ಸರ್ಕಾರಿ ಶಾಲೆ ಮುಚ್ಚಿದರೆ ಮಕ್ಕಳು ಎಲ್ಲಿ ಓದಬೇಕು?
Team Udayavani, Jul 10, 2018, 12:22 PM IST
ಮೈಸೂರು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಸೇರಿದ ದಸಂಸ ಪದಾಧಿಕಾರಿಗಳು, ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ ಬಡವರ್ಗದ ಜನತೆಯ ಮಕ್ಕಳು ವಿದ್ಯಾಭ್ಯಾಸಕ್ಕೆ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.
ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ಪಾವತಿಸಿ ಬಡ ವರ್ಗದ ಜನರು ತಮ್ಮ ಮಕ್ಕಳನ್ನು ಓದಿಸಲಾಗುವುದಿಲ್ಲ. ಹೀಗಾಗಿ ಸರ್ಕಾರ ಶಾಲೆಗಳನ್ನು ಮುಚ್ಚದೆ ಉಳಿಸಿಕೊಡಬೇಕು ಎಂದು ಒತ್ತಾಯಿಸಿದರು. ಹೆಚ್ಚು ಮಕ್ಕಳು ಬಾರದ ಸರ್ಕಾರಿ ಶಾಲೆಗಳನ್ನು ಮುಚ್ಚುವುದಾಗಿ ಸರ್ಕಾರ ಬಜೆಟ್‌ನಲ್ಲಿ ಹೇಳಿರುವುದು ಖಂಡನೀಯ.
ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿದು ಸರ್ಕಾರಿ ಶಾಲೆಗಳನ್ನು ಉಳಿಸಲು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಈ ಮೂಲಕ ಎಲ್ಲಾ ವರ್ಗದ ಬಡಜನರ ಮೂಲಭೂತ ಹಕ್ಕಾದ ಶಿಕ್ಷಣದ ಉಳಿವಿಗೆ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
28847 ಸರ್ಕಾರಿ ಹಾಗೂ 8530 ಅನುದಾನಿತ ಶಾಲೆಗಳೊಂದಿಗೆ ಮಕ್ಕಳು ಬಾರದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಹೊರಟಿರುವುದು ಶೈಕ್ಷಣಿಕವಾಗಿ ಆತ್ಮಹತ್ಯೆ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಜಿಲ್ಲಾ ಖಜಾಂಚಿ ಕೆ.ವಿ.ದೇವೇಂದ್ರ, ಮಂಡಕಳ್ಳಿ ಮಹೇಶ, ಜಿಲ್ಲಾ ಸಂಘಟನಾ ಸಂಚಾಲಕರಾದ ಕುಮಾರ್ ಕರಡೀಪುರ, ಕಿರಂಗೂರು ಸ್ವಾಮಿ, ಚೆಲುವರಾಜು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.