Mysore; ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ನಮ್ಮ ವಿರೋಧವಿದೆ: ಪ್ರತಾಪ್ ಸಿಂಹ
Team Udayavani, Dec 29, 2023, 12:58 PM IST
ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣದ ಅಗತ್ಯವಿಲ್ಲ. ನಂದಿ ಬೆಟ್ಟಕ್ಕೆ ಬೇಕಾದರೆ ರೋಪ್ ವೇ ನಿರ್ಮಾಣ ಮಾಡಿಕೊಳ್ಳಲಿ. ಈ ಹಿಂದೆಯೇ ಶಾಸಕ ಜಿ.ಟಿ ದೇವೆಗೌಡ ಹಾಗೂ ನಾವೆಲ್ಲರೂ ಸೇರಿ ಸಭೆ ನಡೆಸಿ ಇದರ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲು ನಮ್ಮ ಪ್ರಬಲ ವಿರೋಧವಿದೆ. ಚಾಮುಂಡಿ ಬೆಟ್ಟ ಪ್ರೇಕ್ಷಣೀಯ ಸ್ಥಳವಲ್ಲ, ಅದು ಧಾರ್ಮಿಕ ತಾಣ. ಚಾಮುಂಡಿ ಬೆಟ್ಟಕ್ಕೆ ಭಕ್ತಿ ಭಾವದಿಂದ ಹೋಗಬೇಕು. ಚಾಮುಂಡಿ ಬೆಟ್ಟ ರೋಪ್ ವೇ ನಲ್ಲಿ ಹೋಗಿ ನೋಡುವಂತಹ ಸ್ಥಳವಲ್ಲ. ರೋಪ್ ವೇ ಯನ್ನು ನಾವು ವಿರೋಧಿಸುತ್ತೇವೆ ಎಂದರು.
ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆ ನೆರವೇರಲಿದೆ. ಅಂದು ಮೈಸೂರು-ಕೊಡಗು ಜಿಲ್ಲೆಯ ಎಲ್ಲಾ ದೇಗುಲಗಳಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ ಎಂದರು.
ಇದನ್ನೂ ಓದಿ:Rewind 2023; ಹೊಸಬರ ಕಮಾಲ್ ಸ್ಟಾರ್ ಗಳಿಗೆ ಸವಾಲ್: ಬಂದಿದ್ದು ಹಲವು-ಗೆದ್ದಿದ್ದು ಕೆಲವು
ಬೆಂಗಳೂರು- ಮೈಸೂರು ಹೇವೇ ನಿರ್ಮಾಣ ಕ್ರೆಡಿಟ್ ವಾರ್ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಹೈವೇ ಮಾಡಿಸಿದ್ದು ನಾನೇ. ಹೈವೇ ನಿರ್ಮಾಣಕ್ಕೆ 8,500 ಕೋಟಿ ರೂ. ವೆಚ್ಚವಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಎಂಟೂವರೆ ರೂಪಾಯಿ ಕೂಡ ನೀಡಿಲ್ಲ. ಹೈವೇ ನಿರ್ಮಿಸಿದ್ದು ಕೇಂದ್ರ ಸರ್ಕಾರ. ಹೈವೇ ಉದ್ಘಾಟನೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ. ಬೇಕಾದರೆ ಹೈವೇಯಲ್ಲಿ ಓಡಾಡುವವರನ್ನು ಕೇಳಿದರೂ, ರಸ್ತೆಯನ್ನು ಯಾರು ಮಾಡಿಸಿದ್ದಾರೆ ಎಂದು ಹೇಳುತ್ತಾರೆ ಎಂದರು.
ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ ಹುಯಿಲಾಳು ಬಳಿ 26 ಎಕರೆ ಜಾಗ ಗುರುತಿಸಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಅನುಮೋದಿಸಿದರೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.