ನಮ್ಮನ್ನು ಬಿ.ಟೀಮ್ ಎಂದಿದ್ದ ಸಿದ್ದು ಈಗ ಏನು ಹೇಳ್ತಾರೆ?
Team Udayavani, Nov 17, 2019, 3:00 AM IST
ಹುಣಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ.ಟೀಮ್ ಎನ್ನುತ್ತಾ ಕೋಮುವಾದಿಗಳೆಂದು ಬಿಂಬಿಸುತ್ತಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ಪ್ರಖರ ಹಿಂದುತ್ವದ ವಿಚಾರಧಾರೆಯುಳ್ಳ ಶಿವಸೇನೆ ಜೊತೆ ಸೇರಿ ಸರ್ಕಾರ ರಚಿಸಲು ಹೊರಟಿದೆ. ಈ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ನಗರದಲ್ಲಿ ಶನಿವಾರ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಒನ್ ಬೈ ತ್ರಿ ಸರ್ಕಾರ ರಚನೆಯಾಗುತ್ತಿದ್ದು, ಚುನಾವಣಾ ಪೂರ್ವದಲ್ಲೇ ಶಿವಸೇನೆಯೊಂದಿಗೆ ಸೇರಿ ಒನ್ ಬೈಟು ಮಾಡಿಕೊಳ್ಳಬಹುದಿತ್ತು ಎಂದು ಲೇವಡಿ ಮಾಡಿದರು.
ಬಿಜೆಪಿ ಮೃದು ಹಿಂದುತ್ವವಾದರೆ, ಶಿವಸೇನೆ ಪ್ರಖರ ಹಿಂದುತ್ವ ಧೋರಣೆ ಹೊಂದಿದೆ. ಮುಸಲ್ಮಾನರು ಈ ದೇಶದಿಂದ ತೊಲಗಬೇಕು ಎನ್ನುವವರ ಜೊತೆ ಹೊಂದಾಣಿಕೆ ಮಾಡಿಕೊಂಡು ಸರಕಾರ ರಚನೆಗೆ ಮುಂದಾಗಿರುವುದು ನಿಮ್ಮ ಇಬ್ಬುಗೆ ನೀತಿಯನ್ನು ತೋರುತ್ತದೆ ಎಂದು ವಾಗ್ಧಾಳಿ ನಡೆಸಿದರು.
ಇನ್ನು ತಮ್ಮ ಪಕ್ಷವನ್ನು ಕೋಮವಾದಿ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಟೀಮ್ ಎಂಬ ಅಪ ಪ್ರಚಾರದಿಂದಾಗಿ ಅಲ್ಪಸಂಖ್ಯಾತರು ದೂರವಾಗಿದ್ದರು. ಆದರೆ, ಆ ವರ್ಗದ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಈ ಬಾರಿ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಅವರು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಹ್ವಾನದ ಮೇರೆಗೆ ಬಿಜೆಪಿ ಸೇರಿದ್ದೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಳೆದ ಮೂರು ತಿಂಗಳಿನಿಂದ ಅವರ ಹೇಳಿಕೆಗಳನ್ನು ಮಾಧ್ಯಮದವರೇ ಗಮನಿಸಿದ್ದೀರಿ, ನೀವೇ ಪರಾಮರ್ಶಿಸಿ ಎಂದರು.
ಈ ಉಪ ಚುನಾವಣೆಗಳು ಮೂರು ಪಕ್ಷಗಳಿಗೆ ಅಗ್ನಿ ಪರೀಕ್ಷೆಯಾಗಿದ್ದು, ಫಲಿತಾಂಶದ ನಂತರ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ. ಯಾವ ಪಕ್ಷಗಳು ಎಷ್ಟು ಸೀಟ್ ಪಡೆಯುವುದರ ಮೇಲೆ ಎಲ್ಲವೂ ಅಡಗಿದೆ ಮಾರ್ಮಿಕವಾಗಿ ನುಡಿದರು.
ತಕ್ಕ ಪಾಠ ಕಲಿಸಿ: ಜೆಡಿಎಸ್ ಪಕ್ಷಕ್ಕೆ ಹುಣಸೂರು ಕ್ಷೇತ್ರದ ಜೊತೆ ಅವಿನಾಭಾವ ಸಂಬಂಧ ಇದೆ. ಶಾಸಕ ಸ್ಥಾನವನ್ನು ಮಾರಿಕೊಂಡವರಿಂದಾಗಿ ಚುನಾವಣೆ ಬಂದಿದೆ. ತಾವು ಕ್ಷೇತ್ರದ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ, ಮತ ಯಾಚಿಸುವೆ. ತಮ್ಮ ಅವಧಿಯಲ್ಲಿ ಸಾಲಮನ್ನಾ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಹೆಮ್ಮೆ ಇದೆ. ಈ ಭಾಗದಲ್ಲಿ ತಂಬಾಕಿನ ಸಮಸ್ಯೆ ಎದುರಾದಾಗ ಎಚ್.ಡಿ.ದೇವೇಗೌಡರು ಸ್ಪಂದಿಸಿ ಉತ್ತಮ ಬೆಲೆ ಕೊಡಿಸಿದ್ದರು ಎಂಬುದನ್ನು ಕ್ಷೇತ್ರದ ಜನತೆ ಮರೆಯಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.