ಶಾಲೆಗೆ ಬಂದ ಮಕ್ಕಳಿಗೆ ಪ್ರೀತಿಯ ಸ್ವಾಗತ

ಶಾಲಾ ಆವರಣದಲ್ಲಿ ತಳಿರು ತೋರಣ, ಬಣ್ಣದ ರಂಗೋಲಿ

Team Udayavani, Aug 24, 2021, 4:18 PM IST

ಶಾಲೆಗೆ ಬಂದ ಮಕ್ಕಳಿಗೆ ಪ್ರೀತಿಯ ಸ್ವಾಗತ

ಮೈಸೂರು: ಸತತ ಆರು ತಿಂಗಳ ಬಳಿಕ ಶಾಲೆ ಆರಂಭವಾದ ಹಿನ್ನೆಲೆ ಶಾಲಾ ಆವರಣದಲ್ಲಿ ತಳಿರು ತೋರಣ, ಬಣ್ಣ ಬಣ್ಣದ ರಂಗೋಲಿ, ಶಿಕ್ಷಕರಿಂದ ಪ್ರೀತಿಯ ಸ್ವಾಗತ ಈ ಎಲ್ಲವು ಮಕ್ಕಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ್ದವು.

ಕೋವಿಡ್‌ದಿಂದಾಗಿ ಹಲವು ತಿಂಗಳ ಬಳಿಕ ಸೋಮ ವಾರದಿಂದ 9ನೇ ತರಗತಿ ಮೇಲ್ಪಟ್ಟ ಭೌತಿಕ ತರಗತಿಗಳು ಕೋವಿಡ್‌ ಸುರಕ್ಷತ ಕ್ಷಮ ಗಳೊಂದಿಗೆ ಆರಂಭವಾದವು. ಬೆಳಗ್ಗೆಯೇ ಎಲ್ಲಾ ಪ್ರೌಢಶಾಲೆಗಳು ಮದುವಣಗಿತ್ತಿಯಂತೆ ತಳಿರು ತೋರಣ, ವಿಶೇಷ ರಂಗೋಲಿಯಿಂದ
ಸಿಂಗಾರಗೊಂಡು ಮಕ್ಕಳನ್ನು ಸ್ವಾಗತಿಸಿಕೊಳ್ಳಲು ಅಣಿಯಾಗಿದ್ದವು. ಶಾಲೆ ಪ್ರವೇಶಿಸಿದ ವಿದ್ಯಾರ್ಥಿಗಳಿಗೆ ಸಂಘ ಸಂಸ್ಥೆಗಳು, ಜನಪ್ರತಿನಿಧಿ ಗಳು ಹಾಗೂ ಶಿಕ್ಷಕರು ಪುಸ್ತಕ, ಹೂ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರತಿ ವಿದ್ಯಾರ್ಥಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಯಿತು.
ಬಳಿಕ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಸ್ಯಾನಿಟೈಸರ್‌ ಬಳಕೆ, ಸಾಮಾಜಿಕ ಅಂತರ ಪಾಲಿಸುವುದು, ಅನಾರೋಗ್ಯ ಲಕ್ಷಣಗಳಿದ್ದರೆ ತಿಳಿಸಬೇಕು ಎಂಬಿತ್ಯಾದಿ ಸಲಹೆ ನೀಡಿದ ಬಳಿಕ ಎಲ್ಲಾ ವಿದ್ಯಾರ್ಥಿಗಳಿಂದ ಪೋಷಕರ ಅನುಮತಿ ಪತ್ರವನ್ನು ಶಿಕ್ಷಕರು ಪಡೆದುಕೊಂಡರು.

ಶೇ.50 ಹಾಜರಾತಿ: ಆರು ತಿಂಗಳ ಬಳಿಕ ಆರಂಭವಾದ 9, 10ನೇ ತರಗತಿಗೆ ಶೇ.50 ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವ ಮೂಲಕ ಭೌತಿಕ ತರಗತಿಯಲ್ಲಿ ಕುಳಿದು ಪಾಠ ಪ್ರವಚನ ಆಲಿಸಿದರು. ಈ ವೇಳೆ ಸಾಮಾಜಿಕಅಂತರ ಕಾಯ್ದುಕೊಳ್ಳುವ ಸಲುವಾಗಿ ಎರಡು ಅಂತರದಂತೆ ಡೆಸ್ಕ್ ಜೋಡಿಸಿ, ಕೊಠಡಿಯಲ್ಲಿ 15ರಿಂದ 20 ವಿದ್ಯಾರ್ಥಿಗಳುಕೂರುವ ವ್ಯವಸ್ಥೆಕಲ್ಪಿಸಲಾಗಿತ್ತು.

ಇದನ್ನೂ ಓದಿ:ಸಪ್ಟೆಂಬರ್ 1 ರಿಂದ ನೆರೆಯ ರಾಜ್ಯಗಳಿಗೆ ಕದಂಬ ಬಸ್ ಓಡಾಟ

ಹಸಿರು ಚಪ್ಪರ: ನಗರದ ಸೆಂಟ್‌ ಮೇರಿಸ್‌ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಲಾಯಿತು. ಶಾಲಾ ಪ್ರವೇಶ ದ್ವಾರದಲ್ಲಿ ಮಾವಿನ ಸೊಪ್ಪು, ಬಾಳೆ ಕಂದು ಕಟ್ಟಿ, ಬಣ್ಣ ಬಣ್ಣದ ರಂಗೋಲಿ ಬಿಡಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ಜೊತೆಗೆ ಮೈಸೂರಿನ ಮರಿಮಲ್ಲಪ್ಪ, ಮಹಾರಾಜ ಪ್ರೌಢಶಾಲೆ, ಸದ್ವಿದ್ಯಾ ಹೈಸ್ಕೂಲ್‌, ನಿರ್ಮಲಾ ಕಾನ್ವೆಂಟ್‌, ಸೈಂಟ್‌ ಮೇರಿಸ್‌ ಸೇರಿದಂತೆ ಹಲವು ಶಾಲೆಗಳಲ್ಲಿ ಶೇ. 60ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಹಾಜರಾದರು.

ಸಹಪಾಠಿಗಳೊಂದಿಗೆ ಪೂರಿ ಸವಿದರು: ಒಂದೂವರೆ ವರ್ಷದ ಬಳಿಕ ನಗರ ಬಸ್‌ ನಿಲ್ದಾಣ, ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳ ಓಡಾಟ ಕಂಡುಬಂದಿತು. ಇದರಿಂದ ರಸ್ತೆ ಬದಿಯ ತಂಡಿ, ತಿನಿಸು ಮಾರುವ ಸ್ಥಳಗಳಲ್ಲಿ ವಿದ್ಯಾರ್ಥಿಗಳು ತಮ್ಮ ಸಹಪಾಠಿಗೊಳಂದಿಗೆ ಹರಟುತ್ತಾ ಗೋಲ್ಕೊಪ್ಪ, ಮಸಾಲ ಪೂರಿ, ಚುರುಮುರಿ ಸವಿದ ದೃಶ್ಯಗಳುಕಂಡು ಬಂದಿತು.

9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನಸಂಖ್ಯೆಯಲ್ಲಿ ಶಾಲೆಗೆ ಬಂದಿದ್ದಾರೆ. ಮೊದಲ ದಿನ ಯಾವುದೇ ತೊಂದರೆ ಇಲ್ಲದೇ ಮಧ್ಯಾಹ್ನದವರೆಗಿನ ತರಗತಿಗಳು ನಡೆದಿವೆ. ನಗರದಕೆಲವು ಶಾಲೆಗಳಿಗೆ ಭೇಟಿ ನೀಡಿದಾಗ ಹಬ್ಬದ ವಾತಾವರಣ ಕಂಡು ಬಂದಿತು. ಕೋವಿಡ್‌ ಮಾರ್ಗಸೂಚಿ ಅನುಸರಿಸಿ ತರಗತಿ ನಡೆಸಲಾಗುತ್ತಿದೆ. ಜೊತೆಗೆ ಎಲ್ಲಾ ಸುರಕ್ಷಾಕ್ರಮ ಕೈಗೊಳ್ಳಲಾಗಿದೆ.
-ರಾಮಚಂದ್ರರಾಜೇ ಅರಸ್‌, ಡಿಡಿಪಿಐ

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.