಖರ್ಚು ಆಗಿಯೇ ಆಗುತ್ತದೆ. ಬರ ಎಂದು ಸಂಪ್ರದಾಯ ಮುರಿಯುವುದು ಬೇಡ ಎಂದರು.
ಸರ್ವ ಪಕ್ಷ ಸಭೆಗೆ ಪ್ರಧಾನಿ ಸಮಯ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಒಬ್ಬ ಜನ ಪ್ರತಿನಿಧಿಗೆ ಸಾಮಾನ್ಯ ಜ್ಞಾನ ಇರಬೇಕು. ಮೋದಿ ಅಲ್ಲ. ಮನಮೋಹನ್ ಸಿಂಗ್ ಬಂದರೂ ಈ ವಿಚಾರದಲ್ಲಿ ಏನು ಮಾಡಲಾಗದು. ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ನಿರ್ಣಯವಾಗಬೇಕು. ಸಿದ್ದರಾಮಯ್ಯ ಅವರು ಮೋದಿ ಬದಲು ಸ್ಟಾಲಿನ್ ಅವರಿಗೆ ಕರೆ ಮಾಡಲಿ. ನೀರು ಬಿಡುವುದುದಕ್ಕೆ ಆಗಲ್ಲ ಎಂದು ಹೇಳಲಿ. ಇವರಿಗೆ ಲೋಕಸಭಾ ಚುನಾವಣೆ ಮುಖ್ಯವೇ ಅಥವಾ ರಾಜ್ಯದ ಜನರ ಹಿತಸಾಕ್ತಿ ಮುಖ್ಯವೇ ಎಂದು ಪ್ರಶ್ನಿಸಿದರು.
ಚೈತ್ರಾ ಕುಂದಾಪುರ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಿಸಿದ ಸಂಸದ ಪ್ರತಾಪಸಿಂಹ, ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ. ಅವರ ವಿಚಾರವೂ ನನಗೆ ಗೊತ್ತಿಲ್ಲ. ಈ ಬಗ್ಗೆ ನನ್ನನ್ನ ಏನೂ ಕೇಳಬೇಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.