ಸಮಯ ಬಂದಾಗ ಬಿಜೆಪಿ ಕುದುರೆ ವ್ಯಾಪಾರ ತಿಳಿಸುವೆ
Team Udayavani, Jan 1, 2019, 5:43 AM IST
ಮೈಸೂರು: ರೈತರ ಸಾಲಮನ್ನಾ ವಿಚಾರವನ್ನು ಟೀಕಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ವಲಯ ಮತ್ತು ರೈತ ಸಮುದಾಯದ ವಿರೋಧಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಕಡಿಮೆ ಸಾಲಮನ್ನಾ ಮಾಡಿ ರೈತರಿಗೆ ಲಾಲಿಪಾಪ್ ಕೊಟ್ಟಿದ್ದಾರೆ ಎಂದು ಟೀಕಿಸುವ ಪ್ರಧಾನಿ ನರೇಂದ್ರ ಮೋದಿ, ರೈತ ಸಮುದಾಯಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ತಾವು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮನ್ನಾ ಮಾಡುವಂತೆ ಎರಡು ಬಾರಿ ಪ್ರಧಾನಿ ಮೋದಿ ಅವರ ಬಳಿಗೆ ರಾಜ್ಯದ ಸರ್ವಪಕ್ಷ ನಿಯೋಗ ಕರೆದೊಯ್ದು ಮನವಿ ಮಾಡಿದರೂ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬುದು ಇದರಿಂದಲೇ ತಿಳಿಯುವುದಿಲ್ಲವೇ ಎಂದು ಪ್ರಶ್ನಿಸಿದರು.
ಬಿಜೆಪಿಯವರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕಿಡಿಕಾರಿ, ಕ್ಷಮೆ ಕೇಳಲು ಒತ್ತಾಯಿಸಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಸಂಸದೆಯಾಗಿರುವ ಶೋಭಾ ಕರಂದ್ಲಾಜೆಗೆ ರಾಜ್ಯಸರ್ಕಾರದ ಬಗ್ಗೆ ಏನು ಗೊತ್ತು? ಅವರೇನಾದರು ಮುಖ್ಯಮಂತ್ರಿ ಆಗಿದ್ದರಾ? ಕುದುರೆ ವ್ಯಾಪಾರದ ಬಗ್ಗೆ ನಾನೇಕೆ ಈಗ ಎಲ್ಲವನ್ನೂ ಹೇಳಲಿ, ಸಮಯ ಬಂದಾಗ ಅವರಿಂದಲೇ ಎಲ್ಲವನ್ನೂ ಹೇಳಿಸುತ್ತೇನೆ ಎಂದು ತಿರುಗೇಟು ನೀಡಿದರು.
ಜೆಡಿಎಸ್ ಶಾಸಕರ ವಿರುದ್ಧ ಸಿದ್ದುಗೆ ದೂರು: ಪಿರಿಯಾಪಟ್ಟಣದ ಜೆಡಿಎಸ್ ಶಾಸಕ ಕೆ.ಮಹದೇವ ಅವರು ಕ್ಷೇತ್ರದ ಮಾಜಿ ಶಾಸಕ ಕೆ.ವೆಂಕಟೇಶ್ ವಿರುದ್ಧ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ನೇತೃತ್ವದಲ್ಲಿ ಪಿರಿಯಾಪಟ್ಟಣದಿಂದ ಬಂದಿದ್ದ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರಿಗೆ ವರದಿ ಒಪ್ಪಿಸಿ, ಕ್ರಮಕ್ಕೆ ಒತ್ತಾಯಿಸಿದರು. ಕಾರ್ಯಕರ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ ಅವರು ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.