ಜೈಲಿಗೆ ಹೋಗಿ ಬಂದವರಿಗೆ ಹಾರ ಹಾಕಿ ಸ್ವಾಗತ: ವಿಷಾದ
Team Udayavani, Jul 25, 2017, 11:37 AM IST
ಮೈಸೂರು: ಅತ್ಯಾಚಾರಿಗಳಿಗೆ ಹಿಂದೆ ಸಮಾಜದಿಂದ ಬಹಿಷ್ಕರಿಸಲಾಗುತ್ತಿತ್ತು. ಆದರೆ, ಇಂದು ಇಂತಹ ಪ್ರಕರಣಗಳಲ್ಲಿ ಜೈಲಿಗೆ ಹೋದವರನ್ನು ಹಾರ-ತುರಾಯಿ ಹಾಕಿ ಬರಮಾಡಿಕೊಳ್ಳಲಾಗುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್.ಸಂತೋಷ್ ಹೆಗ್ಡೆ ವಿಷಾದಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗದಿಂದ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಸಂವಿಧಾನದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಅನೇಕ ಕಾನೂನುಗಳಿದ್ದರೂ ಅವುಗಳ ಜಾರಿಯಲ್ಲಿ ಸೋತಿದ್ದೇವೆ. ಸಮಾಜದಲ್ಲಿ ಬದಲಾವಣೆ ತರಲು ಕೇವಲ ಕಾನೂನು ರೂಪಿಸಿದರೆ ಸಾಲದು ಅದನ್ನು ಅನುಸರಿಸುವ ಮತ್ತು ಸರಿ-ತಪ್ಪುಗಳ ಅರಿತು ಆತ್ಮವಿಮರ್ಶೆ ಮಾಡಿಕೊಂಡು ನಡೆಯುವಂತಹ ಮನಸ್ಸುಳ್ಳವರು ಅವಶ್ಯಕ ಎಂದು ಹೇಳಿದರು.
ಪ್ರಸ್ತುತ ರಾಜಕೀಯ ಹಾಗೂ ಆಡಳಿತ ರಂಗಗಳೆರಡೂ ದುರುಪಯೋಗವಾಗಿದ್ದು, ಈಗಾಗಲೇ ಘಟಿಸಿರುವ ಅನೇಕ ಹಗರಣಗಳು ಇದಕ್ಕೆ ಉದಾಹರಣೆಯಾಗಿವೆ. ಯುವ ಸಮುದಾಯ ಎಚ್ಚರಗೊಂಡು ಕಾನೂನುಗಳನ್ನು ಪಾಲಿಸುವ ಭವಿಷ್ಯದ ಮಕ್ಕಳಿಗೆ ಸಮಾಜದಲ್ಲಿ ಶಾಂತಿ ನೆಲೆಸಿಕೊಡುವ ನಿಟ್ಟಿನಲ್ಲಿ ತೊಡಗಬೇಕಿದೆ ಎಂದರು.
ಭ್ರಷ್ಟಾಚಾರ ಪ್ರಕರಣಗಳು ಇಂದು ಹೆಚ್ಚಾಗಿದ್ದು, ಪ್ರಾಮಾಣಿಕತೆಗೆ ಬೆಲೆಯಿಲ್ಲದಂತಾಗಿದೆ. ಹಿಂದೆ ಅತ್ಯಾಚಾರಗಳಂತಹ ಪ್ರಕರಣಗಳಿಗೆ ಊರಿಂದ ಬಹಿಷ್ಕಾರ ಹಾಕಿ ಶಿಕ್ಷೆ ನೀಡಲಾಗುತ್ತಿತ್ತು. ಅದಕ್ಕಿಂತ ಕಠಿಣ ಶಿಕ್ಷೆ ಮತ್ತೂಂದಿರಲಿಲ್ಲ. ಆದರೆ, ಇಂದು ಜೈಲಿನಿಂದ ಬರುವವರಿಗೆ ಹಾರ, ತುರಾಯಿಗಳನ್ನು ಹಾಕಿ ಸನ್ಮಾನಿಸಿ ಕರೆತರುತ್ತಿರುವುದು ವಿಪರ್ಯಾಸ ಎಂದು ಹೇಳಿದರು.
ಪ್ರತಿಯೊಬ್ಬರಲ್ಲಿಯೂ ತೃಪ್ತಿ ಮತ್ತು ಮಾನವೀಯತೆ ಎಂಬುದು ತುಂಬ ಮುಖ್ಯ. ಇಲ್ಲವಾದಲ್ಲಿ ದುರಾಸೆಯಿಂದ ಸಮಾಜದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತದೆ. ಸರ್ಕಾರಿ ಹುದ್ದೆಗಳು ಮಾರಾಟದ ವಸ್ತುಗಳಂತಾಗಿದ್ದು, ಬಿಟ್ಟಿ ಬಂದಿಲ್ಲ, ಕೊಟ್ಟು ಬಂದ್ದಿದ್ದೀನಿ ಎಂಬ ಮಾತುಗಳು ಕೇಳಿ ಬರುತ್ತವೆ, ಇಂಥವರಿಂದ ಪ್ರಾಮಾಣಿಕವಾದ ಕೆಲಸ ಪಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಮೌಲ್ಯವು ಅರ್ಥಕಳೆದುಕೊಂಡಿದ್ದು, ಮೌಲ್ಯವೆಂದರೆ ಹಣಗಳಿಸುವುದಾಗಿದೆ. ಪೋಷಕರು ಮಕ್ಕಳಿಗೆ ಮೌಲ್ಯಗಳನ್ನು ರೂಪಿಸುವ ಮತ್ತು ನ್ಯಾಯಯುತವಾಗಿ ಹಣಗಳಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದು ಹೇಳಿದರು. ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಮಾತನಾಡಿ, ಮಕ್ಕಳಿಗೆ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ತಿಳಿಸುವಂತಹ ವಾತಾವರಣ ನಿರ್ಮಿಸಬೇಕು ಎಂದರು.
ಎಲ್ಲರೂ ನಮ್ಮ ಮಕ್ಕಳು ಎಂಬ ಮನೋಭಾವ ಬರಬೇಕು ಆ ಮೂಲಕ ಸಹಾಯ ಬಯಸುವ ಮಕ್ಕಳಿಗೆ ಸಹಾಯ ಮಾಡುವ, ರಕ್ಷಣೆ ನೀಡುವ, ತಪ್ಪು$ ದಾರಿಯಲ್ಲಿ ನಡೆಯುವವರನ್ನು ಸರಿದಾರಿಗೆ ತರುವ ಕಾರ್ಯವಾಗಬೇಕು ಎಂದು ತಿಳಿಸಿದರು. ಮೈಸೂರು ವಿವಿ ಪ್ರಬಾರ ಕುಲಪತಿ ಪೊ›.ದಯಾನಂದ ಮಾನೆ, ಕಾನೂನು ವಿಭಾಗದ ಡೀನ್ ಡಾ.ಸಿ.ಬಸವರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.