14 ಗ್ರಾಮಗಳಲ್ಲಿ ನೀರು ಪೂರೈಕೆ ಪುನಶ್ಚೇತನ ಕಾಮಗಾರಿ ಚಾಲನೆ
Team Udayavani, Feb 23, 2019, 7:29 AM IST
ಹುಣಸೂರು: ತಾಲೂಕಿನ ಬನ್ನಿಕುಪ್ಪೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ 14 ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆೆಯ ಪುನಶ್ಚೇತನ ಕಾಮಗಾರಿ ಸೇರಿದಂತೆ 42 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಜಿಪಂ ಸದಸ್ಯೆ ಡಾ.ಪುಷ್ಪಾ ಅಮರ್‌ನಾಥ್ ಚಾಲನೆ ನೀಡಿದರು.
ತಾಲೂಕಿನ ಬೀಜಗನಹಳ್ಳಿ ಬಳಿಯ ಮಂಟಿಕೊಪ್ಪಲಿನಲ್ಲಿ 5.2 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕುಡಿಯುವ ನೀರು ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಜಿಪಂ ಕ್ಷೇತ್ರಕ್ಕೆ ಬಂದಿರುವ 42 ಲಕ್ಷ ರೂ. ಅನುದಾನದಲ್ಲಿ ಅಗತ್ಯವಿರುವೆಡೆ ಹೊಸ ಕೊಳವೆಬಾವಿ ಕೊರೆಸುವುದು, ಅಂತರ್ಜಲ ವೃದ್ಧಿಸಲು ರೀಡ್ರಿಗ್, ಹೆಚ್ಚುವರಿ ಪೈಪ್‌ಲೈನ್ ಅಳವಡಿಕೆ, ಬದಲಾಯಿಸುವಿಕೆ, ಮೋಟಾರ್-ಸ್ಟಾರ್ಟರ್ ದುರಸ್ತಿ ಸೇರಿದಂತೆ ಹಲವೆಡೆ ಚರಂಡಿ-ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದರು.
ಈಗಾಗಲೇ ಹಲವೆಡೆ ನೀರಿನ ಸಮಸ್ಯೆ ಎದುರಾಗಿದ್ದು, ತಕ್ಷಣವೇ ಕಾಮಗಾರಿಗಳನ್ನು ಆರಂಭಿಸಿ, ವಾರದೊಳಗೆ ಪೂರ್ಣಗೊಳಿಸಿ ತಮಗೆ ಮಾಹಿತಿ ನೀಡಬೇಕೆಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದ ಅವರು, ಗ್ರಾಮಸ್ಥರು ಸಹ ಕಾಮಗಾರಿಗಳು ಉತ್ತಮವಾಗಿ ನಡೆಯುವಂತೆ ಮೇಲುಸ್ತುವಾರಿ ವಹಿಸಬೇಕು. ನೀರನ್ನು ಮಿತವಾಗಿ ಬಳಸಬೇಕು ಎಂದು ಮನವಿ ಮಾಡಿದರು.
ಮಂಟಿಕೊಪ್ಪಲು ಬಳಿಯ ಕೆರೆ ಏರಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ದುರಸ್ತಿ ಮಾಡಿಸಿಕೊಡುವಂತೆ ಗ್ರಾಮಸ್ಥರ ಕೋರಿಕೆಗೆ ಸ್ಪಂದಿಸಿದ ಅವರು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಕಾಮಗಾರಿಯನ್ನು ತಾವೇ ಮುಂದೆ ನಿಂತು ಪೂರ್ಣಗೊಳಿಸುವುದಾಗಿ ತಾಪಂ ಸದಸ್ಯ ರವಿ ಪ್ರಸನ್ನ ವಾಗ್ಧಾನ ಮಾಡಿದರು.
ಬರಪಟ್ಟಿಗೆ ಹುಣಸೂರು ಸೇರಿಸಿ: ತಾಲೂಕಿನ ಬಹುತೇಕ ಕಡೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಕೃಷಿ ಕಾರ್ಮಿಕರು ಕೆಲಸಕ್ಕೆ ಪರದಾಡುವಂತಾಗಿದೆ. ಹೀಗಾಗಿ ಹುಣಸೂರು ತಾಲೂಕನ್ನು ತಕ್ಷಣವೇ ಬರ ಪೀಡಿತ ಪ್ರದೇಶವೆಂದು ಘೋಷಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮತ್ತು ಸರಕಾರದಿಂದ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿಸಬೇಕೆಂದು ಶಾಸಕ ವಿಶ್ವನಾಥ್ ಅವರಲ್ಲಿ ಪುಷ್ಪಾ ಅಮರನಾಥ್ ಮನವಿ ಮಾಡಿದರಲ್ಲದೆ, ತಾವು ಕೂಡ ಜಿಪಂ ಸಭೆಯಲ್ಲಿ ಒತ್ತಾಯಿಸುವುದಾಗಿ ತಿಳಿಸಿದರು.
ಎಲ್ಲೆಲ್ಲಿ ಚಾಲನೆ?: ಬನ್ನಿಕುಪ್ಪೆ, ದೊಡ್ಡೇಗೌಡನಕೊಪ್ಪಲು, ಮೂಡಲಕೊಪ್ಪಲು, ಕುಪ್ಪೆ-ಕೊಳಗಟ್ಟ, ಶ್ರವಣನಹಳ್ಳಿ, ಕಾಳೇಗೌಡನಕೊಪ್ಪಲು-ಜಡಗನಕೊಪ್ಪಲು, ಕೆಬ್ಬೇಕೊಪ್ಪಲು-ಮರದೂರು, ರಾಮಪಟ್ಟಣ, ಸಿದ್ದನಕೊಪ್ಪಲು, ಚಿಕ್ಕಹುಣಸೂರು, ಹಂಚ್ಯ-ಆಜಾದ್‌ನಗರ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ಮಂಟಿಕೊಪ್ಪಲು ಮಹದೇವ್, ಗ್ರಾಪಂ ಸದಸ್ಯರಾದ ಶಾಂತಮ್ಮ, ಸ್ವಾಮಿ, ರವಿರೆಡ್ಡಿ, ಮಹೇಶ್, ರವಿ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕುಮಾರ್ ಮತ್ತಿತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಪೊಲೀಶ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.